Showing 20 of 2480 posts • Page 69 of 124
ದೇಶದ ಭವಿಷ್ಯ ನಿರ್ಧರಿಸುವ ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಮಾಣದ ದೇಶದಲ್ಲಿ ವರ್ಷ ವರ್ಷ ಹೆಚ್ಚುತ್ತಿದೆ. ವಿದ್ಯಾರ್ಥಿಗಳ ಸಾವಿನ ಪ್ರಮಾಣ ಜನಸಂಖ್ಯಾ ಬೆಳವಣಿಗೆ ದರ ಮತ್ತು ರೈತರ ಆತ್ಮಹತ್ಯೆ ಸಂಖ್ಯೆಯನ್ನೂ ಮೀರಿಸಿದೆ
ಮಹಾರಾಷ್ಟ್ರದ ಸಿಂಧುದುರ್ಗದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ಉರುಳಿ ಬಿದ್ದ ಘಟನೆಗೆ ಪ್ರಧಾನಿ ನರೇಂದ್ರ ಮೋದಿ ಇಂದು ಶುಕ್ರವಾರ ಕ್ಷಮೆಯಾಚಿಸಿದ್ದಾರೆ.
ಜೆಎಂಎಂ ತೊರೆದು ಎರಡು ದಿನಗಳ ನಂತರ ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಚಂಪೈ ಸೊರೆನ್ ಅವರು ಶುಕ್ರವಾರ ಬಿಜೆಪಿ ಸೇರಿದ್ದಾರೆ.
ಮಧ್ಯವರ್ತಿಗಳ ಹಾವಳಿಗೆ ಕಡಿವಾಣ ಹಾಕುವ ಉದ್ದೇಶದಿಂದ ತಿರುಮಲ ತಿರುಪತಿ ದೇವಸ್ಥಾನ (ಟಿಟಿಡಿ) ಟೋಕನ್ ರಹಿತ ಭಕ್ತರಿಗೆ ಲಡ್ಡುಗಳ ಮಾರಾಟಕ್ಕೆ ಆಧಾರ್ ದೃಢೀಕರಣವನ್ನು ಪರಿಚಯಿಸಿದೆ.
ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಇಂದು ಮತ್ತೊಮ್ಮೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು ಅತ್ಯಾಚಾರ ಎಸಗಿದ ಅಪರಾಧಿಗಳಿಗೆ ಕಠಿಣ ಶಿಕ್ಷೆಯನ್ನು ನೀಡುವ ಕೇಂದ್ರ ಕಾನೂನನ್ನು ತರಲು ಒತ್ತಾಯಿಸಿದ್ದಾರೆ.
ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ನೇತೃತ್ವದ ಸರಕಾರ ರಾಜ್ಯದ ದೇವಾಲಯಗಳಲ್ಲಿ ಹಿಂದೂಗಳಿಗೆ ಮಾತ್ರ ಉದ್ಯೋಗ ನೀಡಲಾಗುತ್ತದೆ ಎಂದು ಘೋಷಿಸಿದೆ.
ಗುಜರಾತ್ನಲ್ಲಿ ಭಾರಿ ಮಳೆಯಾಗುತ್ತಿದ್ದು, ಚಂಡಮಾರುತ ಅಪ್ಪಳಿಸುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆಯನ್ನು ನೀಡಿದೆ.
ಹಾಲಿನ ವ್ಯಾಪಾರಿ ಇದ್ದ ಬೈಕ್ಗೆ ಅಪ್ರಾಪ್ತ ಬಾಲಕ ಕಾರನ್ನು ಡಿಕ್ಕಿ ಹೊಡೆಸಿರುವ ಘಟನೆ ಗೋರೆಗಾಂವ್ನಲ್ಲಿ ನಡೆದಿದೆ. ವ್ಯಾಪಾರಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಕಾಡು ಪ್ರಾಣಿಗಳ ಕಳ್ಳ ಬೇಟೆ ಆರೋಪಕ್ಕೆ ಸಂಬಂಧಿಸಿದಂತೆ ಜಾರ್ಖಂಡ್ನ ವಿವಿಧ ಭಾಗಗಳಿಂದ ಸೇನಾ ಸಿಬ್ಬಂದಿ ಸೇರಿದಂತೆ ಎಂಟು ಮಂದಿಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.
ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಈ ಹಿಂದೆ ಪ್ರಕಟಿಸಿದ್ದಂತೆ ಅಸ್ಸಾಂನ ಬಿಜೆಪಿ ಸರ್ಕಾರ ಮುಸ್ಲಿಂ ವಿವಾಹ ಮತ್ತು ವಿಚ್ಛೇದನ ಕಾಯ್ದೆಯನ್ನು ರದ್ದುಗೊಳಿಸಿ,
ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ಸ್ಪೈಸ್ ಜೆಟ್ ವಿಮಾನಯಾನ ಸಂಸ್ಥೆ 150 ಕ್ಯಾಬಿನ್ ಸಿಬ್ಬಂದಿಯನ್ನು ಮೂರು ತಿಂಗಳ ಕಾಲ ಕಡ್ಡಾಯ ರಜೆ ಘೋಷಿಸಿದೆ.
ನಕಲಿ ಎಂಟ್ರಿ ಪಾಸ್ ಬಳಸಿ ಸಂಸತ್ಗೆ ಪ್ರವೇಶಿಸಲು ಯತ್ನಿಸಿದ ಆರೋಪದಡಿಯಲ್ಲಿ ವ್ಯಕ್ತಿಯೊಬ್ಬರನ್ನು ಬಂಧಿಸಿರುವ ಘಟನೆ ನಡೆದಿದೆ.
ಛತ್ತೀಸಗಢದ ನಾರಾಯಣಪುರ ಜಿಲ್ಲೆಯಲ್ಲಿ ಭದ್ರತಾ ಪಡೆಗಳ ಜೊತೆ ಗುರುವಾರ ನಡೆದ ಎನ್ಕೌಂಟರ್ನಲ್ಲಿ ಮೂವರು ಮಹಿಳಾ ನಕ್ಸಲರು ಮೃತಪಟ್ಟಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಸುಪ್ರೀಂ ಕೋರ್ಟ್ನ ಮಾಜಿ ವಕೀಲ, ವಿದ್ವಾಂಸ ಮತ್ತು ರಾಜಕೀಯ ವಿಮರ್ಶಕ ಅಬ್ದುಲ್ ಗಫೂರ್ ನೂರಾನಿ ಮುಂಬೈನಲ್ಲಿ ನಿಧನರಾಗಿದ್ದಾರೆ.
ರಾಹುಲ್ ಗಾಂಧಿ ಎದುರಾಳಿ ಆಟಗಾರರನ್ನು ಸೋಲಿಸಲು ಮಾರ್ಷಲ್ ಆರ್ಟ್ಸ್ ಜಿಯು-ಜಿಟ್ಸು ತಂತ್ರವನ್ನು ಬಳಸುತ್ತಿದ್ದು, ಅವರು ಮಾರ್ಷಲ್ ಆರ್ಟ್ಸ್ ಟ್ರಿಕ್ಸ್ ಕಲಿಯುತ್ತಿರುವುದನ್ನು ಕಾಣಬಹುದು.
ಶಾಲೆಯೊಂದರಲ್ಲಿ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿ ಲೈಂಗಿಕ ದೌರ್ಜನ್ಯವೆಸಗಿದ ಕ್ಲೀನರ್ನನ್ನು ಪೊಲೀಸರು ಬಂಧಿಸಿರುವ ಘಟನೆ ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಾಲೆಯೊಂದರಲ್ಲಿ ನಡೆದಿದೆ.
ರಾಷ್ಟ್ರೀಯ ಕ್ರೀಡಾ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಹಾಕಿ ದಂತಕಥೆ ಮೇಜರ್ ಧ್ಯಾನ್ ಚಂದ್ ಅವರಿಗೆ ಗೌರವ ಸಲ್ಲಿಸಿದ್ದಾರೆ.
ಉತ್ತರಪ್ರದೇಶದಲ್ಲಿ ರೈಲು ಹಳಿಗಳ ಮೇಲೆ ಮರದ ದಿಮ್ಮಿ ಹಾಕಿ ಕೃತ್ಯವೆಸಗಲು ಮುಂದಾದ ರೈತ ಮುಖಂಡನ ಪುತ್ರ ಹಾಗೂ ಸ್ನೇಹಿತನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಪಾಸ್ಪೋರ್ಟ್ ಸೇವೆಯಲ್ಲಿ ವ್ಯತ್ಯಯ ಎದುರಾಗಿದ್ದು, ಹಲವರು ಸಮಸ್ಯೆಗೆ ಸಿಲುಕಿದ್ದಾರೆ. ಆನ್ಲೈನ್ ಪಾಸ್ಪೋರ್ಟ್ ಸೇವಾ ಪೋರ್ಟಲ್ ತಾತ್ಕಾಲಿಕವಾಗಿ ಸ್ಥಗಿತಗೊಂಡಿದೆ.
ಬಾಂಗ್ಲಾದೇಶದಲ್ಲಿ ಶೇಖ್ ಹಸೀನಾ ಸರ್ಕಾರದ ಪತನದ ಬಳಿಕ ಓಡಿ ಹೋಗಿದ್ದ ಅವಾಮಿ ಲೀಗ್ನ ನಾಯಕ ಶವವಾಗಿ ಪತ್ತೆಯಾಗಿದ್ದಾರೆ. ಬಾಂಗ್ಲಾದೇಶದ ಗಡಿಯಲ್ಲಿರುವ ಮೇಘಾಲಯದ ಜೈನ್ತಿಯಾ ಹಿಲ್ಸ್ ಜಿಲ್ಲೆಯಲ್ಲಿ ಅವಾಮಿ ಲೀಗ್ ನಾಯಕನ ಕೊಳೆತ ಶವ ಪತ್ತೆಯಾಗಿದೆ.