Showing 20 of 2382 posts • Page 8 of 120
ʼಆಪರೇಷನ್ ತೂಫಾನ್’ ಅಂಗವಾಗಿ ಪೊಲೀಸರು ದಾಳಿ ನಡೆಸಿ ಕಾರಿನಲ್ಲಿ ಸಾಗಿಸುತ್ತಿದ್ದ 21,873 ಪ್ಯಾಕೆಟ್ ನಿಷೇಧಿತ ತಂಬಾಕು ಉತ್ಪನ್ನ ಸಹಿತ ಓರ್ವನನ್ನು ಬಂಧಿಸಲಾದ ಘಟನೆ ಮಧೂರು ಪಟ್ಲದಲ್ಲಿ ನಡೆದಿದೆ.
ಕೇರಳಂನಲ್ಲಿ ಜನವರಿಯಿಂದ ಈವರೆಗೆ ಶಿಗೆಲ್ಲಾ ಸೋಂಕಿನ 146 ಪ್ರಕರಣಗಳು ದೃಢಪಟ್ಟಿವೆ ಎಂದು ಆರೋಗ್ಯ ಸಚಿವ ಕೆ. ಮುರಳೀಧರನ್ ತಿಳಿಸಿದ್ದಾರೆ.
ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆಯನ್ನು ಸಿಎಂ ಸಿ. ಜೋಸೆಫ್ ವಿಜಯ್ ನೀಡಿದ್ದಾರೆ.
ಮೆಡಿಕಲ್ ಶಾಪ್ಗಳಲ್ಲಿ ಇನ್ಮುಂದೆ ಸಾರ್ವಜನಿಕರು ನೇರವಾಗಿ ಸಿರಪ್ ಖರೀದಿ ಮಾಡುವಂತಿಲ್ಲ ಎಂದು ಕೇಂದ್ರ ಆರೋಗ್ಯ ಇಲಾಖೆ ಆದೇಶ ಹೊರಡಿಸಿದೆ.
ಕೇಂದ್ರ ಸರ್ಕಾರ ಭಾರತದಲ್ಲಿ ಟೆಲಿಗ್ರಾಮ್ ಆ್ಯಪ್ ಅನ್ನು ನಿಷೇಧ ಮಾಡಿ ಆದೇಶ ಹೊರಡಿಸಿದೆ. ಅಸಲಿಗೆ, ದೇಶದಲ್ಲಿ ಜೂನ್ 22ರವರೆಗೆ ಭಾರತದಲ್ಲಿ ನೀಟ್ ಮರು ಪರೀಕ್ಷೆ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಯಾವುದೇ ರೀತಿಯಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ ಸೇರಿದಂತೆ ನೀಟ್ ಪರೀಕ್ಷೆಗೆ ತೊಂದರೆ ತರುವಂತಹ ಕೃತ್ಯಗಳನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಇಂತಹ ಮಹತ್ವದ ನಿರ್ಧಾರ ಕೈಗೊಂಡಿದೆ.
ಕೇರಳದ ಮುಖ್ಯಮಂತ್ರಿ ವಿ.ಡಿ.ಸತೀಶನ್ ಮತ್ತು ಅವರ ಕುಟುಂಬಕ್ಕೆ ಕೊಲೆ ಬೆದರಿಕೆ ಹಾಕಿದ್ದ ಆರೋಪಿಯನ್ನು ಪೊಲೀಸರು ಶನಿವಾರ ಬಂಧಿಸಿದ್ದಾರೆ.
ಅಸ್ಸಾಂನ ಜೋರ್ಹತ್ನಲ್ಲಿರುವ ವಾಯುನೆಲೆಯಲ್ಲಿ ಇಳಿಯಲು ಪ್ರಯತ್ನಿಸುತ್ತಿದ್ದಾಗ ಭಾರತೀಯ ವಾಯುಪಡೆಯ (IAF) AN-32 ಸಾರಿಗೆ ವಿಮಾನ ಅಪಘಾತಕ್ಕೀಡಾದ ಶನಿವಾರ ನಡೆದಿದೆ.
ಜಮ್ಮು ಮತ್ತು ಕಾಶ್ಮೀರದ ಪೂಂಚ್ ಸೆಕ್ಟರ್ನ ನಿಯಂತ್ರಣ ರೇಖೆಯ ಬಳಿ ತರಬೇತಿ ವೇಳೆ ಆಕಸ್ಮಿಕವಾಗಿ ಗ್ರೆನೇಡ್ ಸ್ಫೋಟಗೊಂಡು ಇಬ್ಬರು ಭಾರತೀಯ ಸೇನಾ ಸಿಬ್ಬಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಮಹಿಳಾ ಟೆಕ್ಕಿಯೊಬ್ಬರು 6 ತಿಂಗಳ ಮಗುವಿನೊಂದಿಗೆ ಅಪಾರ್ಟ್ಮೆಂಟ್ನ 6ನೇ ಮಹಡಿಯಿಂದ ಜಿಗಿದ ಪರಿಣಾಮ ಸ್ಥಳದಲ್ಲೇ ತಾಯಿ ಮೃತಪಟ್ಟಿದ್ದು, ಮಗು ಅದೃಷ್ಟವಶಾತ್ ಬದುಕುಳಿದಿರುವ ಘಟನೆ ಹೈದರಾಬಾದ್ನ ಮಿಯಾಪುರ್ ಪ್ರದೇಶದ ಮಯೂರಿ ನಗರದಲ್ಲಿ ನಡೆದಿದೆ.
ಡೀಸೆಲ್ ಮಾರಾಟಕ್ಕೆ ಕೇಂದ್ರ ಸರ್ಕಾರ ಮಿತಿ ಹೇರಿದೆ. ಪೆಟ್ರೋಲ್ ಬಂಕ್ಗಳಲ್ಲಿ ಒಂದು ವಾಹನಕ್ಕೆ ದಿನಕ್ಕೆ 200 ಲೀಟರ್ ಡೀಸೆಲ್ ಖರೀದಿಗೆ ಮಿತಿ ನಿಗದಿಪಡಿಸಲಾಗಿದೆ.
ಕ್ಯಾಂಪ್ಕೋ ಅಧ್ಯಕ್ಷರಾದ ಶ್ರೀ ಎಸ್.ಆರ್. ಸತೀಶ್ಚಂದ್ರ ಮತ್ತು ವ್ಯವಸ್ಥಾಪಕ ನಿರ್ದೇಶಕರಾದ ಡಾ. ಬಿ.ವಿ. ಸತ್ಯನಾರಾಯಣ ಅವರು ಲಕ್ನೋದಲ್ಲಿ ಉತ್ತರ ಪ್ರದೇಶದ ಸನ್ಮಾನ್ಯ ಮುಖ್ಯಮಂತ್ರಿ ಶ್ರೀ ಯೋಗಿ ಆದಿತ್ಯನಾಥ್ ಅವರನ್ನು ಅವರ ಕಚೇರಿಯಲ್ಲಿ ಭೇಟಿಯಾಗಿ, ಅಡಿಕೆ ಬೆಳೆಗಾರರು ಮತ್ತು ಸಹಕಾರ ಸಂಸ್ಥೆಗಳು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಚರ್ಚಿಸಿದರು.
: ತಮಿಳುನಾಡಿನ ದೇವಸ್ಥಾನವೊಂದರ ಆನೆಯ ಮುದ್ದಾದ ವಿಡಿಯೋವೊಂದು ಸಾಮಾಜಿಕ ಮಾಧ್ಯಮದ ಗಮನ ಸೆಳೆದಿದೆ.
ಇಸ್ಪೀಟು ಜೂಜಾಟ ಆಡುತ್ತಿದ್ದ ಗುಂಪಿನ ಮೇಲೆ ಕೆಂಚಾರ್ಲಹಳ್ಳಿ ಠಾಣೆ ಪೊಲೀಸರು ಮಂಗಳವಾರ ದಾಳಿ ನಡೆಸಿ 8 ಮಂದಿಯನ್ನು ಬಂಧಿಸಿರುವ ಘಟನೆ ತಾಲ್ಲೂಕಿನ ಮಿಂಚಲಹಳ್ಳಿ ಗ್ರಾಮದ ಸರ್ಕಾರಿ ಕೆರೆ ಅಂಗಳದಲ್ಲಿ ನಡೆದಿದೆ.
ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಜೂನ್ 12 ರಂದು ಕೊಲ್ಲೂರು ಮೂಕಾಂಬಿಕಾ ದೇವಾಲಯಕ್ಕೆ ಭೇಟಿ ನೀಡಲಿದ್ದಾರೆ.
ನವದೆಹಲಿ: ದಕ್ಷಿಣ ಕನ್ನಡ ಸೇರಿದಂತೆ ಕರಾವಳಿ ಮತ್ತು ಮಲೆನಾಡು ಭಾಗದ ಸಾವಿರಾರು ಅಡಿಕೆ ಬೆಳೆಗಾರರಿಗೆ ತೀವ್ರ ಆತಂಕ ತಂದೊಡ್ಡಿರುವ ‘ಹಳದಿ ಎಲೆ ರೋಗ’ ಮತ್ತು ‘ಎಲೆ ಚುಕ್ಕಿ ರೋಗ’ ಸಮಸ್ಯೆಗೆ ತುರ್ತು ಪರಿಹಾರ ಕ್ರಮ ಕೈಗೊಳ್ಳುವಂತೆ ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಮನವಿ ಸಲ್ಲಿಸಿದ್ದಾರೆ. ರಾಜ್ಯದ ಪ್ರಮುಖ ಅಡಿಕೆ ಬೆಳೆಯುವ ಪ್ರದೇಶಗಳಲ್ಲಿ ಈ ರೋಗಗಳ ವ್ಯಾಪಕ ಹರಡುವಿಕೆಯಿಂದಾಗಿ ರೈತರು ಎದುರಿಸುತ್ತಿರುವ ಗಂಭೀರ ಆರ್ಥಿಕ ಮತ್ತು […]
ಆಂಧ್ರಪ್ರದೇಶದ ವಿಶಾಖಪಟ್ಟಣಂದಲ್ಲಿರುವ ರಾಷ್ಟ್ರೀಯ ಇಸ್ಪಾತ್ ನಿಗಮ್ ಲಿಮಿಟೆಡ್ ಉಕ್ಕು ಕಾರ್ಖಾನೆಯಲ್ಲಿ ಸಂಭವಿಸಿದ ಭೀಕರ ಸ್ಫೋಟದಲ್ಲಿ ಎಂಟು ಕಾರ್ಮಿಕರು ಸಾವನ್ನಪ್ಪಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ಉಜ್ವಲ ಯೋಜನೆಯ ಫಲಾನುಭವಿಗಳಿಗೆ ನೀಡಲಾಗುತ್ತಿದ್ದ ವಾರ್ಷಿಕ ಸಬ್ಸಿಡಿ ಸಿಲಿಂಡರ್ಗಳ ಸಂಖ್ಯೆಯನ್ನು 9 ರಿಂದ 4 ಕ್ಕೆ ಕಡಿತಗೊಳಿಸಿದೆ.
ಜಾಗತಿಕ ಮಾರುಕಟ್ಟೆಯಲ್ಲಿನ ತಲ್ಲಣಗಳ ಎಫೆಕ್ಟ್ ಈಗ ನೇರವಾಗಿ ದೇಶದ ಗೃಹಿಣಿಯರ ಅಡುಗೆಮನೆಗೆ ತಟ್ಟಿದೆ. ಗೃಹಬಳಕೆಯ 14.2 ಕೆ.ಜಿ ತೂಕದ ಎಲ್ಪಿಜಿ (LPG) ಸಿಲಿಂಡರ್ ದರವನ್ನು ತಕ್ಷಣದಿಂದ ಜಾರಿಗೆ ಬರುವಂತೆ ಪ್ರತಿ ಸಿಲಿಂಡರ್ಗೆ 29 ರೂಪಾಯಿ ಹೆಚ್ಚಳ ಮಾಡಲಾಗಿದೆ.
: ಮುಸ್ಲಿಂ ಯುವಕನೊಬ್ಬ ಗೋವನ್ನು ರಕ್ಷಿಸುವ ಪ್ರಯತ್ನದಲ್ಲಿ ತನ್ನದೇ ಜೀವ ಕಳೆದುಕೊಂಡ ಮನಕಲಕುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಇಸಳೂರು ಗ್ರಾಮದ ಅರುಂಧತಿ ನಗರದಲ್ಲಿ ನಡೆದಿದೆ.
ಶೌಚಾಲಯಕ್ಕೆ ಅಗೆಯಲಾಗಿದ್ದ ಹೊಂಡಕ್ಕೆ ಬಿದ್ದು ಆರು ವರ್ಷದ ಬಾಲಕ ಮೃತಪಟ್ಟ ದಾರುಣ ಘಟನೆ ಕಾಸರಗೋಡಿನಲ್ಲಿ ನಡೆದಿದೆ.