Showing 20 of 116 posts • Page 5 of 6
ಇಲ್ಲಿನ ಸಪ್ತಗಿರಿ ಆರೆಂಜ್ ಹೋಟೆಲ್ ನಲ್ಲಿ ಅಡುಗೆ ಸಿಲಿಂಡರ್ ಸ್ಫೋಟಗೊಂಡಿರುವ ಘಟನೆ ನಡೆದಿದೆ. ಪ್ರಕರಣದಲ್ಲಿ 11 ಮಂದಿ ಕಾರ್ಮಿಕರು ಗಾಯಗೊಂಡಿದ್ದು, ನಾಲ್ವರ ಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ತಿಳಿದು ಬಂದಿದೆ.
ಕುವೈತ್ನಲ್ಲಿ ಭೀಕರ ಅಗ್ನಿ ದುರಂತದಲ್ಲಿ ಮೃತಪಟ್ಟ ಕಲಬುರಗಿಯ ವಿಜಯ್ ಕುಮಾರ್ ಪ್ರಸನ್ನ ಕುಟುಂಬಕ್ಕೆ ರಾಜ್ಯ ಸರ್ಕಾರ ಮಂಗಳವಾರ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದೆ.
ಕಲ್ಯಾಣ ಕರ್ನಾಟಕ ಭಾಗದ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಎಲ್ಕೆಜಿ, ಯುಕೆಜಿ ತರಗತಿಗಳನ್ನು ನಡೆಸುವ ಮೂಲಕ ಸರ್ಕಾರ ಅಂಗನವಾಡಿಗಳನ್ನು ಮುಚ್ಚುವ ಹುನ್ನಾರ ನಡೆಸಿದೆ
ಮುಸ್ಲಿಂ ಸಮಾಜದ ಅಧಿಕಾರಿಗಳು ತಪ್ಪುಗಳು ಮಾಡಿದ್ದರೂ ಅವರ ರಕ್ಷಣೆಗೆ ನಿಂತು ಜಿಲ್ಲಾಧಿಕಾರಿ ಅವರು ಸ್ವಜಾತಿ ಪ್ರೇಮ ಮೆರೆಯುತ್ತಿದ್ದಾರೆ ಎಂದು ಬಿಜೆಪಿ ಯುವ ಮುಖಂಡ ಶಿವಲಿಂಗ ಹಳಿಮನಿ ಹೇಳಿದರು.
ಸಮುದಾಯ ಆರೋಗ್ಯ ಕೇಂದ್ರದ ಡಿ ಗ್ರೂಪ್ ಉದ್ಯೋಗಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಚಿಂಚೋಳಿ ತಾಲೂಕಿನ ಕುಂಚಾವರಂ ಗ್ರಾಮದಲ್ಲಿ ನಡೆದಿದೆ.
ಉತ್ತರ ಪ್ರದೇಶದ ವಾರಾಣಸಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ನೈಸರ್ಗಿಕ ಕೃಷಿ ತರಬೇತಿ ಪಡೆದಿರುವ ಕೃಷಿ ಸಖಿಯರೊಂದಿಗೆ ಸಂವಾದ ನಡೆಸಲಿದ್ದು, ಈ ಕಾರ್ಯಕ್ರಮದಲ್ಲಿ ರಾಜ್ಯದ ಇಬ್ಬರು ಕೃಷಿ ಸಖಿಯರು ಪಾಲ್ಗೊಳ್ಳಲಿದ್ದಾರೆ
ಬಡ ಜನರಿಗೆ ಉಪಯೋಗ ಆಗಲಿ ಅಂತ ಆರಂಭಿಸಿರುವ ಜಯದೇವ ಹೃದ್ರೋಗ ಆಸ್ಪತ್ರೆ, ಆದರೆ ಕಳೆದ ಮೂರು ದಿನಗಳಿಂದ ಆ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ಮಾಡುವುದನ್ನೇ ಬಂದ್ ಮಾಡಲಾಗಿದೆ.
ಚಂದ್ರಕಾಂತ ಪಾಟೀಲ ಪಬ್ಲಿಕ್ ಸ್ಕೂಲ್ನ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು ಅಳಿವಿನಂಚಿನಲ್ಲಿರುವ ಸಸ್ಯಗಳು ಮತ್ತು ಪ್ರಾಣಿಗಳ ಬಗ್ಗೆ ಜಾಗೃತಿ ಮೂಡಿಸಲು ನಗರದಲ್ಲಿ ರ್ಯಾಲಿ ಮತ್ತು ವಾಕ್ಥಾನ್ ನಡೆಸಿದರು.
ಅಕ್ರಮವಾಗಿ ವಾಹನದಲ್ಲಿ ಸಾಗಿಸುತ್ತಿದ್ದ ಸುಮಾರು 150 ಕ್ವಿಂಟಾಲ್ ಪಡಿತರ ಅಕ್ಕಿಯನ್ನು ಶಹಾಬಾದ ನಗರದ ಪೊಲೀಸರು ವಶಪಡಿಸಿಕೊಂಡಿದ್ದಾರೆ.ಪಡಿತರ ಅಕ್ಕಿ ವಿತರಿಸದೇ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಇದೇ ಜೂನ್ 14ರಂದು ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಪ್ರಗತಿ ಪರಿಶೀಲನಾ
ಆಳಂದ ತಾಲ್ಲೂಕಿನ ಕಮಲಾನಗರ ಗ್ರಾಮದಲ್ಲಿ ಮಂಗಳವಾರ ರಾತ್ರಿ ಸುರಿದ ಧಾರಾಕಾರ ಮಳೆಗೆ ಹಳ್ಳದ ನೀರು ದನದ ಕೊಟ್ಟಿಗೆಗೆ ನುಗ್ಗಿ ಜೋಡೆತ್ತುಗಳು ಸ್ಥಳದಲ್ಲೇ ಮೃತಪಟ್ಟಿವೆ.ರೈತ ಕಲ್ಯಾಣಿ ಬಸವರಾಜ
ಅಫಜಲಪುರ ತಾಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಸತಿ ನಿಲಯದಲ್ಲಿ ನೂರಾರು ಗ್ರಾಮೀಣ ಪ್ರದೇಶದ ಮಕ್ಕಳು ವಾಸವಾಗಿದ್ದು, ಸುಸಜ್ಜಿತ ಕಟ್ಟಡ ವ್ಯವಸ್ಥೆ ಇದೆಯಾದರೂ ವಸತಿ ನಿಲಯಕ್ಕೆ ತೆರಳಲು ರಸ್ತೆಯೇ ಇಲ್ಲ.
2023-24ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ರೈತರಿಗೆ ಬೆಳೆ ವಿಮೆ ಪರಿಹಾರ ಮಂಜೂರು ಮಾಡಲಾಗಿದೆ. ರೈತರು ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆ ಜೋಡಣೆ ಮಾಡದಿದ್ದರೆ ಖಾತೆಗೆ ಬೆಳೆ ವಿಮೆ ಪರಿಹಾರ ಹಣ ಜಮೆ ಆಗುವುದಿಲ್ಲ
ಮೂರನೇ ಬಾರಿ ಪ್ರಧಾನಿಯಾಗಿ ಮೋದಿ ಪ್ರಮಾಣ ವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ಚಿತ್ತಾಪುರ ತಾಲೂಕಿನ ಸುಗೂರ ಎನ್ ಗ್ರಾಮದಲ್ಲಿ ಬಿಜೆಪಿ ಮಂಡಲದ ಸದಸ್ಯರು ಹಾಗೂ ಭಾರತೀಯ ಜನತಾ ಪಕ್ಷದ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಾಚರಣೆ ಆಚರಿಸಿದರು.
ಗೂಡ್ಸ್ ಮಿನಿ ಟೆಂಪೋ ಪಲ್ಟಿ ಹೊಡೆದ ಪರಿಣಾಮ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕಲಬುರಗಿ ಜಿಲ್ಲೆಯ ಕಮಲಾಪುರ ತಾಲೂಕಿನ ಡೊಂಗರಗಾಂವ್ ಕ್ರಾಸ್ ಬಳಿ ನಡೆದಿದೆ.
ತೀವ್ರ ಕುತೂಹಲ ಕೆರಳಿಸಿದ್ದ ಲೋಕಸಭಾ ಚುನಾವಣೆ ಫಲಿತಾಂಶ 2024 ಪ್ರಕಟವಾಗಿದ್ದು, ಫಲಿತಾಂಶ ಅನೇಕರ ಲೆಕ್ಕಾಚಾರಗಳನ್ನು ಬುಡಮೇಲು ಮಾಡಿದೆ.
ಬಿಸಿಲ ನಾಡು ಕಲಬುರಗಿಯಲ್ಲಿ ಅಳಿಯನ ಮೂಲಕ ಖರ್ಗೆ ಸೇಡು ತೀರಿಸಿಕೊಂಡಿದ್ದಾರೆ. ಕಲಬುರಗಿಯಲ್ಲಿ ಬಿಜೆಪಿಯ ಉಮೇಶ್ ಜಾಧವ್ ಅವರ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಅವರ ಅಳಿಯ ರಾಧಾಕೃಷ್ಣ
ತಾಲೂಕಿನ ಶಿರವಾಳ ಗ್ರಾಮದ ಸರಕಾರಿ ಶಾಲೆಗೆ ಮಕ್ಕಳು ತೆರಳಬೇಕಾದರೆ ಮೊದಲು ಕೆಸರು ಗದ್ದೆಯನ್ನು ದಾಟುವಂತಹ ಪರಸ್ಥಿತಿ ನಿರ್ಮಾಣವಾಗಿದೆ.
ಅಖಿಲ ಭಾರತ ಮಟ್ಟದಲ್ಲಿ ‘ಇಂಡಿಯಾ’ ಒಕ್ಕೂಟ 295ಕ್ಕೂ ಅಧಿಕ ಸ್ಥಾನಗಳನ್ನು ಗೆಲ್ಲುವುದು ನಿಶ್ಚಿತ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತರಾಜ್ ಸಚಿವ ಪ್ರಿಯಾಂಕ್ ಖರ್ಗೆ ವಿಶ್ವಾಸ ವ್ಯಕ್ತಪಡಿಸಿದರು.
ಸಂವಿಧಾನದ 371 (ಜೆ ) ಜಾರಿಯಿಂದ ರಾಜ್ಯದ ಇತರೆ ಜಿಲ್ಲೆಗಳಿಗೆ ಅನ್ಯಾಯವಾಗುತ್ತಿದೆ ಎಂದು ಜನರಿಗೆ ತಪ್ಪು ಸಂದೇಶ ನೀಡಲು ಬೆಂಗಳೂರಿನಲ್ಲಿ ಕೆಲವರು ಪ್ರತಿಭಟನೆ ನಡೆಸಿದರು. ಕಲಬುರಗಿಯಲ್ಲಿ ಬೃಹತ್ ಹೋರಾಟ ಪ್ರತಿಭಟನೆ ನಡೆಯಿತು.