Showing 20 of 2480 posts • Page 73 of 124
ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ ಪ್ರಕರಣದ ಪ್ರಮುಖ ಆರೋಪಿ ಸಂಜಯ್ ರಾಯ್ ಎಂಬಾತನನ್ನು ಇಲ್ಲಿನ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ತ್ರಿಪುರಾದಲ್ಲಿ ಕಳೆದ ಕೆಲವು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದ ಉಂಟಾದ ಪ್ರವಾಹದಲ್ಲಿ ಕನಿಷ್ಠ 22 ಜನರು ಸಾವಿಗೀಡಾಗಿದ್ದು, ಇಬ್ಬರು ನಾಪತ್ತೆಯಾಗಿದ್ದಾರೆ.
40 ಭಾರತೀಯರನ್ನು ಹೊತ್ತೊಯ್ಯುತ್ತಿದ್ದ ಬಸ್ ನದಿಗೆ ಬಿದ್ದಿರುವ ಭೀಕರ ಘಟನೆ ನೇಪಾಳದಲ್ಲಿ ನಡೆದಿದೆ. ರಕ್ಷಣಾ ಕಾರ್ಯ ನಡೆಯುತ್ತಿದ್ದು, ಹಲವು ಮಂದಿ ಸಾವನ್ನಪ್ಪಿರುವ ಸಾಧ್ಯತೆ ಇದೆ.
ಸಿಬಿಐ ಬಂಧನ ಪ್ರಶ್ನಿಸಿ, ಜಾಮೀನು ಕೋರಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ಸೆಪ್ಟೆಂಬರ್ 5ಕ್ಕೆ ಮುಂದೂಡಿದೆ.
ಸರ್ಕಾರಿ ಅಧಿಕಾರಿಗಳು ತಮ್ಮ ಚರ ಮತ್ತು ಸ್ಥಿರ ಆಸ್ತಿಗಳ ವಿವರವನ್ನು ಮಾನವ ಸಂಪದಾ ಎನ್ನುವ ಸರ್ಕಾರಿ ಪೋರ್ಟಲ್ನಲ್ಲಿ ಆಗಸ್ಟ್ 31 ರೊಳಗೆ ಘೋಷಣೆ ಮಾಡಿಲ್ಲ ಎಂದರೆ ಈ ತಿಂಗಳ ಸಂಬಳ ಕಳೆದುಕೊಳ್ಳುತ್ತಾರೆ.
ಭಾರತೀಯರು ಶ್ರೀಲಂಕಾಗೆ ವೀಸಾವಿಲ್ಲದೆ ಪ್ರಯಾಣಿಸಬಹುದಾಗಿದೆ. ಈ ಉಚಿತ ವೀಸಾಗಳು ಅಕ್ಟೋಬರ್ 1 ರಿಂದ ಲಭ್ಯವಿರುತ್ತವೆ. ಆಸ್ಟ್ರೇಲಿಯಾ ಮತ್ತು ಜಪಾನ್ ಸೇರಿದಂತೆ ಪ್ರಮುಖ ದೇಶಗಳು ಪಟ್ಟಿಯಲ್ಲಿವೆ.
ಕೇಂದ್ರ ಸರ್ಕಾರ 156 ಫಿಕ್ಸೆಡ್ ಡೋಸ್ ಕಾಂಬಿನೇಷನ್ ಔಷಧಿಗಳನ್ನು ನಿಷೇಧಿಸಿದೆ. ಜ್ವರ, ಶೀತ, ಅಲರ್ಜಿಗಳಿಗೆ ಬಳಸುವಂತಹ ಬ್ಯಾಕ್ಟೀರಿಯಾ ವಿರೋಧಿ ಔಷಧಿಗಳು ಇವುಗಳಲ್ಲಿ ಸೇರಿದೆ.
ಬುಡಕಟ್ಟು ಮಹಿಳೆ ಮೇಲೆ ಛತ್ತೀಸ್ಗಢದಲ್ಲಿ ಸಾಮೂಹಿಕ ಅತ್ಯಾಚಾರ ನಡೆದಿದ್ದು, ಪ್ರಕರಣದಲ್ಲಿ 6 ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ದೆಹಲಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಅಲ್ಖೈದಾ ಉಗ್ರ ಸಂಘಟನೆ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ 11 ಶಂಕಿತ ವ್ಯಕ್ತಿಗಳನ್ನು ಅರೆಸ್ಟ್ ಮಾಡಿದ್ದಾರೆ.
ಜೈಪುರದಲ್ಲಿ ಖೋಟಾ ನೋಟು ಹಾವಳಿ ಹೆಚ್ಚಾಗಿರುವ ಹಿನ್ನಲೆಯಲ್ಲಿ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ. ಅದರೂ ಖದೀಮರು ನಿರಾಯಾಸವಾಗಿ ಖೋಟಾ ನೋಡು ವ್ಯವಹಾರ ನಡೆಸುತ್ತಿದ್ದಾರೆ.
ಕೋಲ್ಕತ್ತಾ ಪ್ರಕರಣದ ಕುರಿತು ಸುಪ್ರೀಂಕೋರ್ಟ್ನಲ್ಲಿ ಗುರುವಾರ ನಡೆದ ವಿಚಾರಣೆಯ ಸಂದರ್ಭದಲ್ಲಿ ಕಪಿಲ್ ಸಿಬಲ್ ನಕ್ಕಿದ್ದು, ಸಾಲಿಸಿಟರ್ ಜನರಲ್ (SG) ತುಷಾರ್ ಮೆಹ್ತಾ ಇದಕ್ಕೆ ಕಟು ಪ್ರತಿಕ್ರಿಯೆ ನೀಡಿದ್ದಾರೆ.
ಟ್ರೈನಿ ವೈದ್ಯೆಯ ಅತ್ಯಾಚಾರ ಮತ್ತು ಹತ್ಯೆಗೆ ಪ್ರಕರಣದ ಬಗ್ಗೆ ಸುಪ್ರೀಂಕೋರ್ಟ್ ಗುರುವಾರ ವಿಚಾರಣೆ ನಡೆಸಿದ. ವಿಚಾರಣೆ ವೇಳೆ ಸುಪ್ರೀಂಕೋರ್ಟ್, ಮುಷ್ಕರ ನಿರತ ವೈದ್ಯರು ಕರ್ತವ್ಯಕ್ಕೆ ಮರಳುವಂತೆ ಮನವಿ ಮಾಡಿದೆ.
ಪಶ್ಚಿಮ ಬಂಗಾಳದ ಕೊಲ್ಕತ್ತಾ ವೈದ್ಯೆ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಮತಾ ಬ್ಯಾನರ್ಜಿ ಇಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.
ಶ್ರೀ ಗುರು ರಾಘವೇಂದ್ರ ಸ್ವಾಮಿಗಳ 353 ನೇ ಆರಾಧನಾ ಮಹೋತ್ಸವದ ನಿಮಿತ್ತ ಇಂದು ಉತ್ತರಾಧನೆ ನಡೆಯಿತು. ಶ್ರೀಗಳು, ಅರ್ಚಕರು ಬಣ್ಣದೋಕುಳಿಯಲ್ಲಿ ಮಿಂದೆದ್ದು ವಸಂತೋತ್ಸವ ಆಚರಿಸಿದರು.
ಲಡಾಖ್ನ ಲೇಹ್ ಜಿಲ್ಲೆಯಲ್ಲಿ ಬಸ್ಸೊಂದು ರಸ್ತೆಯಿಂದ ಸ್ಕಿಡ್ ಆಗಿ 200 ಅಡಿ ಆಳದ ಕಮರಿಗೆ ಬಿದ್ದ ಪರಿಣಾಮ 6 ಜನರು ಸಾವನ್ನಪ್ಪಿದ್ದಾರೆ ಮತ್ತು 22 ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅಯೋಧ್ಯೆ ಜಿಲ್ಲಾಡಳಿತವು ಎಸ್ಪಿ ನಾಯಕ ಮತ್ತು ಅಯೋಧ್ಯೆ ಅತ್ಯಾಚಾರದ ಆರೋಪಿ ಮೊಯಿದ್ ಖಾನ್ ವಿರುದ್ಧ ಮತ್ತಷ್ಟು ಕಠಿಣ ಕ್ರಮ ಕೈಗೊಂಡಿದೆ.
ಮುಂಬೈನಿಂದ ಹೊರಟಿದ್ದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದ ಹಿನ್ನೆಲೆಯಲ್ಲಿ ಇಂದು ತಿರುವನಂತಪುರಂ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಂಪೂರ್ಣ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ ಎಂದು ವಿಮಾನ ನಿಲ್ದಾಣದ ಮೂಲಗಳು ತಿಳಿಸಿವೆ.
ಭಾರತ್ ಬಂದ್ ವೇಳೆ ಮಕ್ಕಳಿದ್ದ ಶಾಲಾ ಬಸ್ಸಿಗೆ ಬೆಂಕಿ ಹಚ್ಚಲು ಮುಂದಾಗಿದ್ದ ಘಟನೆ ಬಿಹಾರದ ಗೋಪಾಲ್ಗಂಜ್ನಲ್ಲಿ ನಡೆದಿದೆ.
ರಾಸಾಯನಿಕ ಕಾರ್ಖಾನೆಯೊಂದರಲ್ಲಿ ರಿಯಾಕ್ಟರ್ ಸ್ಫೋಟದ ಪ್ರಕರಣದಲ್ಲಿ 18 ಮಂದಿ ಕಾರ್ಮಿಕರು ಸಾವನ್ನಪ್ಪಿದ್ದು, ಸುಮಾರು 40ಕ್ಕೂ ಹೆಚ್ಚು ಕಾರ್ಮಿಕರು ಗಾಯಗೊಂಡಿದ್ದಾರೆ.
ಏಳು ತಿಂಗಳ ಮಗುವಿನ ಹೊಟ್ಟೆಯಲ್ಲಿ ಮಾನವನ ಭ್ರೂಣ ಪತ್ತೆಯಾಗಿರುವ ಅಪರೂಪದ ಘಟನೆ ಉತ್ತರಾಖಂಡದ ಡೆಹ್ರಾಡೂನ್ ನಲ್ಲಿ ನಡೆದಿದೆ.