Showing 20 of 2387 posts • Page 72 of 120
ದೆಹಲಿ ರೈಲ್ವೆ ವಿಭಾಗವು ಸೊಳ್ಳೆ ನಿಯಂತ್ರಣಕ್ಕಾಗಿ ವಿಶೇಷ ರೈಲೊಂದನ್ನು ಆರಂಭಿಸಿದೆ. ‘ಮಸ್ಕಿಟೋ ಟರ್ಮಿನೇಟರ್ ಆನ್ ವೀಲ್ಸ್’ ಎಂಬ ಸ್ಪೆಷಲ್ ರೈಲನ್ನು ಶುಕ್ರವಾರದಿಂದ ಆರಂಭಿಸಲಾಗಿದೆ ಎಂದು ತಿಳಿದುಬಂದಿದೆ.
ಬಡವರಿಗೆ 5 ರೂ.ಗೆ ಅನ್ನ ನೀಡುವ ಅನ್ನ ಕ್ಯಾಂಟೀನ್ಗಳು ಆಂಧ್ರಪ್ರದೇಶದಲ್ಲಿ ಮತ್ತೆ ಪುನಾರಂಭಗೊಂಡಿದೆ. ಈಗ ಮತ್ತೆ ಅಧಿಕಾರದಲ್ಲಿರುವ ಟಿಡಿಪಿ ಈ ಕ್ಯಾಂಟೀನ್ಗಳನ್ನು ಮರುಪ್ರಾರಂಭಿಸಿದೆ.
ಇಂದು ಸಬರ್ಮತಿ ಎಕ್ಸ್ಪ್ರೆಸ್ ರೈಲಿನ ಕನಿಷ್ಠ 20 ಬೋಗಿಳು ಹಳಿ ತಪ್ಪಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾರಿಗೂ ಯಾವುದೇ ರೀತಿಯ ಗಾಯಗಳಾಗಿಲ್ಲ ಎಂದು ಮೂಲಗಳು ತಿಳಿಸಿವೆ.
ಅಟಲ್ ಸೇತುವೆಯಿಂದ ಜಿಗಿದು ಮಹಿಳೆ ಆತ್ಮಹತ್ಯೆ ಮಾಡಿಕೊಳ್ಳಲು ಪ್ರಯತ್ನಿಸುವಾಗ ಅದೃಷ್ಟವಶಾತ್ ಕ್ಯಾಬ್ ಡ್ರೈವರ್ ಹಾಗೂ ಟ್ರಾಫಿಕ್ ಪೊಲೀಸರ ಹರಸಾಹಸದಿಂದ ಬದುಕುಳಿಸಿರುವ ಘಟನೆ ನಡೆದಿದೆ.
ವಿದ್ಯಾರ್ಥಿಗೆ ಸಹಪಾಠಿಯೊಬ್ಬ ಶಾಲೆಯಲ್ಲೇ ಚಾಕುವಿನಿಂದ ಇರಿದ ಘಟನೆ ರಾಜಸ್ಥಾನದ ಉದಯಪುರದ ಮಧುಬನ್ ಪ್ರದೇಶದಲ್ಲಿ ನಡೆದಿದೆ.
ಕ್ಯಾಬಿನೆಟ್ ನೇಮಕಾತಿ ಸಮಿತಿಯು ಅಧಿಕಾರಶಾಹಿ ಮಟ್ಟದಲ್ಲಿ ಪ್ರಮುಖ ಪುನರ್ರಚನೆಯನ್ನು ಮಾಡಿದೆ. ಹೊಸ ರಕ್ಷಣಾ ಕಾರ್ಯದರ್ಶಿಯಾಗಿ ಆರ್ಕೆ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ.
ಕೊಲ್ಕತ್ತಾದಲ್ಲಿ ನಡೆದ ವೈದ್ಯೆಯ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಇಡೀ ದೇಶವನ್ನೇ ತಲೆ ತಗ್ಗಿಸುವಂತೆ ಮಾಡಿದೆ. ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ರಾಜೀನಾಮೆಗೆ ಭಾರತೀಯ ಜನತಾ ಪಕ್ಷ ಇಂದು ಒತ್ತಾಯಿಸಿದೆ.
ದೇಶಾದ್ಯಂತ ನಾಳೆ ಸರ್ಕಾರಿ, ಖಾಸಗಿ ಆಸ್ಪತ್ರೆಗಳ ಸೇವೆಯಲ್ಲಿ ವ್ಯತ್ಯಯವಾಗಲಿದೆ. ನಾಳೆ ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆವರೆಗೆ OPD ಬಂದ್ ಮಾಡಲು ನಿರ್ಧಾರ ಮಾಡಲಾಗಿದೆ.
ಪ್ರಧಾನಿ ಮೋದಿಗೆ ಬಾಂಗ್ಲಾದೇಶ ಸರ್ಕಾರದ ಹಂಗಾಮಿ ಮುಖ್ಯ ಸಲಹೆಗಾರ ಮೊಹಮ್ಮದ್ ಯೂನಸ್ ಕರೆ ಮಾಡಿ ಬಾಂಗ್ಲಾದೇಶದ ಪ್ರಸ್ತುತ ಸ್ಥಿತಿಗತಿ ಬಗ್ಗೆ ಚರ್ಚೆ ನಡೆಸಿದ್ದಾರೆ.
ಕರ್ನಾಟಕ ಸೇರಿದಂತೆ ಯಾವುದೇ ರಾಜ್ಯದಲ್ಲಿ ಉಪ ಚುನಾವಣೆ ಮಾಡದೇ ಇರಲು ಕೇಂದ್ರ ಚುನಾವಣಾ ಆಯೋಗ ನಿರ್ಧರಿಸಿದೆ. ಇಂದು ಜಮ್ಮು ಕಾಶ್ಮೀರ ಮತ್ತು ಹರ್ಯಾಣ ರಾಜ್ಯಗಳ ಚುನಾವಣೆ ದಿನಾಂಕವನ್ನು ಪ್ರಕಟಿಸಿದರು.
ಜಮ್ಮು-ಕಾಶ್ಮೀರದ ವಿಧಾನಸಭಾ ಚುನಾವಣೆ ದಿನಾಂಕವನ್ನು ಘೋಷಣೆ ಮಾಡಲಾಗಿದೆ. 90 ಕ್ಷೇತ್ರಗಳಿಗೆ 3 ಹಂತಗಳಲ್ಲಿ ಮತದಾನವನ್ನು ನಡೆಸುತ್ತಿರುವುದಾಗಿ ಚುನಾವಣೆಯನ್ನು ಕೇಂದ್ರ ಚುನಾವಣಾ ಆಯೋಗದಿಂದ ಘೋಷಣೆ ಮಾಡಲಾಗಿದೆ.
ಭಾರತದ ಬೆಳವಣಿಗೆಯು ನಿರೀಕ್ಷೆಗಿಂತ ಉತ್ತಮವಾಗಿದೆ. 2027 ರ ವೇಳೆಗೆ ಮೂರನೇ ಅತಿದೊಡ್ಡ ಆರ್ಥಿಕತೆಯಾಗುವ ಭರವಸೆ ಇದೆ ಎಂದು ಅಂತಾರಾಷ್ಟ್ರೀಯ ಹಣಕಾಸು ನಿಧಿಯ ಉಪ ವ್ಯವಸ್ಥಾಪಕ ನಿರ್ದೇಶಕಿ ಡಾ. ಗೀತಾ ಗೋಪಿನಾಥ್ ಹೇಳಿದ್ದಾರೆ.
ವೈದ್ಯೆಯ ಅತ್ಯಾಚಾರ ಮತ್ತು ಕೊಲೆಯನ್ನು ವಿರೋಧಿಸಿ ಆಗಸ್ಟ್ 14 ರ ಮಧ್ಯರಾತ್ರಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಕೋಲ್ಕತ್ತಾದ ಆಸ್ಪತ್ರೆಯ ಆವರಣದಲ್ಲಿ ನಡೆದ ವಿಧ್ವಂಸಕ ಕೃತ್ಯದ ಬಗ್ಗೆ ಕಲ್ಕತ್ತಾ ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ.
ಕೋಲ್ಕತ್ತಾ ವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ. ಈ ಪ್ರಕರಣದ ಬಗ್ಗೆ ದಿನದಿಂದ ದಿನಕ್ಕೆ ಸ್ಪೋಟಕ ಮಾಹಿತಿಗಳು ಲಭ್ಯವಾಗಿದೆ.
ಭಾರತದ ಚುನಾವಣಾ ಆಯೋಗವು ಜಮ್ಮು ಮತ್ತು ಕಾಶ್ಮೀರ, ಹರ್ಯಾಣ, ಮಹಾರಾಷ್ಟ್ರ ಹಾಗೂ ಜಾರ್ಖಂಡ್ ವಿಧಾನಸಭಾ ಚುನಾವಣೆಯ ವೇಳಾಪಟ್ಟಿಯನ್ನು ಪ್ರಕಟಿಸಲಿದೆ. ಮಧ್ಯಾಹ್ನ 3 ಗಂಟೆಗೆ ಚುನಾವಣಾ ದಿನಾಂಕ ಘೋಷಣೆಯಾಗಲಿದೆ.
ಖೈಬರ್ ಪಖ್ತುನ್ಖ್ವಾ ಪ್ರಾಂತ್ಯದಲ್ಲಿ ನಡೆದ ಎನ್ಕೌಂಟರ್ನಲ್ಲಿ ತೆಹ್ರೀಕ್-ಇ-ತಾಲಿಬಾನ್ ಪಾಕಿಸ್ತಾನಕ್ಕೆ ಸೇರಿದ ಏಳು ಭಯೋತ್ಪಾದಕರನ್ನು ಭದ್ರತಾ ಪಡೆಗಳು ಹತ್ಯೆಗೈದಿವೆ ಎಂದು ಸೇನೆ ಗುರುವಾರ ತಿಳಿಸಿದೆ.
ದೀರ್ಘ-ಶ್ರೇಣಿಯ ಅಗ್ನಿ ಕ್ಷಿಪಣಿಯ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸಿ ಏರೋಸ್ಪೇಸ್ ವಿಜ್ಞಾನಿ ಡಾ.ರಾಮ್ ನರೈನ್ ಅಗರ್ವಾಲ್ (83) ನಿಧನರಾಗಿದ್ದಾರೆ.
ಸ್ವಾತಂತ್ರೋತ್ಸವ ದಿನದಂದು ಭಾರತೀಯ ಮೆಡಿಕಲ್ ಅಸೋಸಿಯೇಷನ್ ಮಹತ್ವದ ನಿರ್ಧಾರ ಪ್ರಕಟಿಸಿದ್ದು, ಕೋಲ್ಕತ್ತಾದ ವೈದ್ಯಕೀಯ ಕಾಲೇಜಿಯಲ್ಲಿ ಟ್ರೈನಿ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಕೇಸ್ನ
ವಾರಾಣಸಿಯಿಂದ ಮುಂಬೈಗೆ ಹಾರಾಟ ನಡೆಸುತ್ತಿದ್ದ ಅಲಸ್ಕ ವಿಮಾನ ಪ್ರಯಾಣಿಕರೊಬ್ಬರು ತೀವ್ರ ಸ್ವಸ್ಥಗೊಂಡ ಕಾರಣ ತುರ್ತು ಭೂಸ್ಪರ್ಶ ಮಾಡಿದ ಘಟನೆ ಭೋಪಾಲ್ ನ ರಾಜಾ ಭೋಜ್
ಖ್ಯಾತ ಆಸ್ಟ್ರೀಯಾದ ಬಿಲಿಯನೇರ್ ಉದ್ಯಮಿ ರಿಚರ್ಡ್ ಲುಗ್ನರ್ ತಮ್ಮ 91 ನೇ ವಯಸ್ಸಿನಲ್ಲಿ ನಿಧನರಾದರು. ಲುಗ್ನರ್ ಇತ್ತೀಚಿನ ತಿಂಗಳುಗಳಲ್ಲಿ ಹಲವಾರು ಆರೋಗ್ಯ ಸಮಸ್ಯೆಗಳೊಂದಿಗೆ ನರಳುತ್ತಿದ್ದರು