Showing 20 of 2480 posts • Page 79 of 124
ಕೋಲ್ಕತ್ತಾದಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ನಡೆದ ಅತ್ಯಾಚಾರ ಪ್ರಕರಣದ ಆರೋಪಿ ತನ್ನ ಪತ್ನಿ, ತಂಗಿ, ತಾಯಿಯ ಮೇಲೂ ಹಲ್ಲೆ ನಡೆಸಿದ್ದ ಎನ್ನುವ ವಿಚಾರ ಬೆಳಕಿಗೆ ಬಂದಿದೆ.
ಭಾರತವು ತನ್ನ 78ನೇ ಸ್ವಾತಂತ್ರ್ಯದಿನವನ್ನು ಆಗಸ್ಟ್ 15ರಂದು ದೆಹಲಿಯ ಕೆಂಪುಕೋಟೆಯಲ್ಲಿ ಸಾಂಪ್ರದಾಯಿಕ ಸಮಾರಂಭದೊಂದಿಗೆ ಆಚರಿಸಲು ಸಜ್ಜಾಗಿದೆ. ಪ್ರಧಾನಿ ನರೇಂದ್ರ ಮೋದಿಯವರು ಬೆಳಗ್ಗೆ 7.30ಕ್ಕೆ ರಾಷ್ಟ್ರಧ್ವಜಾರೋಹಣ ನೆರವೇರಿಸಲಿದ್ದಾರೆ
ಮಾಲ್ಡೀವ್ಸ್ ಸೋಮವಾರ 28 ದ್ವೀಪಗಳ ನಿಯಂತ್ರಣವನ್ನು ಭಾರತಕ್ಕೆ ಹಸ್ತಾಂತರಿಸಿದೆ. ಇದು ಮಹತ್ವದ ರಾಜತಾಂತ್ರಿಕ ಬದಲಾವಣೆ ಮತ್ತು ಚೀನಾದೊಂದಿಗಿನ ಪ್ರಾದೇಶಿಕ ಪೈಪೋಟಿಯಲ್ಲಿ ಭಾರತಕ್ಕೆ ವಿಜಯವನ್ನು ಸೂಚಿಸುತ್ತದೆ.
ಸಿಟಿ ವಸತಿ ಯೋಜನೆ ಹಗರಣಕ್ಕೆ ಸಂಬಂಧಿಸಿದಂತೆ ಪಾಕಿಸ್ತಾನದ ಮಾಜಿ ಗುಪ್ತಚರ ಮುಖ್ಯಸ್ಥ ಫೈಜ್ ಹಮೀದ್ ಅವರನ್ನು ಮಿಲಿಟರಿ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ ಮತ್ತು ಅವರ ಕೋರ್ಟ್ ಮಾರ್ಷಲ್ ಪ್ರಕ್ರಿಯೆಯು
ಪಿಎಂ ಸೂರ್ಯ ಘರ್ ಯೋಜನೆಯಡಿ ಪ್ರತಿ ಜಿಲ್ಲೆಗೊಂದು ‘ಮಾದರಿ ಸೌರ ಗ್ರಾಮ’ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಕೇಂದ್ರ ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ್ ಜೋಶಿ ತಿಳಿಸಿದ್ದಾರೆ.
ಮುಖ್ಯ ಚುನಾವಣ ಆಯುಕ್ತ ರಾಜೀವ್ ಕುಮಾರ್ ನೇತೃತ್ವದ ಚುನಾವಣ ಆಯೋಗದ ತಂಡ ಎರಡು ದಿನಗಳ ಭೇಟಿಗಾಗಿ ಸೋಮವಾರ(ಆಗಸ್ಟ್ 12) ಹರ್ಯಾಣಕ್ಕೆ ಆಗಮಿಸಿದ್ದು, ರಾಜ್ಯದಲ್ಲಿನ ವಿಧಾನಸಭಾ
ಕರ್ನಾಟಕ ರಾಜ್ಯದಲ್ಲಿಂದ ನೆರೆಯ ಗೋವಾ ರಾಜ್ಯಕ್ಕೆ ರೈಲು ಸಂಚಾರ ಕಲ್ಪಿಸುವ ಮಾರ್ಗದಲ್ಲಿ ಗೂಡ್ಸ್ ರೈಲು ದೂಧ್ ಸಾಗರ ಬಳಿ ಹಳಿ ತಪ್ಪಿದೆ. ರೈಲು ಹಳಿಯಿಂದ ಗೂಡ್ಸ್ ರೈಲು ತೆರವು ಕಾರ್ಯಾಚರಣೆ
ಫುಟ್ಬಾಲ್ ಪಂದ್ಯದಲ್ಲಿ ಉತ್ತಮ ಪ್ರದರ್ಶನ ನೀಡಿಲ್ಲವೆಂದು ದೈಹಿಕ ಶಿಕ್ಷಕರೊಬ್ಬರು ವಿದ್ಯಾರ್ಥಿಗಳನ್ನು ಥಳಿಸಿದ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ.
ಬಾಂಗ್ಲಾದಲ್ಲಿ ನಡೆಯುತ್ತಿರುವ ಅತ್ಯಾಚಾದಿಂದ ಜನ ಕಂಗಾಲಾಗಿದ್ದಾರೆ. ಶೇಖ್ ಹಸೀನಾ ಅವರು ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿ ಭಾರತಕ್ಕೆ ಪಲಾಯನ ಮಾಡಿದ ನಂತರವೂ ಬಾಂಗ್ಲಾದೇಶದಲ್ಲಿ ಗಲಭೆ ಇನ್ನೂ
ಅದಾನಿ ಗ್ರೂಪ್ ಹಗರಣದಲ್ಲಿ ಸೆಬಿ ಅಧ್ಯಕ್ಷೆ ಮಾಧವಿ ಬುಚ್ ಕೂಡಾ ಭಾಗಿಯಾಗಿರುವ ಬಗ್ಗೆ ಹಿಂಡನ್ಬರ್ಗ್ ವರದಿ ಬೆನ್ನಲ್ಲೇ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಸಂಸದೆ, ನ
ಇತ್ತೀಚೆಗೆ ಐಎಎಸ್ ಹುದ್ದೆಯಿಂದ ವಜಾಗೊಂಡಿರುವ ಪೂಜಾ ಖೇಡ್ಕರ್ನ ಅವರನ್ನು ಆ.21 ವರೆಗೂ ಬಂಧಿಸದಂತೆ ದೆಹಲಿ ಹೈಕೋರ್ಟ್ ಪೊಲೀಸರಿಗೆ ನಿರ್ದೇಶನ ನೀಡಿದೆ.
ಹೊಸ ಮದ್ಯ ನೀತಿಗೆ ಸಂಬಂಧಿಸಿದ ಭ್ರಷ್ಟಾಚಾರ ಪ್ರಕರಣದಲ್ಲಿ ಕೇಂದ್ರೀಯ ತನಿಖಾ ದಳ ಬಂಧನವನ್ನು ಪ್ರಶ್ನಿಸಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಸೋಮವಾರ ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದಾರೆ.
ಹಿಂಸಾಚಾರ ಪೀಡಿತ ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಹಾಗೂ ಅವರ ಆಸ್ತಿ-ಪಾಸ್ತಿ, ಮಂದಿರಗಳ ಮೇಲಿನ ದಾಳಿ ಕುರಿತು ಬಿಜೆಪಿ ಸರ್ಕಾರ ರಕ್ಷಣೆಗೆ ನಿಲ್ಲದೆ ಸುಮ್ಮನಿದೆ ಎಂದು ಮುತಾಲಿಕ್ ಕಿಡಿಕಾರಿದ್ದಾರೆ.
ಕೋಲ್ಕತ್ತಾದ ಆರ್ಜಿ ಕಾರ್ ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲರಾದ ಸಂದೀಪ್ ಘೋಷ್ ರಾಜೀನಾಮೆ ನೀಡಿದ್ದಾರೆ.ಈ ವೈದ್ಯಕೀಯ ಕಾಲೇಜಿನಲ್ಲಿ ಪಿಜಿ ವಿದ್ಯಾರ್ಥಿನಿಯೊಬ್ಬರು ಕೊಲೆಯಾಗಿದ್ದರು.
ಚೆನ್ನೈ-ತಿರುಪತಿ ಹೆದ್ದಾರಿಯಲ್ಲಿ ಪ್ರಯಾಣಿಸುತ್ತಿದ್ದಾಗ ಟ್ರಕ್ ಕಾರಿಗೆ ಡಿಕ್ಕಿ ಹೊಡೆದ ಘಟನೆ ತಮಿಳುನಾಡಿನ ತಿರುವಳ್ಳೂರು ಜಿಲ್ಲೆಯ ತಿರುತ್ತಣಿಯಲ್ಲಿ ನಡೆದಿದೆ.
ಪಕ್ಷಕ್ಕೆ ಸೇರ್ಪಡೆಯಾದ ಕೇವಲ ಆರು ಗಂಟೆಗಳಲ್ಲಿ ದಿಲ್ಲಿಯ ಮಾಜಿ ಸಚಿವ ಸಂದೀಪ್ ಕುಮಾರ್ರನ್ನು ಹರ್ಯಾಣ ಬಿಜೆಪಿ ಪಕ್ಷದಿಂದ ಉಚ್ಚಾಟನೆ ಮಾಡಿರುವಂತಹ ಅಪರೂಪದ ಘಟನೆ ವರದಿಯಾಗಿದೆ.
ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಕಿರಿಯ ವೈದ್ಯರ ಹತ್ಯೆಯನ್ನು ವಿರೋಧಿಸಿ ಫೆಡರೇಶನ್ ಆಫ್ ರೆಸಿಡೆಂಟ್ ಡಾಕ್ಟರ್ಸ್ ಅಸೋಸಿಯೇಷನ್ ಸೋಮವಾರ ದೇಶಾದ್ಯಂತ ಕೆಲವು ವೈದ್ಯಕೀಯ ಸೇವೆಗಳನ್ನು ಸ್ಥಗಿತಗೊಳಿಸುವುದಾಗಿ ಘೋಷಿಸಿದೆ.
ಭಾರೀ ಮಳೆಗೆ ಜನ ಜೀವನ ಅಸ್ತವ್ಯಸ್ತವಾಗಿದ್ದು, ಹಲವೆಡೆ ಅನಾಹುತಗಳು ಸಂಭವಿಸುತ್ತಿವೆ. ರಾಜಸ್ಥಾನದಲ್ಲಿ ಕಳೆದ 24 ಗಂಟೆಗಳಲ್ಲಿ ಸುರಿದ ಭಾರೀ ಮಳೆಗೆ ಕನಿಷ್ಠ 19 ಜನರು ಸಾವನ್ನಪ್ಪಿದ್ದಾರೆ.
ಪಂಜಾಬ್ನಲ್ಲಿ ಭಾರೀ ಮಳೆಗೆ ಪ್ರವಾಹ ಸ್ಥಿತಿ ನಿರ್ಮಾಣವಾಗಿದ್ದು, ಹಿಮಾಚಲ ಪ್ರದೇಶದ ಒಂದೇ ಕುಟುಂಬದ ಎಂಟು ಜನ ಸೇರಿದಂತೆ ಒಂಬತ್ತು ಮಂದಿ ಕೊಚ್ಚಿ ಹೋಗಿದ್ದಾರೆ.
ಇಂದು ಬೆಳಗ್ಗೆ ಸಿದ್ಧೇಶ್ವರನಾಥ ದೇವಸ್ಥಾನದಲ್ಲಿ ಕಾಲ್ತುಳಿತ ಸಂಭವಿಸಿದೆ. ಕಾಲ್ತುಳಿತದಿಂದಾಗಿ 3 ಮಹಿಳೆಯರು ಸೇರಿ ಒಟ್ಟು 7 ಜನರು ಸಾವನ್ನಪ್ಪಿದ್ದಾರೆ.