Showing 20 of 2480 posts • Page 89 of 124
ಪಾಕಿಸ್ತಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಕಾರ್ಗಿಲ್ ವಿಜಯ ದಿವಸದಂದೇ ಎಚ್ಚರಿಕೆ ನೀಡಿದ್ದಾರೆ. ಜಮ್ಮು-ಕಾಶ್ಮೀರ ಗಡಿಯಲ್ಲಿ ಇತ್ತೀಚೆಗೆ ಉಗ್ರರ ದಾಳಿ ಜಾಸ್ತಿಯಾಗಿದ್ದು, ಸೈನಿಕರು, ವಲಸಿಗರನ್ನು ಗುರಿಯಾಗಿಸಿ ದಾಳಿ ನಡೆಸುತ್ತಿದ್ದಾರೆ.
ತಿಹಾರ್ ಜೈಲ್ನಲ್ಲಿ 125 ಜನ ಕೈದಿಗಳಿಗೆ ಹೆಚ್ಐವಿ ಪಾಸಿಟಿವ್ ಕಾಣಿಸಿಕೊಂಡಿದೆ. 200 ಕೈದಿಗಳಲ್ಲಿ ಲೈಂಗಿಕತೆಗೆ ಸಂಬಂಧಿತ ರೋಗಗಳು ಇರೋದು ತಿಳಿದು ಬಂದಿದೆ.
ತನಿಷ್ಕಾ ಶೋ ರೂಮ್ಗೆ ನುಗ್ಗಿದ ದರೋಡೆಕೋರೆರು ಅಕ್ಷರಶಃ ಶೋರೂಮ್ನ್ನು ದೋಚಿಕೊಂಡು ಹೋಗಿರುವ ಘಟನೆ ಬಿಹಾರದ ಪೂರ್ನಿಯಾದಲ್ಲಿ ನಡೆದಿದೆ.
ಎನ್ಸೆಫಾಲಿಟಿಸ್ ಸಿಂಡ್ರೋಮ್ ನಿಂದ ಕಳೆದ ಒಂದು ತಿಂಗಳಲ್ಲಿ ಕನಿಷ್ಠ 48 ಮಂದಿ ಮೃತಪಟ್ಟಿರುವ ಘಟನೆ ಗುಜರಾತ್ ನಲ್ಲಿ ನಡೆದಿದೆ.
ಟಾಟಾ ಸುಮೋ ಕಾರೊಂದು ಕಣಿವೆಗೆ ಉರುಳಿದ್ದು, ಐವರು ಮಕ್ಕಳು ಸೇರಿ 8 ಮಂದಿ ದಾರುಣವಾಗಿ ಸಾವನ್ನಪ್ಪಿದ ಘಟನೆ ಜಮ್ಮು-ಕಾಶ್ಮೀರದ ಅನಂತ್ನಾಗ್ ಜಿಲ್ಲೆಯಲ್ಲಿ ನಡೆದಿದೆ.
ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಜುಲೈ 27ರಂದು ನಡೆದ ಎನ್ಕೌಂಟರ್ನಲ್ಲಿ ಗಾಯಗೊಂಡಿದ್ದ ಸೈನಿಕರ ಪೈಕಿ ಓರ್ವ ಮೃತಪಟ್ಟಿದ್ದಾರೆ. ನಾಲ್ವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
ಜಮ್ಮು ಮತ್ತು ಕಾಶ್ಮೀರದ ಕುಪ್ವಾರಾ ಜಿಲ್ಲೆಯಲ್ಲಿ ಶನಿವಾರ ಭಯೋತ್ಪಾದಕರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಯೋಧರಿಗೆ ಗಾಯಗಳಾಗಿದ್ದು ಕೂಡಲೇ ಅವರನ್ನು
ನವಿಮುಂಬೈಯ ಶಹಬಾಜ್ನಲ್ಲಿ ಇಂದು (ಜುಲೈ 27) ಬೆಳಿಗ್ಗೆ ಮೂರು ಅಂತಸ್ತಿನ ಕಟ್ಟಡ ಕುಸಿದು ಬಿದ್ದಿದ್ದು, ಹಲವಾರು ಮಂದಿ ಸಿಕ್ಕಿಬಿದ್ದಿದ್ದಾರೆ ಎಂದು ಶಂಕಿಸಲಾಗಿದೆ. ಪೊಲೀಸರು,
ಜೈಲಿನಿಂದ ಬಿಡುಗಡೆಯಾದ ಮಹಾರಾಷ್ಟ್ರದ ಕುಖ್ಯಾತ ರೌಡಿನೊಬ್ಬನನ್ನು ಸ್ವಾಗತಿಸಲು ಆತನ ಬೆಂಬಲಿಗರು ಬೃಹತ್ ರ್ಯಾಲಿಯನ್ನು ಆಯೋಜಿಸಿದ್ದರು.
ಕೇಂದ್ರ ಬಜೆಟ್ನಲ್ಲಿ ಯಾವ ರಾಜ್ಯಳನ್ನು ಕಡೆಗಣಿಸಿಲ್ಲ. ಹಿಂದಿನಂತೆಯೇ ಎಲ್ಲಾ ರಾಜ್ಯಗಳೂ ಹಂಚಿಕೆ ಪಡೆದಿವೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ಭಕ್ತರ ಸಂಖ್ಯೆ ಅಯೋಧ್ಯೆಯಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಭೇಟಿ ನೀಡುವ ಭಕ್ತರು ಭಾರಿ ಪ್ರಮಾಣದ ಕಾಣಿಕೆ ಅರ್ಪಿಸುತ್ತಿದ್ದಾರೆ. ಚಿನ್ನ, ಬೆಳ್ಳಿ, ವಜ್ರ, ಮುತ್ತು ಸೇರಿದಂತೆ ಬೆಲೆಬಾಳುವ ಆಭರಣಗಳನ್ನೂ ಸಲ್ಲಿಸುತ್ತಾರೆ.
ನರೇಂದ್ರ ಮೋದಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ ಸರ್ಕಾರದ ಅಡಿಯಲ್ಲಿ 2015 ರಲ್ಲಿ ಸ್ಥಾಪಿಸಲಾದ ಕೇಂದ್ರ ಸರ್ಕಾರದ ಚಿಂತಕರ ಚಾವಡಿಯಾದ ನೀತಿ ಆಯೋಗವನ್ನು ರದ್ದುಗೊಳಿಸಬೇಕು.
ಪಠಾಣ್ಕೋಟ್ನಲ್ಲಿ ಅನುಮಾನಾಸ್ಪದ ವ್ಯಕ್ತಿಗಳ ಓಡಾಟ ಕಂಡುಬಂದಿರುವ ಹಿನ್ನೆಲೆಯಲ್ಲಿ ಜಮ್ಮುವಿನಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ.
ಶಾಲಾ ಬಸ್ ಚಾಲಕನೊಬ್ಬ ಶಾಲಾ ವಿದ್ಯಾರ್ಥಿಗಳನ್ನು ರಕ್ಷಿಸಿ ತನ್ನ ಪ್ರಾಣವನ್ನೇ ತ್ಯಾಗ ಮಾಡಿದ ಹೃದಯ ವಿದ್ರಾವಕ ಘಟನೆ ತಮಿಳುನಾಡಿನ ತಿರುಪ್ಪೂರಿನಲ್ಲಿ ನಡೆದಿದೆ.
ಭಯೋತ್ಪಾದನೆ ಹಾಗೂ ಭಯೋತ್ಪಾದಕರ ಉದ್ದೇಶಗಳು ಎಂದಿಗೂ ಈಡೇರುವುದಿಲ್ಲ ಎಂದು ಕಾರ್ಗಿಲ್ನ ಡ್ರಾಸ್ ಕಣಿವೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಗುಡುಗಿದ್ದಾರೆ.
ಇಂದು 25ನೇ ಕಾರ್ಗಿಲ್ ವಿಜಯ್ ದಿವಸವನ್ನು ಆಚರಿಸಲಾಗುತ್ತಿದ್ದು, ಪ್ರಧಾನಿ ಮೋದಿ ಇಂದು ದ್ರಾಸ್ನಲ್ಲಿರುವ ಯುದ್ಧ ಸ್ಮಾರಕಕ್ಕೆ ತೆರಳಿ ಹುತಾತ್ಮ ಯೋಧರಿಗೆ ನಮನ ಸಲ್ಲಿಸಿದ್ದಾರೆ.
ಇಲ್ಲಿನ ಮೆಟ್ರೋದ ಜಾಲವು ನಿರಂತರವಾಗಿ ವಿಸ್ತಾರಗೊಳ್ಳುತ್ತಿದೆ ಮತ್ತು ಇಂದು ಮೆಟ್ರೋ ರಾಜಧಾನಿಯ ಮೂಲೆ ಮೂಲೆಯನ್ನು ತಲುಪಿದೆ. ಮೆಟ್ರೋದಲ್ಲಿ ಪ್ರತಿದಿನ ಲಕ್ಷಾಂತರ ಜನರು ಅದರ ಮೂಲಕ ಪ್ರಯಾಣಿಸುತ್ತಾರೆ.
ಕಾರ್ಗಿಲ್ ವಿಜಯ ದಿನದ ನಿಮಿತ್ತ ಕಾರ್ಗಿಲ್ಗೆ ಭೇಟಿ ನೀಡಿದ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು, ವಿಶ್ವದ ಅತಿ ಎತ್ತರದ ಪ್ರದೇಶದಲ್ಲಿನ ಸುರಂಗ ನಿರ್ಮಾಣಕ್ಕೆ ಚಾಲನೆ ನೀಡಲಿದ್ದಾರೆ.
ಶಿರೂರು ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ರಾಜ್ಯಸಭೆಯಲ್ಲಿ ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡ ಅವರು ಪ್ರಸ್ತಾಪಿಸಿದ್ದಾರೆ.
ರಾಜ್ಯದಲ್ಲಿ ಕಳೆದ 15 ತಿಂಗಳಲ್ಲಿ 1200ಕ್ಕೂ ಹೆಚ್ಚು ರೈತರು ಆತ್ಮಹತ್ಯೆಗೆ ಶರಣಾಗಿರುವುದು ದುರಂತ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ.