Showing 20 of 2480 posts • Page 84 of 124
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ದೆಹಲಿ ಹೈಕೋರ್ಟಿಗೆ ಸಲ್ಲಿಸಿದ್ದ ಜಾಮೀನು ಅರ್ಜಿನ್ನು ಹೈಕೋರ್ಟ್ ವಜಾಗೊಳಿಸಿದೆ.
ಕೊತಗುಡ ಫ್ಲೈಓವರ್ ಮೇಲೆ ವೇಗವಾಗಿ ತೆರಳುತ್ತಿದ್ದ ಬೈಕ್ವೊಂದು ಕೆಳಗೆ ಬಿದ್ದು ಇಬ್ಬರು ಯುವಕರು ಮೃತಪಟ್ಟಿರುವ ಘಟನೆ ಹೈದರಾಬಾದ್ ಸಿಟಿಯಲ್ಲಿರುವ ಕೊತಗುಡ ಮೇಲ್ಸೇತುವೆಯಲ್ಲಿ ನಡೆದಿದೆ.
ಹಿಮಾಚಲ ಪ್ರದೇಶದ 3 ಜಿಲ್ಲೆಗಳಲ್ಲಿ ಕಂಡುಬಂದ ಮೇಘಸ್ಫೋಟದಿಂದ ಉಂಟಾದ ದಿಢೀರ್ ಪ್ರವಾಹ ದಿಂದ ಮೃತಪಟ್ಟವರ ಸಂಖ್ಯೆ 13ಕ್ಕೆ ಏರಿಕೆಯಾಗಿದ್ದು, ಮಂಡಿ ಮತ್ತು ಶಿಮ್ಲಾ ಜಿಲ್ಲೆಗಳಲ್ಲಿ ಭಾನುವಾರ 4 ಮೃತದೇಹ ಪತ್ತೆಯಾಗಿದೆ.
ಅಸ್ಸಾಂನಲ್ಲಿ ‘ಲವ್ ಜಿಹಾದ್’ ಮಾಡಿದರೆ ಅಂಥ ಪ್ರಕರಣಗಳಲ್ಲಿ ಜೀವಾವಧಿ ಶಿಕ್ಷೆ ನೀಡಲಾಗುವುದು ಎಂದಿರುವ ಸಿಎಂ ಹಿಮಂತ ಬಿಸ್ವ ಶರ್ಮ, ಈ ಸಂಬಂಧ ಸರ್ಕಾರ ಶೀಘ್ರ ಕಾನೂನು ರೂಪಿಸಲಿದೆ ಎಂದು ಹೇಳಿದ್ದಾರೆ.
ದೆಹಲಿಯ ರೋಹಿಣಿ ಜಿಲ್ಲೆಯ ಆವಂತಿಕಾ ಸಿ-ಬ್ಲಾಕ್ ಪ್ರದೇಶದ ಫ್ಲಾಟ್ನಲ್ಲಿ ಪಾಕಿಸ್ತಾನದ ಪರ ಘೋಷಣೆಗಳು ಕಂಡುಬಂದಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವನನ್ನು ಬಂಧಿಸಲಾಗಿದೆ.
ಪೊಲೀಸ್ ಇನ್ಸ್ಪೆಕ್ಟರ್ ಒಬ್ಬರು ಮಹಿಳಾ ಸಹೋದ್ಯೋಗಿ ಜತೆ ಮನೆಯಲ್ಲಿ ಸಿಕ್ಕಿಬಿದ್ದ ಹಿನ್ನೆಲೆಯಲ್ಲಿ ಪತ್ನಿ ಹಿಗ್ಗಾಮುಗ್ಗ ಥಳಿಸಿರುವ ಘಟನೆ ಆಗ್ರಾದಲ್ಲಿ ನಡೆದಿದೆ.
ಶ್ರಾವಣ ಸೋಮವಾರವಾಗಿರುವುದರಿಂದ ಕನ್ವಾರಿಯಾಗಳು ನೀರು ತರಲು ನದಿ ಬಳಿ ಹೋಗುತ್ತಿದ್ದಾಗ 11 ಸಾವಿರ ವೋಲ್ಟ್ ವಿದ್ಯುತ್ ತಂತಿಗೆ ಟ್ರಾಲಿ ತಾಗಿದ್ದು 9 ಮಂದಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
: ಪ್ಯಾರಿಸ್ ಒಲಿಂಪಿಕ್ಸ್ 2024 ರ ಪುರುಷರ ಟೆನಿಸ್ ಸಿಂಗಲ್ಸ್ನಲ್ಲಿಸರ್ಬಿಯಾದ ನೊವಾಕ್ ಜೊಕೊವಿಕ್ ಅವರಿಗೆ ಚಿನ್ನದ ಪದಕ ಗೆದ್ದಿದ್ದಾರೆ. ಭಾನುವಾರ ಫಿಲಿಪ್-ಚಾಟ್ರಿಯರ್ನಲ್ಲಿ ನಡೆದ ಚಿನ್ನದ
ಭಾರತ ಮತ್ತು ಗ್ರೇಟ್ ಬ್ರಿಟನ್ ನಡುವಿನ ಹಾಕಿ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಭಾರತ ಗೆಲುವು ಸಾಧಿಸಿದೆ. ಈ ಮಹತ್ವದ ಗೆಲುವಿನೊಂದಿಗೆ ಭಾರತವು ಒಲಿಂಪಿಕ್ಸ್ ಕೂಟದ ಸೆಮಿ ಫೈನಲ್ ಗೆ ಎಂಟ್ರಿ ಪಡೆದಿದೆ.
ಭಾನುವಾರ ಸಸಂಭವಿಸಿದ ಅಗ್ನಿ ಅವಘಡದಲ್ಲಿ ಮೂರು ಬೋಗಿಗಳು ಬೆಂಕಿಗಾಹುತಿಯಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಎಕ್ಸ್ಪ್ರೆಸ್ ರೈಲಿನ ಮೂರು ಹವಾನಿಯಂತ್ರಿತ ಕೋಚ್ಗಳು ಸುಟ್ಟು
ದೇವಸ್ಥಾನದಲ್ಲಿ ನಡೆಯುತ್ತಿದ್ದ ಧಾರ್ಮಿಕ ಕಾರ್ಯಕ್ರಮಕ್ಕಾಗಿ ಶಿವಲಿಂಗ ಮಾಡುತ್ತಿದ್ದ ಮಕ್ಕಳ ಮೇಲೆ ಗೋಡೆ ಕುಸಿದು 9 ಮಕ್ಕಳು ದಾರುಣವಾಗಿ ಸಾವನ್ನಪ್ಪಿದ ಆಘಾತಕಾರಿ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.
ಸೆಲ್ಫಿ ತೆಗೆಯಲು ಹೋಗಿ 60 ಅಡಿ ಆಳದ ಕಂದಕಕ್ಕೆ ಬಿದ್ದ ಯುವತಿಯನ್ನು ರಕ್ಷಿಸಿರುವ ಘಟನೆ ಮಹಾರಾಷ್ಟ್ರದ ಬೋರನೆ ಘಾಟ್ನಲ್ಲಿ ಶನಿವಾರ(ಆ.3ರಂದು) ನಡೆದಿದೆ.ಶನಿವಾರ ಪುಣೆಯ ತಂಡವೊಂದು
ತನ್ನ ಅಪಾರ್ಟ್ಮೆಂಟ್ ಮುಂಭಾಗದ ರಸ್ತೆಯಲ್ಲಿ ವ್ಯಕ್ತಿಯೊಬ್ಬರು ಶವವಾಗಿ ಪತ್ತೆಯಾಗಿದ್ದಾರೆ. ಅವರ ಬಳಿ ಇದ್ದ ಮೊಬೈಲ್ ತೆಗೆದುಕೊಂಡು ಪತ್ನಿಗೆ ಎಷ್ಟೇ ಕರೆ ಮಾಡಿದರೂ ಕೂಡ ಕರೆ ಸ್ವೀಕರಿಸಿರಲಿಲ್ಲ
ದೇವಸ್ಥಾನದ ಗೋಡೆ ಕುಸಿದು 9 ಮಕ್ಕಳು ಮೃತಪಟ್ಟಿರುವ ಘಟನೆ ಮಧ್ಯಪ್ರದೇಶದ ಸಾಗರ್ ಜಿಲ್ಲೆಯಲ್ಲಿ ನಡೆದಿದೆ. ದೇವಸ್ಥಾನದ ಪಕ್ಕದಲ್ಲಿ ಶೆಡ್ ಹಾಕಿಕೊಂಡು ಮಕ್ಕಳು ಶಿವಲಿಂಗ ಮಾಡುತ್ತಿದ್ದರು.
ಆಗ್ರಾ-ಲಕ್ನೋ ಎಕ್ಸ್ಪ್ರೆಸ್ವೇನಲ್ಲಿ ನಿನ್ನೆ ರಾತ್ರಿ ಬಸ್ ಮತ್ತು ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದೆ. ದುರ್ಘಟನೆಯಲ್ಲಿ 7 ಮಂದಿ ಸಾವನ್ನಪ್ಪಿದ್ದು, 45 ಪ್ರಯಾಣಿಕರು ಗಾಯಗೊಂಡಿದ್ದಾರೆ.
ಅಪ್ರಾಪ್ತ ಚಾಲಕ ಚಲಾಯಿಸುತ್ತಿದ್ದ ಕಾರಿಗೆ ಸ್ಕೂಟಿ ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮಗಳ ಸ್ಥಿತಿ ಚಿಂತಾಜನಕವಾಗಿರುವ ಘಟನೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದಿದೆ.
ಮುಂಬೈ, ಪುಣೆ, ಪಾಲ್ಗಢ ಸೇರಿದಂತೆ ಮಹಾರಾಷ್ಟ್ರದ ಹಲವು ಜಿಲ್ಲೆಗಳಲ್ಲಿ ಇಂದು ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ರೆಡ್ ಅಲರ್ಟ್ ಘೋಷಣೆ ಮಾಡಿದೆ.
ಬಿಎಸ್ಎಫ್ನ ನೂತನ ನಿರ್ದೇಶಕರಾಗಿ ಐಪಿಎಸ್ ಅಧಿಕಾರಿ ದಲ್ಜಿತ್ ಸಿಂಗ್ ಚೌಧರಿ ನೇಮಗೊಂಡಿದ್ದಾರೆ. ಚೌಧರಿ ಪ್ರಸ್ತುತ ಸಶಸ್ತ್ರ ಸೀಮಾ ಬಲ ಮುಖ್ಯಸ್ಥರಾಗಿ ಕಾರ್ಯ ನಿರ್ಹಿಸುತ್ತಿದ್ದರು.
ಭೀಕರ ಭೂಕುಸಿತಕ್ಕೆ ರಾಜಸ್ಥಾನದ ಬಿಜೆಪಿ ನಾಯಕರೊಬ್ಬರು ನೀಡಿರುವ ಹೇಳಿಕೆ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ ಎಂದು ಭವಿಷ್ಯವನ್ನೂ ನುಡಿದಿದ್ದಾರೆ.
ಭಾರತೀಯ ಆಡಳಿತ ಸೇವೆಯ ಆಕಾಂಕ್ಷಿಯೊಬ್ಬರು ರೂಮ್ ಬಾಡಿಗೆ ಜಾಸ್ತಿ ಮಾಡಿದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದೆಹಲಿ ನಗರದ ರಾಜೀಂದ್ರ ನಗರದಲ್ಲಿ ನಡೆದಿದೆ.