Showing 20 of 2480 posts • Page 98 of 124
ರಾಮನಗರ ಜಿಲ್ಲೆಯ ಹೆಸರು ಬದಲಾವಣೆ ವಿಚಾರ ರಾಜ್ಯ ರಾಜಕೀಯದಲ್ಲಿ ಕೋಲಾಹಲ ಸೃಷ್ಟಿಸಿದೆ. ಡಿಸಿಎಂ ಡಿ.ಕೆ ಶಿವಕುಮಾರ್ ನಿಯೋಗ ಸಿಎಂ ಸಿದ್ದರಾಮಯ್ಯ ಅವರಿಗೆ ಈ ಬಗ್ಗೆ ಮನವಿ ಸಲ್ಲಿಸಿದ್ದು, ತೀವ್ರ ಸಂಚಲನಕ್ಕೆ ಕಾರಣವಾಗಿದೆ.
ಬಿಎಂಡಬ್ಲ್ಯು ಕಾರು ಗುದ್ದಿ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಮಹಾನಗರ ವರ್ಲಿ ಪ್ರದೇಶದಲ್ಲಿ ಜುಲೈ 7 ರಂದು ನಡೆದಿದ್ದು, ಸಾವಿಗೆ ಕಾರಣನಾದ ಆರೋಪಿ ಘಟನೆ ನಡೆದು ಮೂರು ದಿನಗಳ ಬಳಿಕ ಆತನನ್ನು ಬಂಧಿಸಲಾಗಿದೆ.
ಸಂಧ್ಯಾ ಎನ್ನುವ ಯುವತಿಯೊಬ್ಬಳು ಪೊಲೀಸ್ ಅಧಿಕಾರಿಗಳು ಸೇರಿದಂತೆ ಸುಮಾರು 50 ಜನರನ್ನು ಮದುವೆಯಾಗಿ ವಂಚಿಸಿ ಅವರಿಂದ ಹಣ, ಚಿನ್ನ ದೋಚುತ್ತಿದ್ದ ಘಟನೆ ತಮಿಳುನಾಡಿನಲ್ಲಿ ನಡೆದಿದೆ.
ಮಾನವ ಅಂಗಾಂಗಗಳನ್ನು ಅನಧಿಕೃತವಾಗಿ ಪಡೆದು ಕಸಿ ದಂಧೆ ನಡೆಸುತ್ತಿದ್ದ ಜಾಲವೊಂದನ್ನು ದೆಹಲಿ ಪೊಲೀಸರು ಭೇದಿಸಿದ್ದಾರೆ. ಈ ಪ್ರಕರಣದಲ್ಲಿ ವೈದ್ಯರು ಸೇರಿದಂತೆ ಏಳು ಜನರನ್ನು ಬಂಧಿಸಿದ್ದಾರೆ
ಇತ್ತೀಚೆಗೆ ನಡೆದ ಹಾಥರಸ್ ಕಾಲ್ತುಳಿತದಲ್ಲಿ ನೂರಾರು ಮಂದಿ ಜೀವ ಕಳೆದುಕೊಂಡಿದ್ದರು. ಆ ಸಮಯದಲ್ಲಿದ್ದ ಕರ್ತವ್ಯ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ತೋರಿದ ಆರೋಪದ ಮೇಲೆ ಉಪವಿಭಾಗೀಯ ಮ್ಯಾಜಿಸ್ಟ್ರೇಟ್,
ಶಾಲಾ- ಕಾಲೇಜಿನ 828 ವಿದ್ಯಾರ್ಥಿಗಳಲ್ಲಿ ಹೆಚ್ಐವಿ ಪಾಸಿಟಿವ್ ಕಾಣಿಸಿಕೊಂಡಿದ್ದು ಇದರಲ್ಲಿ 47 ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ಈಶಾನ್ಯ ರಾಜ್ಯವಾದ ತ್ರಿಪುರದಲ್ಲಿ ನಡೆದಿದೆ.
ಜಮ್ಮು-ಕಾಶ್ಮೀರದಲ್ಲಿದ ಮತ್ತೆ ಭಾರತೀಯ ಸೇನೆ ನಡೆಸಿದ ಪ್ರತ್ಯೇಕ ಕಾರ್ಯಾಚರಣೆಯಲ್ಲಿ ಬರೋಬ್ಬರಿ ಆರು ಉಗ್ರರನ್ನು ಹೊಡೆದುರುಳಿಸಲಾಗಿದೆ. ಕುಲ್ಗಾಮ್ ಮತ್ತು ಶೋಪಿಯಾನ್ ಜಿಲ್ಲೆಗಳಲ್ಲಿ
‘ಋತುಚಕ್ರ ರಜೆಯು ನೀತಿಗೆ ಸಂಬಂಧಿಸಿದ ವಿಷಯ. ಅದು ಕೋರ್ಟ್ಗಳು ಪರಿಶೀಲಿಸುವ ವಿಷಯವಲ್ಲ’ ಎಂದಿರುವ ಸುಪ್ರೀಂಕೋರ್ಟ್, ‘ರಾಜ್ಯಗಳು ಮತ್ತು ಇತರ ಮಧ್ಯಸ್ಥಗಾರರೊಂದಿಗೆ ಸಮಾಲೋಚನೆ
ಇಂದು ಸೋಮವಾರ (ಜುಲೈ 8) ಸಂಜೆ ರಷ್ಯಾ ರಾಜಧಾನಿ ಮಾಸ್ಕೋ ವನ್ನು ಪ್ರಧಾನಿ ನರೇಂದ್ರ ಮೋದಿ ತಲುಪಿದ್ದಾರೆ. ನರೇಂದ್ರ ಮೋದಿ ಅವರು ರಷ್ಯಾ ತಲುಪುತ್ತಲೇ ಅದ್ಧೂರಿಯಾಗಿ ಸ್ವಾಗತ ಸಿಕ್ಕಿದೆ.
ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯಲ್ಲಿ ಸೇನಾ ವಾಹನಗಳ ಮೇಲೆ ಭಯೋತ್ಪಾದಕರು ದಾಳಿ ನಡೆಸಿದ್ದು ಓರ್ವ ಯೋಧ ಗಾಯಗೊಂಡಿರುವ ಘಟನೆ ನಡೆದಿದೆ ಎಂಬ ಮಾಹಿತಿ ಮೂಲಗಳಿಂದ ತಿಳಿದು ಬಂದಿದೆ.
ಉತ್ತರಾಖಂಡದ ಒಂಬತ್ತು ಜಿಲ್ಲೆಗಳಲ್ಲಿ ಜುಲೈ 7 ಮತ್ತು 8 ರಂದು ಭಾರಿ ಮಳೆಯಾಗುವ ಮುನ್ಸೂಚನೆಯು ಕಳೆದ ಶನಿವಾರ ಚಾರ್ ಧಾಮ್ ಯಾತ್ರೆಯನ್ನು ಕೆಲವು ದಿನಗಳವರೆಗೆ ಸ್ಥಗಿತಗೊಳಿಸಲು ನಿರ್ಧರಿಸಲಾಗಿದೆ.
ರಾಜ್ಯ ಸರ್ಕಾರದೊಂದಿಗೆ ಸಮಾಲೋಚನೆ ನಡೆಸಿ ಉದ್ಯೋಗಸ್ಥ ಮಹಿಳೆಯರಿಗೆ ಮುಟ್ಟಿನ ರಜೆ ನೀಡುವ ಕುರಿತು ಮಾದರಿ ನೀತಿ ರೂಪಿಸುವಂತೆ ಸುಪ್ರೀಂಕೋರ್ಟ್ ಸೋಮವಾರ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿದೆ.
ಅಸ್ಸಾಂನಲ್ಲಿ ಭೀಕರ ಪ್ರವಾಹ ಸಂಭವಿಸಿದ್ದು, ಕಾಜಿರಂಗ ರಾಷ್ಟ್ರೀಯ ಉದ್ಯಾನವನದಲ್ಲಿ ಸುಮಾರು 131 ಪ್ರಾಣಿಗಳು ಸಾವನ್ನಪ್ಪಿದೆ ಎಂದು ಅರಣ್ಯ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.
ಮಿನಿ ಬಸ್ ಪಲ್ಟಿ ಹೊಡೆದಿದ್ದು, 50ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ಹರಿಯಾಣದಲ್ಲಿ ನಡೆದಿದೆ. ಬಸ್ನಲ್ಲಿ 40ಕ್ಕೂ ಹೆಚ್ಚು ಶಾಲಾ ಮಕ್ಕಳಿದ್ದರು ಎಂದು ತಿಳಿದುಬಂದಿದೆ.
ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ದೆಹಲಿ ಪೊಲೀಸರು ಹೊಸ ಕ್ರಿಮಿನಲ್ ಕೋಡ್, ಭಾರತೀಯ ನ್ಯಾಯ ಸಂಹಿತಾ ಅಡಿ ಎಫ್ಐಆರ್ ದಾಖಲು ಮಾಡಿದ್ದಾರೆ.
ಕುಲ್ಗಾಮ್ ಜಿಲ್ಲೆಯಲ್ಲಿ ಶನಿವಾರ ನಡೆದ ಎನ್ಕೌಂಟರ್ನಲ್ಲಿ ಭದ್ರತಾ ಪಡೆಗಳಿಂದ ಹತರಾದ ಭಯೋತ್ಪಾದಕರು ಕಬೋರ್ಡ್ನೊಳಗೆ ನಿರ್ಮಿಸಲಾದ ಬಂಕರ್ನಲ್ಲಿ ಅಡಗಿಕುಳಿತಿದ್ದರು ಎಂದು ಮಾಹಿತಿ ಸಿಕ್ಕಿದೆ.
ಉಕ್ರೇನ್, ರಷ್ಯಾ ಯುದ್ಧ ಆರಂಭವಾದ ಬಳಿಕ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ರಷ್ಯಾ ಪ್ರವಾಸ ಕೈಗೊಂಡಿದ್ದಾರೆ. ಸೋಮವಾರ, ಮಂಗಳವಾರ ರಷ್ಯಾದಲ್ಲಿ ಹಲವು ಸುತ್ತಿನ ಮಾತುಕತೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
ಉತ್ತರ ಭಾರತದಲ್ಲಿ 2002-2021ರಲ್ಲಿ 450 ಕ್ಯೂಬಿಕ್ ಕಿ.ಮೀ. ವ್ಯಾಪ್ತಿಯಲ್ಲಿನ ಅಂತರ್ಜಲ ನಷ್ಟವಾಗಿದೆ ಎಂದು ವರದಿಯೊಂದು ತಿಳಿಸಿದೆ.
ಒಡಿಶಾದಲ್ಲಿ ಐತಿಹಾಸಿಕ ಪುರಿ ಜಗನ್ನಾಥ ರಥಯಾತ್ರೆಯ ವೇಳೆಯೂ ಕಾಲ್ತುಳಿತ ಸಂಭವಿಸಿದ್ದು, ಒಬ್ಬ ವ್ಯಕ್ತಿ ಮೃತಪಟ್ಟರೆ, 400ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.
ಒಡಿಶಾದ ಪುರಿ ಜಗನ್ನಾಥ ದೇವಾಲಯದಲ್ಲಿ ಎರಡು ದಿನ ವಾರ್ಷಿಕ ರಥಯಾತ್ರೆ ಇಂದಿನಿಂದ ಆರಂಭವಾಗಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ಸೇರಿದಂತೆ ಹಲವು ಗಣ್ಯರು ಭಾಗಿಯಾಗಿದ್ದರು.