ಕಲಬುರಗಿ: ಬಿಸಿಲ ನಾಡು ಕಲಬುರಗಿಯಲ್ಲಿ ಅಳಿಯನ ಮೂಲಕ ಖರ್ಗೆ ಸೇಡು ತೀರಿಸಿಕೊಂಡಿದ್ದಾರೆ. ಕಲಬುರಗಿಯಲ್ಲಿ ಬಿಜೆಪಿಯ ಉಮೇಶ್ ಜಾಧವ್ ಅವರ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಅವರ ಅಳಿಯ ರಾಧಾಕೃಷ್ಣ ದೊಡ್ಡಮನಿ ಅವರು ಗೆಲುವು ಸಾಧಿಸಿದ್ದಾರೆ.
ರಾಧಾಕೃಷ್ಣ ದೊಡ್ಡಮನಿ ಅವರು ಇದುವರೆಗೆ ಚುನಾವಣೆಗಳ ವೇಳೆ ಮಲ್ಲಿಕಾರ್ಜುನ ಖರ್ಗೆ, ಪ್ರಿಯಾಂಕ್ ಖರ್ಗೆ ಅವರ ಬೆನ್ನಿಗೆ ನಿಂತು ಕೆಲಸ ಮಾಡಿದ್ದರು. ಇನ್ನು, ಮಲ್ಲಿಕಾರ್ಜುನ ಖರ್ಗೆ ಅವರು ಎಐಸಿಸಿ ಅಧ್ಯಕ್ಷರೂ ಆಗಿದ್ದು, ಸ್ಥಳೀಯವಗಿ ಹಿಡಿತ ಸಾಧಿಸಲು ಅಳಿಯನ ಗೆಲುವು ನಿರ್ಣಾಯಕವಾಗಿತ್ತು.
ಇತ್ತ ಬಿಜೆಪಿ ಅಭ್ಯರ್ಥಿ ಉಮೇಶ್ ಜಾಧವ್ ಅವರು ನರೇಂದ್ರ ಮೋದಿ ಅವರ ಅಲೆ, ಭಾರತ್ ಮಾಲಾ ಯೋಜನೆ, ವಂದೇ ಭಾರತ್ ರೈಲು ಸೇರಿ ಹಲವು ಯೋಜನೆಗಳನ್ನು ಮುಂದಿಟ್ಟುಕೊಂಡು ಉಮೇಶ್ ಜಾಧವ್ ಅವರು ಚುನಾವಣೆ ಎದುರಿಸಿದ್ದರು. ಆದರೂ ಅದು ಫಲ ನೀಡಿಲ್ಲ.

