Showing 20 of 2480 posts • Page 96 of 124
ಬಸ್ವೊಂದು ಸ್ಕಿಡ್ ಆಗಿ 28 ಪ್ರಯಾಣಿಕರನ್ನು ಹೊತ್ತೊಯುತ್ತಿದ್ದ ವೇಳೆ 200 ಅಡಿ ಆಳದ ಕಮರಿಗೆ ಉರುಳಿದ ಪರಿಣಾಮ ಇಬ್ಬರು ಪ್ರಯಾಣಿಕರು ಸಾವನ್ನಪ್ಪಿದ್ದು, 25 ಮಂದಿ ಗಾಯಗೊಂಡಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ನಡೆದಿದೆ.
ಅನುಮಾನಾಸ್ಪದವಾಗಿ ಅಪಾಯಕಾರಿ ರಾಸಾಯನಿಕ ವಸ್ತು ರೇಡಿಯೋ ಆಕ್ಟೀವ್ ತುಂಬಿದ್ದ ಕೆಲವು ಪೆಟ್ಟಿಗೆಗಳು ಉತ್ತರಾಖಂಡದಲ್ಲಿ ಪತ್ತೆಯಾಗಿದ್ದು, ಐವರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ನಡೆದಿದೆ.
ಭಾರೀ ಹಣಕಾಸು ಮುಗ್ಗಟ್ಟು ಎದುರಿಸುತ್ತಿರುವ ಹಿಮಾಚಲ ಪ್ರದೇಶದಲ್ಲಿರುವ ಕಾಂಗ್ರೆಸ್ ಸರ್ಕಾರ ಆದಾಯ ಪಾವತಿಸುವ ವ್ಯಕ್ತಿಗಳಿಗೆ ಉಚಿತ ವಿದ್ಯುತ್ ನೀಡದೇ ಇರುವ ಅಚ್ಚರಿಯ ನಿರ್ಧಾರ ಕೈಗೊಂಡಿದೆ.
ಭಾರೀ ಟ್ರಾಫಿಕ್ ಜಾಮ್ನಿಂದಾಗಿ ಸರಿಯಾದ ಸಮಯಕ್ಕೆ ಆಸ್ಪತ್ರೆಗೆ ತಲುಪಲು ಸಾಧ್ಯವಾಗದೆ ಆಂಬ್ಯುಲೆನ್ಸ್ನಲ್ಲೇ ವೃದ್ಧರೊಬ್ಬರು ಸಾವನ್ನಪ್ಪಿದ ದಾರುಣ ಘಟನೆ ಮುಂಬೈನಲ್ಲಿ ನಡೆದಿದೆ.
ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಬಸ್ ಹಿಂದಿನಿಂದ ಟ್ರಕ್ಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಯಾತ್ರಾರ್ಥಿಗಳು ಸಾವನ್ನಪ್ಪಿದ್ದು, 14 ಮಂದಿ ಗಂಭೀರ ಗಾಯಗೊಂಡಿರುವ ಘಟನೆ ಒಡಿಶಾದ ಮಯೂರ್ಭಂಜ್ ಜಿಲ್ಲೆಯಲ್ಲಿ ನಡೆದಿದೆ.
ಭಾರೀ ಮಳೆ ನಡುವೆ ನೇಪಾಳದಿಂದ ನೀರು ಬಿಡುಗಡೆಯಾದ ಹಿನ್ನೆಲೆ ಉತ್ತರ ಪ್ರದೇಶದ ಅನೇಕ ನಗರಗಳಲ್ಲಿ ಪ್ರವಾಹ ತೀವ್ರವಾಗುತ್ತಿದೆ.
ಅಧಿಕಾರ ದುರ್ಬಳಕೆ ಸೇರಿ ಹಲವು ವಿವಾದಗಳಿಂದ ಪ್ರೊಬೆಷನರಿ ಐಎಎಸ್ ಅಧಿಕಾರಿ ಪೂಜಾ ಖೇಡ್ಕರ್ ಸುದ್ದಿಯಲ್ಲಿದ್ದರೆ ಇದೀಗ ಅವರ ತಾಯಿ ಪಿಸ್ತೂಲ್ ಹಿಡಿದು ರೈತರನ್ನು ಬೆದರಿಸಿದ ಹಳೆಯ ವಿಡಿಯೋ ವೈರಲ್ ಆದ ಬೆನ್ನಲ್ಲೇ
ಲೋಕಸಭಾ ಚುನಾವಣೆ ಯ ಬಳಿಕ ನಡೆದ ಉಪಚುನಾವಣೆಯ ಫಲಿತಾಂಶ ಇಂದು (ಜುಲೈ 13) ಹೊರ ಬೀಳಲಿದ್ದು, ಕುತೂಹಲ ಮೂಡಿಸಿದೆ. ಜುಲೈ 10ರಂದು ಏಳು ರಾಜ್ಯಗಳ 13 ಅಸೆಂಬ್ಲಿ ಕ್ಷೇತ್ರಗಳಿಗೆ ಈ ಉಪಚುನಾವಣೆ ನಡೆದಿತ್ತು.
ಅನಕಾಪಲ್ಲಿಯಲ್ಲಿ ವಿಷ್ಣು ಎಂಟರ್ಟೈನ್ಮೆಂಟ್ ಹೆಸರಿನ ನೃತ್ಯ ತಂಡವು ನೃತ್ಯ ಪ್ರದರ್ಶನದ ವೇಳೆ ಜೀವಂತ ಕೋಳಿ ತಲೆಯನ್ನು ಕಚ್ಚಿ ವಿಕೃತಿ ಮೆರೆದಿರುವ ಘಟನೆ ಬೆಳಕಿಗೆ ಬಂದಿದೆ. ಇದೀಗ ಈ ತಂಡದ ವಿರುದ್ಧ ಪ್ರಕರಣ ದಾಖಲಾಗಿದೆ.
ಶಾಲೆಯ ಕಾರಿಡಾರ್ನಲ್ಲಿ ಹಠಾತ್ 16 ವರ್ಷದ ವಿದ್ಯಾರ್ಥಿಯೊಬ್ಬ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ರಾಜಸ್ಥಾನದ ದೌಸಾದಲ್ಲಿ ನಡೆದಿದೆ.
ಮಹಾರಾಷ್ಟ್ರ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಮೈತ್ರಿಕೂಟ ಅಭೂತಪೂರ್ವ ಗೆಲುವು ಸಾಧಿಸಿದೆ. ಬಿಜೆಪಿ-ಏಕನಾಥ್ ಶಿಂಧೆ ಬಣದ ಶಿವಸೇನೆ ಹಾಗೂ ಮಿತ್ರಪಕ್ಷಗಳು 11 ಸ್ಥಾನಗಳ ಪೈಕಿ 9 ಸ್ಥಾನಗಳನ್ನು ಗೆದ್ದುಕೊಂಡಿದೆ.
ಪ್ರಧಾನಿ ನರೇಂದ್ರ ಮೋದಿ ಜುಲೈ 13 ರಂದು ನಾಳೆ ಮುಂಬೈಗೆ ಭೇಟಿ ನೀಡಲಿದ್ದಾರೆ. ₹29,400 ಕೋಟಿ ರೂಪಾಯಿಗಳ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ.
ಜೂನ್ 25 ರಂದು ಸಂವಿಧಾನ್ ಹತ್ಯಾ ದಿವಸ್ ಎಂದು ಆಚರಿಸುವ ಕೇಂದ್ರದ ನಿರ್ಧಾರಕ್ಕೆ ಕಾಂಗ್ರೆಸ್ ಪ್ರತಿಕ್ರಿಯಿಸಿದ್ದು, ಜೂನ್ 4 ಅನ್ನು “ಮೋದಿಮುಕ್ತಿ ದಿವಸ್”ಎಂದು ಆಚರಿಸಬೇಕು ಎಂದು ಹೇಳಿದೆ.
ಪ್ರತಿವರ್ಷ ಜೂನ್ 25 ರಂದು ʻಸಂವಿಧಾನ ಹತ್ಯಾ ದಿವಸ್ʼ ಆಗಿ ಆಚರಿಸಲಾಗುವುದು ಎಂದು ಸಚಿವ ಅಮಿತ್ ಶಾ ಘೋಷಣೆ ಮಾಡಿದ್ದಾರೆ.
ತನ್ನನ್ನು ಭೇಟಿಯಾಗಲು ಬರುವವರು ಖಡ್ಡಾಯವಾಗಿ ಆಧಾರ್ ಕಾರ್ಡ್ ತಮ್ಮೊಂದಿಗೆ ತರಬೇಕೆಂದು ನಟಿ ಕಂಗನಾ ರಣಾವತ್ ಅವರು ಹೇಳಿಕೆ ನೀಡಿದ್ದಾರೆ.
ದೆಹಲಿ ಅಬಕಾರಿ ಲೈಸೆನ್ಸ್ ಹಗರಣದಲ್ಲಿ ಬಂಧನಕ್ಕೊಳಗಾಗಿ ಜೈಲಿನಲ್ಲಿರುವ ಎಎಪಿ ಮುಖ್ಯಸ್ಥ, ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ಗೆ ಸುಪ್ರೀಂಕೋರ್ಟ್ನಿಂದ ಬಿಗ್ ರಿಲೀಫ್ ಸಿಕ್ಕಿದೆ.
ನೇಪಾಳದಲ್ಲಿ ಭಾರಿ ಮಳೆ ಸುರಿಯುತ್ತಿರುವ ಪರಿಣಾಮ ಭೂಕುಸಿತ ಉಂಟಾಗಿದ್ದು, ಎರಡು ಬಸ್ಗಳು ನದಿಗೆ ಬಿದ್ದಿದ್ದು 63 ಪ್ರಯಾಣಿಕರು ನಾಪತ್ತೆಯಾಗಿದ್ದಾರೆ.
ರಕ್ಷಣಾ ಸಚಿವ ರಾಜನಾಥ್ ಸಿಂಗ್ ದೆಹಲಿಯ ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (ಏಮ್ಸ್) ಆಸ್ಪತ್ರೆಯ ನ್ಯೂರೋ ಸರ್ಜರಿ ವಿಭಾಗಕ್ಕೆ ಗುರುವಾರ ರಾತ್ರಿ ದಾಖಲಾಗಿದ್ದಾರೆ.
(ಇಡಿ) ತನ್ನ ಬಂಧನವನ್ನು ಪ್ರಶ್ನಿಸಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಅರ್ಜಿಯ ಕುರಿತು ಶುಕ್ರವಾರ (ಜುಲೈ 12) ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ಪ್ರಕಟಿಸಲಿದೆ.
ದೆಹಲಿ ಮೆಟ್ರೋದ ಕೆಂಪು ಮಾರ್ಗದ ಕಾಶ್ಮೀರಿ ಗೇಟ್ ನಿಲ್ದಾಣದಲ್ಲಿ ಹಳಿಗೆ ಜಾರಿ 60 ವರ್ಷದ ವೃದ್ಧ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.