ಕಲಬುರಗಿ : ಯುಗಾದಿ ಹಬ್ಬದ ಸಂಭ್ರಮದ ನಡುವೆ ಕಲಬುರಗಿಯಲ್ಲಿ ದುರಂತವೊಂದು ಸಂಭವಿಸಿದೆ. ಚಲಿಸುತ್ತಿದ್ದ ಸಾರಿಗೆ ಬಸ್‍ನಲ್ಲೇ ಹೃದಯಾಘಾತದಿಂದ ಕಂಡಕ್ಟರ್ ಸಾವನ್ನಪ್ಪಿದ್ದಾರೆ.

ಕಲಬುರಗಿ ಜಿಲ್ಲೆಯ ಫರಹತಾಬಾದ್ ಬಳಿ ಘಟನೆ ನಡೆದಿದ್ದು,ಮೃತರನ್ನು ಯಡ್ರಾಮಿ ತಾಲೂಕಿನ ಜವಳಗಾ ಗ್ರಾಮದ ಕಾಶೀನಾಥ್ (50) ಎಂದು ಗುರುತಿಸಲಾಗಿದೆ. ಕಲಬುರಗಿಯಿಂದ ಜೇವರ್ಗಿಗೆ ಬಸ್ ಹೊರಟಿತ್ತು. ಈ ವೇಳೆ ಫರಹತಾಬಾದ್ ಬಳಿ ಏಕಾಏಕಿಯಾಗಿ ಅವರು ಕುಸಿದು ಬಿದ್ದದ್ದಾರೆ.

ತಕ್ಷಣ ಚಾಲಕ ಹಾಘೂ ಪ್ರಯಾಣಿಕರು ಸೇರಿ ಬಸ್‍ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದಾರೆ. ಅಷ್ಟರಲ್ಲಾಗಲೇ ಅವರು ಸಾವನ್ನಪ್ಪಿದ್ದಾರೆ. ಫರಹತಾಬಾದ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.