Showing 20 of 2480 posts • Page 93 of 124
ಶಾಲಾ ಪ್ರವೇಶಕ್ಕೆ ಯಾವುದೇ ರೀತಿಯ ವರ್ಗಾವಣೆ ಪ್ರಮಾಣ ಪತ್ರಗಳ ಅಗತ್ಯವಿಲ್ಲ. ಶಾಲಾ ವರ್ಗಾವಣೆ ಪ್ರಕ್ರಿಯೆಯನ್ನು ಸರಳಗೊಳಿಸುವಂತೆ ಮದ್ರಾಸ್ ಹೈಕೋರ್ಟ್ ತಮಿಳುನಾಡಿನ ಎಲ್ಲ ಶಾಲೆಗಳಿಗೆ ನಿರ್ದೇಶನ ನೀಡಿದೆ.
ವಿಶೇಷಚೇತನ ಹಾಗೂ ಒಬಿಸಿ ಕೋಟಾ ದುರ್ಬಳಕೆ ಮಾಡಿಕೊಂಡಿದ್ದಾರೆಂಬ ಆರೋಪ ಮೇಲೆ ಪ್ರೊಬೇಷನರಿ ಐಎಎಸ್ ಅಧಿಕಾರಿ ಪೂಜಾ ಖೇಡ್ಕರ್ ವಿರುದ್ಧ ಕೇಂದ್ರ ಲೋಕಸೇವಾ ಆಯೋಗ ಎಫ್ಐಆರ್ ದಾಖಲಿಸಿದೆ.
ಮಂತ್ರವಾದಿಯೊಬ್ಬ ಮಹಿಳೆಯ ಸಮಸ್ಯೆಯನ್ನು ಬಗೆಹರಿಸುವುದಾಗಿ ನಂಬಿಸಿ ಆಕೆಯ ತಲೆಗೆ 18 ಸೂಜಿಗಳನ್ನು ಚುಚ್ಚಿದ ಘಟನೆ ಒಡಿಶಾದ ಬಲಂಗಿರ್ ಜಿಲ್ಲೆಯಲ್ಲಿ ನಡೆದಿದೆ.
ಜುಲೈ 22ರಂದು ಪ್ರಾರಂಭವಾಗಲಿರುವ ಸಂಸತ್ತಿನ ಮುಂಬರುವ ಮುಂಗಾರು ಅಧಿವೇಶನದಲ್ಲಿ ವಿಪತ್ತು ನಿರ್ವಹಣಾ ಕಾನೂನನ್ನು ತಿದ್ದುಪಡಿ ಮಾಡುವುದು ಸೇರಿದಂತೆ 6 ಹೊಸ ಮಸೂದೆಗಳನ್ನು ಕೇಂದ್ರ ಸರ್ಕಾರವು ಪರಿಚಯಿಸಲಿದೆ.
ಗೋಂಡಾ ಬಳಿ ಚಂಡೀಘಡ-ದಿಬ್ರುಘಡ ಎಕ್ಸ್ಪ್ರೆಸ್ ರೈಲು ಹಳಿ ತಪ್ಪಿದೆ. ಎಕ್ಸ್ಪ್ರೆಸ್ ರೈಲಿನ 10ಕ್ಕೂ ಹೆಚ್ಚು ಬೋಗಿಗಳು ಹಳಿ ತಪ್ಪಿ ಭೀಕರ ಅಪಘಾತ ಸಂಭವಿಸಿದೆ.
ನೀಟ್-ಯುಜಿ 2024 ಅಕ್ರಮಕ್ಕೆ ಸಂಬಂಧಿಸಿದಂತೆ ಪಾಟ್ನಾದ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ ಏಮ್ಸ್ನ ನಾಲ್ಕು ವಿದ್ಯಾರ್ಥಿಗಳನ್ನು ಕೇಂದ್ರೀಯ ತನಿಖಾ ದಳ ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದೆ.
ಕೇರನ್ ಗಡಿ ನಿಯಂತ್ರಣ ರೇಖೆ ಬಳಿ ಯೋಧರು ಮತ್ತು ಉಗ್ರರ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಘಟನೆಯಲ್ಲಿ ಒಬ್ಬ ಯೋಧ ಗಂಭೀರವಾಗಿ ಗಾಯಗೊಂಡಿದ್ದು, ಇಬ್ಬರು ಉಗ್ರರನ್ನು ಹೊಡೆದುರುಳಿಸಲಾಗಿದೆ.
2024ನೇ ಸಾಲಿನ NEET-UG ಪರೀಕ್ಷಾ ಫಲಿತಾಂಶವನ್ನು ಜುಲೈ 20ರ ಮಧ್ಯಾಹ್ನ 12 ಗಂಟೆಯೊಳಗೆ ಪ್ರಕಟಿಸುವಂತೆ ರಾಷ್ಟ್ರೀಯ ಪರೀಕ್ಷಾ ಸಂಸ್ಥೆಗೆ ಸುಪ್ರೀಂ ಕೋರ್ಟ್ ಆದೇಶಿಸಿದೆ.
ಕೇಂದ್ರ ಸಚಿವ ನಿತಿನ್ ಗಡ್ಕರಿ ಗುರುವಾರ ಬೆಳಗ್ಗೆ ತಿರುಪತಿಗೆ ಭೇಟಿ ನೀಡಿ ವೆಂಕಟೇಶ್ವರ ದೇವರ ದರ್ಶನ ಪಡೆದಿದ್ದಾರೆ. ದೇಶದ ಅಭಿವೃದ್ಧಿಗೆ ಕೆಲಸ ಮಾಡಲು ಸ್ಫೂರ್ತಿ, ಶಕ್ತಿ ನೀಡುವಂತೆ ದೇವರಲ್ಲಿ ಬೇಡಿಕೊಂಡಿದ್ದೇನೆ ಎಂದು ತಿಳಿಸಿದ್ದಾರೆ.
ಉತ್ತರ ಪ್ರದೇಶದ ಗೊಂಡಾ-ಮಂಕಾಪುರ ವಿಭಾಗದಲ್ಲಿ ಚಂಡೀಗಢ-ದಿಬ್ರುಘರ್ ರೈಲು ಹಳಿ ತಪ್ಪಿದೆ. ಎಕ್ಸ್ ಪ್ರೆಸ್ ರೈಲು ಹಳಿ ತಪ್ಪಿದ ಪರಿಣಾಮ, ಹಲವು ಪ್ರಯಾಣಿಕರು ಗಾಯಗೊಂಡಿರೋದಾಗಿ ವರದಿಯಾಗಿದೆ.
ಜಾತಿ, ಧರ್ಮದ ಹೆಸರಿನಲ್ಲಿ ಒಬ್ಬರಿಗೊಬ್ಬರು ದ್ವೇಷ ಕಾರುತ್ತಿರುವ ಈ ಸಮಯದಲ್ಲಿ ಇಲ್ಲೊಂದು ಮುಸ್ಲಿಂ ಕುಟುಂಬ ಹನುಮಾನ್ ಮಂದಿರವನ್ನು ಕಟ್ಟಿ ಎಲ್ಲರಿಗೂ ಮಾದಿರಿಯಾಗಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಪ್ರೊಬೆಷನರಿ ಐಎಎಸ್ ಅಧಿಕಾರಿ ಪೂಜಾ ಖೇಡ್ಕರ್ ಅವರ ಹೆಸರು ಸುದ್ದಿಯಲ್ಲಿರುವಂತೆ ಇದೀಗ ಅವರ ಪೋಷಕರಿಗೂ ಕಂಟಕ ಎದುರಾಗಿದೆ ಅದರಂತೆ ಪೂಜಾ ಖೇಡ್ಕರ್
ಛತ್ರಪತಿ ಶಿವಾಜಿ ಮಹಾರಾಜರು ಬಳಸುತ್ತಿದ್ದ ‘ವಾಘ್ ನಖ್’ ಅಥವಾ ಹುಲಿ ಉಗುರಿನ ಆಕಾರದ ಆಯುಧ ಲಂಡನ್ ಮ್ಯೂಸಿಯಂನಿಂದ ಮುಂಬೈಗೆ ಆಗಮಿಸಿದೆ.
ಛತ್ತೀಸ್ಗಢ-ಮಹಾರಾಷ್ಟ್ರ ಗಡಿಯಲ್ಲಿ ನಡೆದ ಪೊಲೀಸ್ ಎನ್ಕೌಂಟರ್ನಲ್ಲಿ 12 ಮಂದಿ ನಕ್ಸಲರು ಸಾವನ್ನಪ್ಪಿದ್ದಾರೆ. ಆರು ಗಂಟೆಗಳಿಗೂ ಹೆಚ್ಚು ಕಾಲ ಎನ್ಕೌಂಟರ್ ನಡೆದಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ನೀಲೋತ್ಪಾಲ್ ತಿಳಿಸಿದ್ದಾರೆ.
ಛತ್ತೀಸ್ಗಢದ ಬಿಜಾಪುರ ಜಿಲ್ಲೆಯಲ್ಲಿ ಗುರುವಾರ ನಸುಕಿನ ಜಾವಾ ಐಇಡಿ ಸ್ಫೋಟಗೊಂಡು ಇಬ್ಬರು ಯೋಧರು ಹುತಾತ್ಮರಾಗಿದ್ದು ಮತ್ತು ನಾಲ್ವರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಮಹಾರಾಷ್ಟ್ರ ರಾಜ್ಯ ವಿಧಾನಸಭೆ ಅಧಿಕಾರಾವಧಿ ಸದ್ಯದಲ್ಲೇ ಮುಕ್ತಾಯಗೊಳ್ಳಲಿದೆ. ಮುಂದಿನ ಚುನಾವಣೆಯಲ್ಲಿ ಗೆದ್ದು ಯಾರು ಅಧಿಕಾರ ಹಿಡಿಯುತ್ತಾರೆ ಅನ್ನುವ ಚರ್ಚೆ ನಡೆಯುತ್ತಿದೆ.
ಲೋಕಸಭಾ ಚುನಾವಣೆಯಲ್ಲಿ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಕಳಪೆ ಪ್ರದರ್ಶನಕ್ಕೆ ಅಲ್ಪಸಂಖ್ಯಾತರ ಬೆಂಬಲದ ಕೊರತೆಯೇ ಪ್ರಮುಖ ಕಾರಣ.
ಒಂದನೇ ತರಗತಿ ಓದುತ್ತಿರುವ ಮಗುವಿನ ಮೇಲೆ ಡ್ಯಾನ್ಸ್ ಮಾಸ್ಟರ್ ಲೌಂಗಿಕ ದೌರ್ಜನ್ಯ ಎಸಗಿರುವ ಘಟನೆ ತೆಲಂಗಾಣದ ಮೇಡ್ಚಲ್ ಮಲ್ಕಾಜ್ಗಿರಿ ಜಿಲ್ಲೆಯ ಮೆಡಿಪಲ್ಲಿಯ ಖಾಸಗಿ ಶಾಲೆಯಲ್ಲಿ ನಡೆದಿದೆ.
ಬರೋಬ್ಬರಿ 300 ಮೊಸಳೆಗಳ ಅಭಯಾರಣ್ಯದ ಕೆರೆಯಲ್ಲಿ ಅಪಾಯಕಾರಿ ಬೈಕ್, ಕಾರು ಸ್ಟಂಟ್ ಮಾಡುವ ಮೂಲಕ ಯುವಕರು ಹುಚ್ಚಾಟ ಮೆರೆದಿರುವ ಘಟನೆ ರಾಜಸ್ಥಾನದ ಆಲ್ವಾರ್ ಜಿಲ್ಲೆಯಲ್ಲಿರುವ ಸಿಲಿಸೆಹ್ರ್ ಮೊಸಳೆ ಪಾರ್ಕ್ನಲ್ಲಿ ನಡೆದಿದೆ.
ಸೈಬರ್ ಅಪರಾಧಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಜನತೆಗೆ ಮಹತ್ವದ ಸೂಚನೆ ನೀಡಿದ್ದಾರೆ.