News Karnataka Kannada
Saturday, April 20 2024
Cricket
ಕರ್ನಾಟಕ

ಅರಮನೆಯಲ್ಲಿ ಸಿಂಹಾಸನ ಜೋಡಣಾ ಕಾರ್ಯಕ್ಕೆ ಚಾಲನೆ

Photo Credit :

ಅರಮನೆಯಲ್ಲಿ ಸಿಂಹಾಸನ ಜೋಡಣಾ ಕಾರ್ಯಕ್ಕೆ ಚಾಲನೆ

ಮೈಸೂರು: ಕೊರೊನಾ ಆತಂಕದ ನಡುವೆ ಸರಳ ಹಾಗೂ ಸಾಂಪ್ರದಾಯಿಕ ದಸರಾ ಆಚರಣೆಗೆ ಸರ್ಕಾರ ನಿರ್ಧರಿಸಿದ್ದು ನವರಾತ್ರಿ ಉತ್ಸವದ ಅಂಗವಾಗಿ ಅಂಬಾವಿಲಾಸ ಅರಮನೆಯಲ್ಲಿ ರತ್ನಖಚಿತ ಸಿಂಹಾಸನದ ಜೋಡಣೆ ಕಾರ್ಯ ಇಂದು ಬೆಳಿಗ್ಗೆ ೧೦ ರಿಂದ ೧೦.೧೫ ಘಂಟೆಗೆ ಆರಂಬಗೊಂಡಿದೆ. ಇದರ ಜತೆಯಲ್ಲೆ ಅರಮನೆಯಲ್ಲಿನ ದಸರಾ ದರ್ಬಾರ್ ಸಿದ್ಧತೆಗೆ ಚಾಲನೆ ದೊರೆಯಲಿದೆ.

ಸಾಮಾನ್ಯವಾಗಿ ಪ್ರತಿವರ್ಷ ದಸರಾ ಆರಂಭಕ್ಕೆ ಕೆಲವೇ ದಿನಗಳಿರುವಾಗ ಸಿಂಹಾಸನದ ಜೋಡಣೆ ನಡೆಯುತ್ತಿತ್ತು. ಆದರೆ ಈ ಬಾರಿ ಅಧಿಕ ಮಾಸದ ಕಾರಣ ಒಂದು ತಿಂಗಳು ಮೊದಲೇ ಜೋಡಣೆ ಕಾರ್ಯ ನಡೆಯುತ್ತಿದೆ.

ಇಂದು ಬೆಳಿಗ್ಗೆಯಿಂದಲೇ ವಿವಿಧ ಧಾರ್ಮಿಕ ಕಾರ್ಯಗಳು ನಡೆಯಲಿವೆ. ಸಿಂಹಾಸನ ಜೋಡಣೆ ಅಂಗವಾಗಿ ಚಾಮುಂಡೇಶ್ವರಿ ಪೂಜೆ, ಗಣಪತಿ ಹೋಮ ನಡೆಯಲಿದೆ.

ಕೋವಿಡ್-೧೯ ಹಿನ್ನೆಲೆಯಲ್ಲಿ ಈ ಬಾರಿ ನಾಡಹಬ್ಬವನ್ನು ಚಾಮುಂಡಿಬೆಟ್ಟ ಮತ್ತು ಅರಮನೆ ಆವರಣಕ್ಕೆ ಸೀಮಿತಗೊಳಿಸಲಾಗಿದೆ. ದಸರಾ ಮಹೋತ್ಸವ ಅ.೧೭ ರಂದು ಆರಂಭವಾಗಿ, ಅ.೨೬ ರಂದು ಕೊನೆಗೊಳ್ಳಲಿದೆ. ಇದೇ ಅವಧಿಯಲ್ಲಿ ಅರಮನೆಯಲ್ಲಿ ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರಿಂದ ಖಾಸಗಿ ದರ್ಬಾರ್ ನಡೆಯಲಿದೆ. ಅ.೨೫ರಂದು ಆಯುಧ ಪೂಜೆ, ಸಾಂಪ್ರದಾಯಿಕ ಜಟ್ಟಿ ಕಾಳಗ, ೨೬ರಂದು ಶಮೀಪೂಜೆ, ವಿಜಯದಶಮಿ ಮೆರವಣಿಗೆ ನಡೆಯಲಿದೆ.

ಅರಮನೆಯ ಭದ್ರತಾ ಕೊಠಡಿಯಲ್ಲಿದ್ದ ಸಿಂಹಾಸನದ ಬಿಡಿಭಾಗಗಳನ್ನು ದರ್ಬಾರ್ ಹಾಲ್‌ಗೆ ತಂದು ಜೋಡಿಸಲಾಗುತ್ತಿದೆ. ಪ್ರತಿವರ್ಷದಂತೆ ಅರಮನೆಯ ಸಿಬ್ಬಂದಿ ಹಾಗೂ ಗೆಜ್ಜಹಳ್ಳಿ ಗ್ರಾಮದ ಕುಶಲಕರ್ಮಿಗಳು ಸಿಂಹಾಸನ ಜೋಡಣೆ ಕಾರ್ಯದಲ್ಲಿ ತೊಡಗಿದ್ದಾರೆ. .

ಪ್ರವೇಶ ನಿರ್ಬಂಧ: ರಾಜಮನೆತನದವರು ಅರಮನೆಯಲ್ಲಿ ಸೆ.೧೮ ರಂದು ಧಾರ್ಮಿಕ ಪೂಜಾ ಕೈಂಕರ್ಯಗಳನ್ನು ನೆರವೇರಿಸಲಿದ್ದು, ಅಂದು ಬೆಳಿಗ್ಗೆ ೧೦ರಿಂದ ಮಧ್ಯಾಹ್ನ ೧ರ ವರೆಗೆ ಪ್ರವಾಸಿಗರಿಗೆ ಅರಮನೆಯ ಒಳ ಆವರಣ ಪ್ರವೇಶವನ್ನು ನಿರ್ಬಂಧಿಸಲಾಗಿದೆ ಎಂದು ಅರಮನೆ ಮಂಡಳಿ ಉಪ ನಿರ್ದೇಶಕ ಟಿ.ಎಸ್.ಸುಬ್ರಮಣ್ಯ ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು