ಕಲಬುರಗಿ: ನೇಣು ಬಿಗಿದುಕೊಂಡು ಪೊಲೀಸ್ ಕಾನ್​ಸ್ಟೇಬಲ್ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಕಿಗೆ ಬಂದಿದೆ. ಸಾವನ್ನಪ್ಪಿರುವ ವ್ಯಕ್ತಿಯನ್ನು ಮಾಡಬೂಳ ಠಾಣೆಯ ಪೊಲೀಸ್ ಕಾನ್​ಸ್ಟೇಬಲ್ ದೊಡ್ಡೇಶ್ (40) ಎಂದು ಗುರುತಿಸಲಾಗಿದೆ.

ಕೌಟುಂಬಿಕ ಕಲಹ ಹಿನ್ನೆಲೆ ದೊಡ್ಡೇಶ್​ ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ. ಕಲಬುರಗಿ ನಗರದ ಉದನೂರ ರಸ್ತೆಯಲ್ಲಿರುವ ಜಮೀನಿನಲ್ಲಿ ದೊಡ್ಡೇಶ್ ನೇಣಿಗೆ ಶರಣಾಗಿದ್ದಾರೆ.

ಕಲಬುರಗಿ ನಗರದ ಹೈ ಕೋರ್ಟ್ ಬಳಿ ದೊಡ್ಡೇಶ್ ವಾಸವಿದ್ದರು.  ಗುಲ್ಬರ್ಗಾ ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂಬ ಮಾಹಿತಿ ತಿಳಿದು ಬಂದಿದೆ.