Showing 20 of 114 posts • Page 1 of 6
ಪೊಲೀಸ್ ಸಬ್ ಇನ್ಸಪೆಕ್ಟರ್ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಲಬುರಗಿ ನಗರದ ಗಂಗಾ ನಗರದ ನಿವಾಸದಲ್ಲಿ ನಡೆದಿದೆ.
ಎಂಟು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳನ್ನ ಕಲಬುರಗಿಯ ವಾಡಿ ಪೊಲೀಸರು ಬಂಧಿಸಿದ್ದಾರೆ.
ಕಲಬುರಗಿ-ಬೆಂಗಳೂರು ಸಂಚಾರ ಜೂನ್ 10 ರಿಂದ ಪುನರಾರಂಭಗೊಳ್ಳುತ್ತಿದೆ. ಸ್ಟಾರ್ ಏರ್ ಸಂಸ್ಥೆಯ 76 ಸೀಟುಗಳ ವಿಮಾನ ವಾರದ 7 ದಿನ ಸಂಚಾರ ಮಾಡಲಿದೆ.
ಪೋಕ್ಸೊ ಕೇಸ್ನಲ್ಲಿ ಲಂಚ ಪಡೆಯುತ್ತಿದ್ದ ಕಾನ್ಸ್ಟೇಬಲ್, ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ನೀಟ್ ಪರೀಕ್ಷೆ ಬರೆದಿದ್ದ ಯುವತಿಯೊಬ್ಬಳು ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಕೋರ್ಟ್ ವೃತ್ತದ ಬಳಿಯ ಅಪಾರ್ಟ್ಮೆಂಟ್ನಲ್ಲಿ ನಡೆದಿದೆ.
ಕ್ರೂಸರ್, ಲಾರಿ ಮಧ್ಯೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಒಂದೇ ಕುಟುಂಬದ ಐವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕಲಬುರಗಿ ಜಿಲ್ಲೆ ಚಿತ್ತಾಪುರ ತಾಲೂಕಿನ ಲಾಡ್ಲಾಪುರ ಕ್ರಾಸ್ ಬಳಿ ನಡೆದಿದೆ.
ಪತಿಯ ನಿರಂತರ ಕಿರುಕುಳಕ್ಕೆ ಬೇಸತ್ತು 4 ತಿಂಗಳ ಗರ್ಭಿಣಿಯೊಬ್ಬರು ತವರು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಲಬುರಗಿ ತಾಲ್ಲೂಕಿನ ಔರಾದ್ (ಬಿ) ಗ್ರಾಮದಲ್ಲಿ ನಡೆದಿದೆ.
ಯುವಕನೊಬ್ಬನನ್ನು ಕಲ್ಲಿನಿಂದ ಜಜ್ಜಿ ಕೊಲೆ ಮಾಡಿರುವ ಘಟನೆ ಚಿತ್ತಾಪುರ ತಾಲೂಕಿನ ಅಲ್ಲೂರ್ (ಬಿ) ಗ್ರಾಮದಲ್ಲಿ ನಡೆದಿದೆ.
ವಾಡಿ ಪಟ್ಟಣದಲ್ಲಿ ಗುಂಡು ಹಾರಿಸಿ ಮಚ್ಚಿನಿಂದ ಕೊಚ್ಚಿ ವ್ಯಕ್ತಿಯ ಭೀಕರ ಹತ್ಯೆ ಮಾಡಿರುವ ಘಟನೆ ಕಲಬುರಗಿ ಜಿಲ್ಲೆ ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣದ ಬಲರಾಮ್ ಚೌಕ್ ಬಳಿ ನಡೆದಿದೆ.
ತೀವ್ರ ಬಿಸಿಲಿನ ನಡುವೆಯೂ ಕರ್ತವ್ಯ ನಿರ್ವಹಿಸುತ್ತಿರುವ ಟ್ರಾಫಿಕ್ ಪೊಲೀಸ್ ಸಿಬ್ಬಂದಿಯ ಕಷ್ಟವನ್ನು ಮನಗಂಡ ಪೊಲೀಸ್ ಆಯುಕ್ತ ಡಾ. ಶರಣಪ್ಪ ಎಸ್.ಡಿ. ಅವರು ವಿಶೇಷ ಕ್ರಮ ಕೈಗೊಂಡಿದ್ದಾರೆ.
ಐಪಿಎಲ್ ಬೆಟ್ಟಿಂಗ್ನಲ್ಲಿ ಹಣ ಕಳೆದುಕೊಂಡ ವ್ಯಕ್ತಿಯೊಬ್ಬ ನಾಗೂರ ಸೇತುವೆ ಬಳಿ ಬೆಣ್ಣೆತೊರಾ ಜಲಾಶಯದ ಹಿನ್ನೀರಿಗೆ ಜಿಗಿದು ಆತ್ಮಹತ್ಯೆಗೆ ಶರಣಾಗಿದ್ದಾನೆ.
ಸರ್ಕಾರಿ ಶಾಲಾ ಶಿಕ್ಷಕಿಯೊಬ್ಬರ ಮೃತದೇಹ ರಸ್ತೆಬದಿ ಅರೆಬರೆ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಪೊಲೀಸರು ಕೊಲೆ ಶಂಕೆ ವ್ಯಕ್ತಪಡಿಸಿದ್ದಾರೆ. ಕಲಬುರಗಿ ನಿವಾಸಿಯಾಗಿರುವ ಜ್ಯೋತಿ ಕಪಾಳೆ (57) ಕೊಲೆಯಾದವರು ಎಂಬ ಮಾಹಿತಿ ತಿಳಿದು ಬಂದಿದೆ.
ಕೆಟಿಗ, ಕ್ಯಾನ್ಸರನ್ನು ಗೆದ್ದ ಮತ್ತು ಸಮಾಜಸೇವಕ ಯುವರಾಜ್ ಸಿಂಗ್ ಅವರ YouWeCan ಫೌಂಡೇಶನ್, ಶಓಮಿ ಇಂಡಿಯಾದ ಬೆಂಬಲದೊಂದಿಗೆ, ಸ್ತನ ಕ್ಯಾನ್ಸರ್ ಗಾಗಿ 10,000 ಮಹಿಳೆಯರನ್ನು ಸ್ಕ್ರೀನಿಂಗ್ಗೆ ಒಳಪಡಿಸಿ ಮತ್ತು ಕರ್ನಾಟಕದ ಸೇವಾವಂಚಿತ ಪ್ರದೇಶಗಳಲ್ಲಿ ಮಹಿಳೆಯರಿಗಾಗಿ ಆರಂಭಿಕ ಪತ್ತೆಹಚ್ಚುವಿಕೆ ಮತ್ತು ಶುಶ್ರೂಷೆಗೆ ಪ್ರವೇಶಾವಕಾಶವನ್ನು ಬಲಪಡಿಸುವ ಮೂಲಕ ಸ್ವಸ್ಥ ಮಹಿಳಾ ಸ್ವಸ್ಥ ಭಾರತ ತಡೆಯಾತ್ಮಕ ಆರೋಗ್ಯಶುಶ್ರೂಷಾ ಕಾರ್ಯಕ್ರಮದ 1ನೆ ಹಂತವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ.
ಪ್ರೀತಿಸಿ ಮದುವೆಯಾದ ಕೇವಲ ಎರಡು ತಿಂಗಳಲ್ಲೇ ನವವಿವಾಹಿತೆಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಸಿದ್ದೇಶ್ವರ ಕಾಲೋನಿಯಲ್ಲಿ ಶುಕ್ರವಾರ ನಡೆದಿದೆ.
ನಗರದ ಲಾಡ್ಜ್ ಒಂದರ ಹಿಂಭಾಗದ ಪಾಳುಬಿದ್ದ ಪಾರ್ಕ್ನಲ್ಲಿ ಯುವಕನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ.
ಬಿಜೆಪಿ ಕಾಯಕರ್ತೆಯೊಬ್ಬರು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಕಲಬುರಗಿಯ ನಂದಿಕೂರ ಗ್ರಾಮದಲ್ಲಿ ನಡೆದಿದೆ.
ನೀರು ಸರಬರಾಜು ಮಾಡುವ ಕಾಮಗಾರಿಗೆ ಸಂಬಂಧಿಸಿದ ರಸ್ತೆಬದಿಯಲ್ಲಿ ದಾಸ್ತಾನಿರಿಸಿದ್ದ ಪೈಪ್ ಗಳು ಬೆಂಕಿಗಾಹುತಿಯಾದ ಘಟನೆ ನಗರದ ಬಸವೇಶ್ವರ ಚೌಕ್ ಸಮೀಪ ನಡೆದಿದೆ.
ಶಾಲಾ ಬಾಲಕಿ ಮೇಲೆ ಗೂಡ್ಸ್ ವಾಹನ ಹರಿದ ಪರಿಣಾಮ ಬಾಲಕಿಯ ಕಾಲು ಕಟ್ ಆಗಿ ಗಂಭೀರ ಗಾಯಗೊಂಡಿರುವ ಘಟನೆ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಇಜೇರಿ ಗ್ರಾಮದಲ್ಲಿ ನಡೆದಿದೆ.
ಕಾರು- ಬೈಕ್ ನಡುವೆ ಢಿಕ್ಕಿಯಾಗಿ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಮೃತಪಟ್ಟಿರುವ ಘಟನೆ ಕಮಲಾಪುರ ತಾಲ್ಲೂಕಿನ ಮಹಾಗಾಂವ್ ಕ್ರಾಸ್ ಸಮೀಪದಲ್ಲಿ ಶನಿವಾರ ರಾತ್ರಿ ನಡೆದಿದೆ.
ಇಂಜಿನ್ ಓವರ್ ಹೀಟ್ ಆಗಿ ಚಲಿಸುತ್ತಿದ್ದ ಕಾರು ಬೆಂಕಿಗೆ ಆಹುತಿಯಾದ ಘಟನೆ ನಗರದ ಸರ್ದಾರ್ ವಲ್ಲಭಭಾಯ್ ಪಟೇಲ್ ವೃತ್ತದ ಸಮೀಪವಿರುವ ಕನ್ನಡ ಭವನದ ಎದುರು ನಡೆದಿದೆ.