Ad

ಇಂಡಿಯಾ ಸೋಶಿಯಲ್ ಅಂಡ್ ಕಲ್ಬರಲ್ ಸೆಂಟ‌ರ್ ಅಬುಧಾಬಿ ಅಧ್ಯಕ್ಷರಾಗಿ ಜಯರಾಮ್ ರೈ ಅಧಿಕಾರ ಸ್ವೀಕಾರ

Jairam

ದುಬೈ: ವಿಶ್ವದಲ್ಲಿ ಅತೀ ದೊಡ್ಡ ಅನಿವಾಸಿ ಭಾರತೀಯ ಸಂಸ್ಥೆ ಇಂಡಿಯಾ ಸೋಶಿಯಲ್ ಅಂಡ್ ಕಲ್ಬರಲ್ ಸೆಂಟ‌ರ್ ಅಬುಧಾಬಿ ಅಧ್ಯಕ್ಷರಾಗಿ ಕನ್ನಡಿಗ ಮಿತ್ರಂಪಾಡಿ ಜಯರಾಮ್ ರೈ ಅಧಿಕಾರ ಸ್ವೀಕರಿಸಿದ್ದಾರೆ.

ಅರಬ್ ಸಂಯುಕ್ತ ಸಂಸ್ಥಾನದ ಅಬುಧಾಬಿಯಲ್ಲಿರುವ ಅನಿವಾಸಿ ಭಾರತೀಯರ ಭವ್ಯ ಸೌಧ ಇಂಡಿಯಾ ಸೋಶಿಯಲ್ ಅಂಡ್ ಕಲ್ಬರಲ್ ಸೆಂಟರ್ ವಿಶ್ವದಲ್ಲೇ ಅನಿವಾಸಿ ಭಾರತೀಯರ ಅತ್ಯಂತ ದೊಡ್ಡದಾಗಿರುವ ಸಂಘಟನೆಯ 2024 ನೇ ಸಾಲಿನ ಅಧ್ಯಕ್ಷರಾಗಿ ಶ್ರೀಯುತ ಜಯರಾಮ್ ರೈಯವರು ಪದಗ್ರಹಣ ಸಮಾರಂಭದಲ್ಲಿ ಅಧಿಕಾರ ಸ್ವೀಕರಿಸಿ, ಕಾರ್ಯ ನಿರ್ವಹಿಸುತ್ತಿದ್ದಾರೆ. ಶ್ರೀಯುತ ಜಯರಾಮ್ ರೈಯವರು ನಡೆದು ಬಂದಿರುವ ಹಾದಿಯನ್ನು ಅವಲೋಕಿಸುವುದಾದರೆ ಮಿತ್ರಂಪಾಡಿ ಜಯರಾಮ್ ರೈ ಅವರು ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಕೆದಂಬಾಡಿ ಗ್ರಾಮದ ದಿವಂಗತ ಮಿತ್ರಂಪಾಡಿ ಚನ್ನಪ್ಪ ರೈ ಹಾಗೂ ದಿಂಬ್ರಿ ಗುತ್ತು ಸರಸ್ವತಿ ರೈ ಅವರ ಸುಪುತ್ರ.

ಪ್ರಸ್ತುತ ಬಿನ್ ಫರ್ದನ್ ಸಂಸ್ಥೆಯ ಸಿ. ಎಫ್. ಓ. ಗ್ರೂಫ್ ಫೈನಾನ್ಸ್ ಮ್ಯಾನೇಜರ್ ಆಗಿರುವ ಶ್ರೀ ಮಿತ್ರಂಪಾಡಿ ಜಯರಾಮ್ ರೈಯವರ ಸಮಾಜ ಸೇವೆ, ಸಾಂಸ್ಕೃತಿಕ ಹಾಗೂ ಸಾಹಿತ್ಯ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಗಾಗಿ ಆರ್ಯಭಟ ಕಲ್ಬರಲ್ ಆರ್ಗನೈಸೇಶನ್ (ರಿ) ಬೆಂಗಳೂರು ಇವರು ಕೊಡಮಾಡುವ ಆರ್ಯಭಟ ಇಂಟರ್ ನ್ಯಾಶನಲ್ ಅವಾರ್ಡ್ 2024 ಪುರಸ್ಕೃತರು. ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಮಹಾ ಪೋಷಕರಾಗಿದ್ದು ಪರಿಷತ್ತಿನ ಮೂಲಕ ಸಾಹಿತ್ಯದ ನಡಿಗೆ ಗ್ರಾಮದ ಕಡೆಗೆ ಎಂಬ ಘೋಷ ವಾಕ್ಯದಲ್ಲಿ ‘ಗ್ರಾಮ ಸಾಹಿತ್ಯ ಸಂಭ್ರಮ’ ದ ಮೂಲಕ ಹಳ್ಳಿಹಳ್ಳಿಗೂ ಕನ್ನಡದ ಕಂಪನ್ನು ಪಸರಿಸುವ ಜೊತೆಗೆ ದೇಶ ವಿದೇಶಗಳಲ್ಲಿಲ್ಲೂ ಕನ್ನಡದ ಕಂಪು ಪಸರಿಸಲು ಕಾರಣೀಭೂತರಾದ ಇವರ ಕನ್ನಡ ಪರ ಸೇವೆಯನ್ನು ಸಹ ಗುರುತಿಸಲಾಗಿದೆ.

*ಧಾರ್ಮಿಕ ಹಾಗೂ ಸಮಾಜ ಸೇವೆ*: ಇವರು ದಕ್ಷಿಣ ಕನ್ನಡ ಜಿಲ್ಲೆಯ ಅನೇಕ ದೈವ, ದೇವಸ್ಥಾನಗಳ ಜೀರ್ಣೋದ್ದಾರ ದಲ್ಲಿ ಗೌರವಾಧ್ಯಕ್ಷರಾಗಿ, ಜೀರ್ಣೋದ್ದಾರ ಸಮಿತಿ ಸದಸ್ಯರಾಗಿ ಮಹತ್ತರ ಕಾರ್ಯವನ್ನು ಮಾಡುವ ಜೊತೆಗೆ ನೂರಕ್ಕೂ ಅಧಿಕ ಬಡಕುಟುಂಬಗಳ ವಿದ್ಯಾರ್ಥಿಗಳಿಗೆ ವಿದ್ಯಾರ್ಜನೆಗೆ, ಬಡ ಹೆಣ್ಣು ಮಕ್ಕಳ ಮದುವೆಗೆ ಆರ್ಥಿಕ ಸಹಾಯವನ್ನು ಮಾಡಿರುತ್ತಾರೆ.ಕೊರೊನಾ ಸಂದರ್ಭದಲ್ಲಿ ಪುತ್ತೂರು ತಾಲೂಕಿನ ಸಾವಿರಕ್ಕೂ ಅಧಿಕ ಬಡಕುಟುಂಬಗಳಿಗೆ ಅಕ್ಕಿಯನ್ನು ವಿತರಿಸಿ ಮಾನವೀಯತೆ ಮೆರೆದಿದ್ದಾರೆ.

ಗ್ರಾಮೀಣ ಭಾಗದಲ್ಲಿ ಕನ್ನಡ ಭಾಷೆಯ ಬಗ್ಗೆ ಜಾಗೃತಿಯನ್ನು ವಿದ್ಯಾರ್ಥಿಗಳಲ್ಲಿ ಓದುವ ಹವ್ಯಾಸ ಹಾಗೂ ಅವರನ್ನು ಸಾಹಿತ್ಯ ಕ್ಷೇತ್ರಕ್ಕೆ ಬರಮಾಡಿಕೊಳ್ಳುವ ನಿಟ್ಟಿನಲ್ಲಿ ದ. ಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಪುತ್ತೂರು ತಾಲೂಕು ಘಟಕದಿಂದ ನಡೆಸಲ್ಪಡುವ *ಸಾಹಿತ್ಯದ ನಡಿಗೆ ಗ್ರಾಮದ ಕಡೆಗೆ* ಎಂಬ ಘೋಷವಾಕ್ಯದಲ್ಲಿ ಪುತ್ತೂರು ತಾಲೂಕಿನ 22 ಗ್ರಾಮ ಪಂಚಾಯತ್ ವ್ಯಾಪ್ತಿಯ 32 ಗ್ರಾಮದಲ್ಲಿ ಪ್ರತಿ ತಿಂಗಳು ನಡೆಯುವ ಸಾಹಿತ್ಯ ಸಂಭ್ರಮ ಕಾರ್ಯಕ್ರಮದ ಮಹಾ ಪೋಷಕರಾಗಿರುತ್ತಾರೆ. ಈ ಗ್ರಾಮ ಸಾಹಿತ್ಯ ಸಂಭ್ರಮದಲ್ಲಿ, ಕನ್ನಡದಲ್ಲೂ ಐಎಎಸ್ ಬರೆಯಿರಿ ಅಭಿಯಾನ,ಕವಿಗೋಷ್ಠಿ

ಕಥಾ ಗೋಷ್ಠಿ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಉಪನ್ಯಾಸ ಹಾಗೂ ಸಾಧಕರಿಗೆ ಸನ್ಮಾನ ನಡೆಯುತ್ತಿದ್ದು ಸುಮಾರು 5000 ಪುಟಾಣಿ ಸಾಹಿತಿಗಳಿಗೆ ವೇದಿಕೆಯನ್ನು ಕಲ್ಪಿಸಿಕೊಟ್ಟ ಗೌರವ ಹಾಗೂ 50 ಸಾವಿರಕ್ಕೂ ಅಧಿಕ ಪ್ರೇಕ್ಷಕ ವರ್ಗ ಇದನ್ನ ನೋಡಿ ಆನಂದಿಸಿದ ಗೌರವ ಇವರಿಗೆ ಸಲ್ಲುತ್ತದೆ. ಈ ರೀತಿಯ ಕಾರ್ಯಕ್ರಮವನ್ನು *ಗ್ರಾಮ ಮಟ್ಟದಲ್ಲಿ ಆಯೋಜಿಸಿರುವುದು ಬಹುಶಃ ಭಾರತದಲ್ಲಿಯೇ ಪ್ರಥಮ ಎನ್ನಬಹುದು.

ಕಳೆದ ಇಪ್ಪತೈದು ವರ್ಷಗಳಿಂದ ಅರಬ್ ರಾಷ್ಟ್ರದಲ್ಲೂ ಕನ್ನಡ ಸೇವೆ ಹಾಗೂ ಕನ್ನಡಿಗರ ಸೇವೆ ಮಾಡುವ ಇವರು ಕನ್ನಡ ಭಾಷೆ ಹಾಗೂ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಅನೇಕ ಕಾರ್ಯಕ್ರಮಗಳಿಗೆ ತನು ಮನ ಧನ ಗಳಿಂದ ಸಹಕಾರ ನೀಡುತ್ತಾ ಬಂದಿದ್ದಾರೆ. ಅರಬ್ ಸಂಯುಕ್ತ ಸಂಸ್ಥಾನದಲ್ಲಿ ನಡೆಯುವ ಕರ್ನಾಟಕ ಪರ ಸಂಘಟನೆಗಳ ಆಶ್ರಯದಲ್ಲಿ ನಡೆಯುವ ವಿಶ್ವ ಕನ್ನಡ ಸಮ್ಮೇಳನ, ವಿಶ್ವ ತುಳು ಸಮ್ಮೇಳನ, ಕವಿ ಸಮ್ಮೇಳನ, ನಾಟಕ ಯಕ್ಷಗಾನ, ಸಂಗೀತ ರಸಮಂಜರಿ, ಇನ್ನಿತರ ಸಾಮಾಜಿಕ ಚಟುವಟಿಕೆಗಳಿಗೆ ಸದಾ ಬೆಂಬಲ ಪ್ರೋತ್ಸಾಹ, ಪ್ರಾಯೋಜಕತವ ನೀಡುತ್ತಾ ಬಂದಿರುವ ಪೋಷಕರಾಗಿದ್ದಾರೆ.

ಶಾಲಾ ಕಾಲೇಜುಗಳಲ್ಲಿ ವಿದ್ಯಾರ್ಥಿ ನಾಯಕನಾಗಿ, ನಾಯಕತ್ವ ಗುಣಗಳನ್ನು ಮೈಗೂಡಿಸಿಕೊಂಡು ಬಂದವರು. ಬೆಂಗಳೂರಿನ ಯುವ ಬಂಟ ಸಮಾಜದ ಅಧ್ಯಕ್ಷರಾಗಿ, ಕನ್ನಡ ಮತ್ತು ತುಳುವೆರೆಂಕುಳು, ಲಯನ್ಸ್ ಕ್ಲಬ್ ಮತ್ತು ಇನ್ನಿತರ ಸಂಘಟನೆಗಳಲ್ಲಿ ಪದಾಧಿಕಾರಿಯಾಗಿ ಸೇವೆ ಸಲ್ಲಿಸಿರುವರು. ಇಂಡಿಯಾ ಸೋಶಿಯಲ್ ಸೆಂಟರ್ ಟೋಸ್ಟ್ ಮಾಸ್ಟರ್ ಇಂಟರ್ನ್ಯಾಶನಲ್ ಅಬುಧಾಬಿ ಇದರ್ ಸ್ಥಾಪಕ ಅಧ್ಯಕ್ಷರಾಗಿ ಮತ್ತು ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದಾರೆ. ಇಂಡಿಯಾ ಸೋಶಿಯಲ್ ಅಂಡ್ ಕಲ್ಬರಲ್ ಸೆಂಟರ್ ಇದರ್ ಗೌರವಾನ್ವಿತ ಲೆಕ್ಕ ಪರಿಶೋಧಕರಾಗಿ, ಚೀಫ್ ಪೋಲಿಂಗ್ ಆಫಿಸರ್ ಆಗಿ ಸೇವೆ ಸಲ್ಲಿಸ್ ಅಪಾರ ಜನಪ್ರಿಯತೆಯನ್ನು ಪಡೆದಿದ್ದಾರೆ.

ಕಳೆದ 25ವರ್ಷಗಳಿಂದ ಇವರ ಧಾರ್ಮಿಕ, ಶೈಕ್ಷಣಿಕ, ಸಮಾಜಸೇವೆ ಹಾಗೂ ಕನ್ನಡಪರ ಸೇವೆಯನ್ನು ಗುರುತಿಸಿ 2022 ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಿದ್ದಾರೆ. ‘2023 ರ ‘ಗಡಿನಾಡ ಸದ್ಭಾವನ ಭೂಷಣ ಪ್ರಶಸ್ತಿ’ ,ಇಂಟರ್ನ್ಯಾಷನಲ್ ಐಕಾನ್ ಪ್ರಶಸ್ತಿ’ ಟೋಸ್ಟ್ ಮಾಸ್ಟರ್ ಅಂತರಾಷ್ಟ್ರೀಯ ಪ್ರಶಸ್ತಿಯಾದ DTM ಮತ್ತು “ಟ್ರಿಪಲ್ ಕೌನ್” ಪ್ರಶಸ್ತಿ, ದುಬೈನಲ್ಲಿ ಇಂಟರ್‌ನ್ಯಾಷನಲ್ ಕಲ್ಬರಲ್ ಫೆಸ್ಟ್ ಕೌನ್ಸಿಲ್ ಆಫ್ ಇಂಡಿಯಾ ಆಯೋಜಿಸಿರುವ 17ನೇ ವಿಶ್ವ ಕನ್ನಡ ಸಂಸ್ಕೃತಿ ಸಮ್ಮೇಳನದಲ್ಲಿ ‘ವಿಶ್ವಮಾನ್ಯ ಪ್ರಶಸ್ತಿ 2024 ಬಂಟ್ಸ್ ನೌ ಅನುಬಂಧ “ಬಂಟ ರತ್ನ 2024 ಪ್ರಶಸ್ತಿ, ಆರ್ಯಭಟ ಅಂತರಾಷ್ಟ್ರೀಯ ಪ್ರಶಸ್ತಿಗೂ ಭಾಜನರಾಗಿದ್ದಾರೆ ಜನ್ಮ ಭೂಮಿ ಭಾರತ ಮತ್ತು ಕರ್ಮ ಭೂಮಿ ಅರಬ್ ಸಂಯುಕ್ತ ಸಂಸ್ಥಾನದಲ್ಲಿ ಹಲವಾರು ಸಂಘ-ಸಂಸ್ಥೆಗಳಿಂದಲೂ ಪ್ರಶಸ್ತಿ ಪುರಸ್ಕಾರಗಳು ಇವರ ಮುಡಿಯೇರಿದೆ.

ಉದ್ಯೋಗ ನಿಮಿತ್ತ ದೂರದ ಗಲ್ಫ್ ರಾಷ್ಟ್ರದಲ್ಲಿ ಇದ್ದರೂ *ಸದಾ ಭಾರತ ದೇಶ, ಕನ್ನಡ ನಾಡು, ಕನ್ನಡ ನುಡಿ, ಕನ್ನಡ ನೆಲ ಜಲದ* ಶ್ರೇಯೋಭಿವೃದ್ಧಿಗಾಗಿ ಸದಾ ತನ್ನನ್ನು ತಾನು ಅರ್ಪಿಸಿಕೊಂಡು ಕನ್ನಡಪರ ಸೇವೆಯನ್ನು ಹುಟ್ಟೂರಿನಲ್ಲಿ ಮಾತ್ರವಲ್ಲದೇ ಗಲ್ಫ್ ರಾಷ್ಟ್ರದಲ್ಲೂ ಕನ್ನಡಪರ ಸೇವೆಯನ್ನು ಹಾಗೂ ಸಮಾಜ ಸೇವೆಯನ್ನು ಮಾಡುತ್ತಾ ಕನ್ನಡಿಗರ ಸಂಕಷ್ಟಕ್ಕೆ ಸ್ಪಂದಿಸುವ ಹಾಗೂ ಸದಾ ಕನ್ನಡಪರ ವಿಚಾರವನ್ನು ಚಿಂತಿಸುವ ಅಬುದಾಬಿಯಲ್ಲಿರುವ ಕನ್ನಡದ ರಾಯಭಾರಿ ಮಿತ್ರಂಪಾಡಿ ಜಯರಾಮ ರೈ ಅವರ ಸಮಾಜ ಸೇವೆ ನಿಜವಾಗಿಯೂ ಅಭಿನಂದನೀಯ ಹಾಗೂ ಶ್ರೇಷ್ಠವೆನಿಸುತ್ತದೆ.

Ad
Ad
Nk Channel Final 21 09 2023