Showing 16 of 116 posts • Page 6 of 6
ಬೇಸಿಗೆ ರಜೆ ಮುಗಿಸಿ ಶಾಲೆಗೆ ಹೊಸ ಉತ್ಸಹದಿಂದ ಮಕ್ಕಳು ಬರಲು ಎಸ್.ಡಿ.ಎಮ್.ಸಿ ಅಧ್ಯಕ್ಷ ಹೂವಣ್ಣಾ ಕರಗೂಳಿ ಅವರು ಶಾಲೆಯನ್ನು ತಳಿರು ತೋರಣಗಳಿಂದ ಸಿಂಗರಿಸಿ ರಂಗೋಲಿ ಹಾಕಿ ಮಕ್ಕಳಿಗೆ ಸಿಹಿ ನೀಡುವ ಮುಖಾಂತರ ಮಕ್ಕಳನ್ನು ಬರಮಾಡಿಕೊಂಡರು.
ಅಫಜಲಪುರ ತಾಲೂಕಿನಾಧ್ಯಂತ ಆಗ್ರೋಗಳಲ್ಲಿ ನಿಗದಿತ ಬೆಲೆಗೆ ಅನುಗುಣವಾಗಿ ರಸಗೊಬ್ಬರ, ಕೀಟನಾಶಕಗಳ ಮೇಲೆ ದುಬಾರಿ ಬೆಲೆ ಹೆರಿ ರೈತರಿಗೆ ಅನ್ಯಾಯ ಮಾಡುತ್ತಿದ್ದಾರೆ.
ಈಶಾನ್ಯ ಪದವೀಧರರ ಕ್ಷೇತ್ರದ ವಿಧಾನ ಪರಿಷತ್ ಅಭ್ಯರ್ಥಿ ಪರ ಪ್ರಚಾರ ಸಭೆ ಅಫಜಲಪುರ ಪಟ್ಟಣದ ನ್ಯಾಶನಲ್ ಫಂಕ್ಷನ್ ಹಾಲನಲ್ಲಿ ನಡೆಯಿತು.
ಕಲಬುರಗಿ ನಗರದ ಹೊರ ವಲಯ ಉದನೂರ್ ಬಳಿ ಕಳೆದ 1 ವರ್ಷದ ಹಿಂದಷ್ಟೆ ನಿರ್ಮಿಸಲಾಗಿದ್ದ ಬಹುಕೋಟಿ ರುಪಾಯಿ ವೆಚ್ಚದ ತ್ಯಾಜ್ಯ ಸಂಸ್ಕರಣಾ ಘಟಕ ಇತ್ತೀಚೆಗೆ ಸುರಿದ ಮಳೆಗೆ ಕುಸಿದು ಬಿದ್ದಿದೆ.
ತಾಲೂಕಿನಲ್ಲಿ ವಿಭಿನ್ನ ರೀತಿಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುವ ಯುವ ಬ್ರಿಗೇಡ್ ಕಾರ್ಯಕರ್ತರು ದೇವತೆ ಗ್ರಾಮ ಘತ್ತರಗಿ ಭಾಗ್ಯವಂತಿದೇವಿ ಗ್ರಾಮದಲ್ಲಿನ ಭೀಮಾನದಿಯ ದಡದಲ್ಲಿ ನದಿ ಸ್ವಚ್ಚತೆ ಮಾಡಿದರು.
ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿ ಹಣ ಡಬಲ್ ಮಾಡಿಕೊಡುವುದಾಗಿ ನಂಬಿಸಿ ಹಲವರಿಗೆ ಕೋಟ್ಯಂತರ ರೂಪಾಯಿ ವಂಚಿಸಿ, ದಂಪತಿ ಪರಾರಿಯಾಗಿರುವ ಘಟನೆ ನಗರದಲ್ಲಿ ನಡೆದಿದೆ.
ಲಾರಿ ಮತ್ತು ಟಿಟಿ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಕಲಬುರಗಿ ಮೂಲದ ಮೂವರು ಸಾವನ್ನಪ್ಪಿದ ಘಟನೆ ಅಯೋಧ್ಯೆ ಬಳಿ ನಡೆದಿದೆ.
ಆಧುನಿಕ ಜಗತ್ತಿನಲ್ಲಿ ದುಬಾರಿ ಬದುಕು ಬಡವರಿಗೆ ಮುಳುವಾಗಿರುವ ಕಾಲದಲ್ಲಿ ಶ್ರೀಮಂತಿಕೆಯ ಸ್ವರೂಪಿಗಳು ತಮ್ಮ ಹುಟ್ಟು ಹಬ್ಬಗಳನ್ನು ವಿಜೃಂಭಣೆಯಿಂದ ಆಚರಿಸಿಕೊಳ್ಳುತ್ತಾರೆ. ಮದ್ಯಪಾನಗಳ ಅಮಲಿನಲ್ಲಿ ದುಂದುವೆಚ್ಚದಲ್ಲಿ ಮಾಡುತ್ತಾರೆ.
ಸಮಾಜದಲ್ಲಿ ಹೆಣ್ಣಿನ ಮೇಲೆ ಹಿಂಸಾಪ್ರವೃತ್ತಿ ಹೆಚ್ಚುತ್ತಿದೆ. ಅದು ಸಹಜ ಎನ್ನುವ ವಾತಾವರಣ ಬೇರು ಬಿಡುತ್ತಿದೆ ಎಂದು ಜನವಾದಿ ಮಹಿಳಾ ಸಂಘಟನೆಯ ರಾಜ್ಯ ಉಪಾಧ್ಯಕ್ಷೆ ಕೆ.ಎಸ್.ವಿಮಲಾ ಕಳವಳ ವ್ಯಕ್ತಪಡಿಸಿದರು.
ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಎಲ್ಲೆಡೆ ಬಿಜೆಪಿ ಸೋಲುವಾಗ ಪ್ರಧಾನಿ ನರೇಂದ್ರ ಮೋದಿ ಅವರು ಹೇಗೆ 400 ಸ್ಥಾನ ಗೆಲ್ಲುವ ಘೋಷಣೆ ಮಾಡುತ್ತಾರೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರಶ್ನಿಸಿದ್ದಾರೆ.
ಹೊರ ದೇಶಕ್ಕೆ ಹೋದವರನ್ನು ತರುವುದಕ್ಕೆ ಅದರದೇ ಆದ ಪ್ರಕ್ರಿಯೆ ಇದೆ. ಪ್ರಜ್ವಲ್ ಪ್ರಕರಣದಲ್ಲಿ ಕೇಂದ್ರ ಸರಕಾರ ಕಾನೂನು ಪ್ರಕಾರ ಏನು ಮಾಡಬೇಕೋ ಅದನ್ನು ಮಾಡುತ್ತಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಹುಶಃ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಪ್ರಧಾನಿಯಾಗಿ ನೋಡುವ ಇಚ್ಛೆ ಇಲ್ಲದಂತೆ ಕಂಡುಬರುತ್ತದೆ’ ಎಂದು ಶಾಸಕ ಬಸವರಾಜ ಬೊಮ್ಮಾಯಿ ಕುಟುಕಿದ್ದಾರೆ.
ಕಾಂಗ್ರೆಸ್ನ ಹಿರಿಯ ಮುಖಂಡ, ಮಾಜಿ ಸಂಸದ ಇಕ್ಬಾಲ್ ಅಹಮದ್ ಸರಡಗಿ ಅವರು ಮಂಗಳವಾರ ತಡರಾತ್ರಿ ನಿಧನರಾದರು. ಈಶ್ವರ ಖಂಡ್ರೆ ಸೇರಿದಂತೆ ಹಲವರು ಸಂತಾಪ ಸೂಚಿಸಿದ್ದಾರೆ.
ಮಾಜಿ ಸಂಸದ ಇಕ್ಬಾಲ್ ಅಹ್ಮದ್ ಸರಡಗಿ (81) ವಿಧಿವಶರಾಗಿದ್ದಾರೆ. ಕಲಬುರಗಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಸುಕಿನ ಜಾವ 1 ಗಂಟೆಗೆ ನಿಧನರಾಗಿದ್ದಾರೆ
ರಾಜ್ಯ ಸರಕಾರ ಎಲ್ಲಾ ರಂಗಗಳಲ್ಲಿ ವಿಫಲವಾಗಿದ್ದು, ಒಂದು ವರ್ಷದ ಸಾಧನೆ ಶೂನ್ಯವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟೀಕಿಸಿದರು.
ಇಲ್ಲಿನ ಕಡಗಂಚಿ ಕೇಂದ್ರಿಯ ವಿಶ್ವ ವಿದ್ಯಾಲಯದ ಸಂಶೋಧನಾ ವಿದ್ಯಾರ್ಥಿ ಅನುಮಾನಸ್ಪದ ಮೃತಪಟ್ಟಿರುವ ಘಟನೆ ಬೆಳಕ್ಕಿಗೆ ಬಂದಿದ್ದು, ಘಟನಾ ಸ್ಥಳಕ್ಕೆ ನರೋಣಾ ಪೊಲೀಸರ ಭೇಟಿ ಪರಿಶೀಲನೆ ನಡೆಸಿದ್ದಾರೆ.