News Karnataka Kannada
Tuesday, April 23 2024
Cricket
ಕರ್ನಾಟಕ

ಅಕ್ರಮ ಮರಳುಗಾರಿಕೆ ವಿರುದ್ಧ ಕಠಿಣ ಕಾನೂನು ಕ್ರಮ: ಡಿಸಿ ಹರೀಶಕುಮಾರ ಎಚ್ಚರಿಕೆ

Photo Credit :

ಅಕ್ರಮ ಮರಳುಗಾರಿಕೆ ವಿರುದ್ಧ ಕಠಿಣ ಕಾನೂನು ಕ್ರಮ: ಡಿಸಿ ಹರೀಶಕುಮಾರ ಎಚ್ಚರಿಕೆ

ಕಾರವಾರ: ಅಕ್ರಮ ಮರಳು ಗಣಿಗಾರಿಕೆ ಹಾಗೂ ಸಾಗಾಟದ ವಿರುದ್ದ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ.ಹರೀಶಕುಮಾರ ಕೆ. ಎಚ್ಚರಿಕೆ ಎಚ್ಚರಿಕೆ ನೀಡಿದ್ದಾರೆ.

ಕಾರವಾರದ ಜಿಲ್ಲಾಧಿಕಾರಿ ಕಚೇರಿ ನ್ಯಾಯಾಲಯ ಸಭಾಂಗಣದಲ್ಲಿ ಜಿಲ್ಲಾ ಮರಳು ಉಸ್ತುವಾರಿ ಸಭೆ ನಡೆಸಿ ಮಾತನಾಡಿದ ಜಿಲ್ಲಾಧಿಕಾರಿ, ಸಾರ್ವಜನಿಕರಿಗೆ ಅಗತ್ಯ ಕಾಮಗಾರಿಗಳಿಗೆ ಮರಳು ದೊರೆಯುತ್ತಿಲ್ಲ ಎನ್ನುವದನ್ನು ನೆಪ ಮಾಡಿ ಕೊಂಡು ಅಕ್ರಮವಾಗಿ ಮರಳು ತೆಗೆದು ಸಾಗಿಸುವದನ್ನು ಜಿಲ್ಲಾಡಳಿತ ಸಹಿಸುವುದಿಲ್ಲ. ಅಂತಹ ಪ್ರಕರಣಗಳನ್ನು ಪತ್ತೆ ಹಚ್ಚಲು ಕ್ರಮ ಕೈಗೊಳ್ಳಲಾಗಿದ್ದು, ಅಕ್ರಮ ಮರಳು ತೆಗೆಯುವದು ಮತ್ತು ಸಾಗಾಣಿಕೆಯಲ್ಲಿ ತೊಡಗುವವರ ವಿರುದ್ದ ತೀವ್ರ ಕಾನೂನು ಕ್ರಮಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಸೆಪ್ಟಂಬರ್ 21 ರಿಂದ ಸಾಂಪ್ರದಾಯಿಕವಾಗಿ ಸಾದಾ ಮರಳನ್ನು ತೆಗೆಯಲು ಶರತ್ತು ಬದ್ದ ಅನುಮತಿಯನ್ನು ನೀಡಲಾಗುತ್ತಿದ್ದು, ಶರತ್ತುಗಳನ್ನು ಉಲ್ಲಂಘಿಸುವವರ ವಿರುದ್ದ ಕಠಣ ಕ್ರಮ ಜರುಗಿಸಲಾಗುವದು ಎಂದು ತಿಳಿಸಿದ ಜಿಲ್ಲಾಧಿಕಾರಿ, ಸಾರ್ವಜನಿಕರಿಗೆ ಯೋಗ್ಯದರದಲ್ಲಿ ಮರಳು ಲಬ್ಯವಾಗುವಂತೆ ನೋಡಿಕೊಳ್ಳಲು ಅವಶ್ಯವಿರುವಲ್ಲಿ ಜಿಲ್ಲಾ ನಿರ್ಮಿತಿ ಕೇಂದ್ರದ ವತಿಯಿಂದ ಸ್ಯಾಂಡ್ ಬ್ಯಾಂಕ್ ಗಳನ್ನು ಸ್ಥಾಪಿಸಲು ಸೂಚಿಸಿದರು.

ಜಿಲ್ಲಾ ಪೊಲೀಸ್ ಅಧೀಕ್ಷಕ ಶಿವಪ್ರಕಾಶ ದೇವರಾಜು ಮಾತನಾಡಿ, ಜೊಯಿಡಾ ಮತ್ತು ದಾಂಡೇಲಿಯಲ್ಲಿನ ಚೆಕ್ ಪೋಸ್ಟ್ ಗಳನ್ನು ಬಲ ಪಡಿಸಲಾಗಿದ್ದು, ಚೆಕ್ ಪೋಸ್ಟ್ ಗಳಿಗೆ ಸಿಸಿ ಟೀವಿ ಅಳವಡಿಸಲು ಸೂಚಿಸಲಾಗಿದೆ. ಅಲ್ಲದೇ ಪದೇ ಪದೇ ಅಕ್ರಮ ಮರಳು ತೆಗೆಯುವ ಬಗ್ಗೆ ಹೊನ್ನಾವರ ಮತ್ತು ಕುಮಟಾ ತಾಲೂಕುಗಳಲ್ಲಿ ಸಾರ್ವಜನಿಕರಿಂದ ದೂರುಗಳು ಬರುತ್ತಿರುವ ಹಿನ್ನಲೆಯಲ್ಲಿ ಈ ಹಿಂದೆ ಇದ್ದ ಚಕ್ ಪೋಸ್ಟ್ ಗಳ ಜೊತೆಗೆ ಅವಶ್ಯವಿದ್ದ ಸ್ಥಳಗಳಲ್ಲಿ ಹೆಚ್ಚುವರಿ ಚೆಕ್ ಪೋಸ್ಟ್ ಗಳನ್ನು ಕೂಡಾ ಸ್ಥಾಪಿಸಲು ಸೂಚಿಸಲಾಗಿದೆ.

ಈ ಎಲ್ಲ ಚೆಕ್ ಪೋಸ್ಟ್ ಗಳಲ್ಲಿ ದಿನದ 24 ಗಂಟೆ ಕಾರ್ಯ ನಿರ್ವಹಿಸಲು ಪೊಲೀಸ್, ಕಂದಾಯ ಮತ್ತು ಅರಣ್ಯ ಇಲಾಖೆಗಳ ಸಿಬ್ಬಂದಿಗಳನ್ನು ನಿಯೋಜಿಸಲು ಕ್ರಮಕೈಗೊಳ್ಳಲಾಗಿದೆ. ಅಲ್ಲದೇ ಪ್ರತಿ ದಿನದ ಸಿಸಿ ಟಿವಿ ಫುಟೇಜುಗಳನ್ನು ಆಯಾ ತಾಲೂಕಿಗೆ ಸಂಬಂದಿಸಿದ ಡಿವೈಎಸ್ ಪಿ ಹಾಗೂ ಸಹಾಯಕ ಆಯುಕ್ತರು ಪರಿಶೀಲನೆ ನಡೆಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ವರದಿ ನೀಡಲು ತಿಳಿಸಲಾಗಿದೆ. ಪ್ರತಿ ತಾಲೂಕಿನಲ್ಲಿ ಮೊಬೈಲ್ ಸ್ಕ್ವಾಡ್ ಕೂಡಾ ನಿಯೋಜಿಸಲಾಗಿದ್ದು, ಯಾವುದೇ ಅಕ್ರಮ ಮರಳು ಸಾಗಾಣಿಕೆ ಕಂಡು ಬಂದಲ್ಲಿ ಅಂತವರ ವಿರುದ್ದ ನಿರ್ದಾಕ್ಷಿಣ್ಯವಾಗಿ ಕಠಿಣ ಕಾನೂನು ಕ್ರಮ ಜರುಗಿಸಲಾಗುವದು ಎಂದು ಪೊಲೀಸ್ ಅಧೀಕ್ಷಕರು ತಿಳಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
178
Srinivas Badkar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು