News Karnataka Kannada
Saturday, April 20 2024
Cricket
ಕರ್ನಾಟಕ

ಆಗಸ್ಟ್ 3 ರಂದು ಶ್ರೀ ದತ್ತಾತ್ರೇಯ ದೇವಸ್ಥಾನದಲ್ಲಿ ಸಾರ್ವಜನಿಕ ದರ್ಶನ ನಿಷೇಧ

Photo Credit :

ಆಗಸ್ಟ್ 3 ರಂದು ಶ್ರೀ ದತ್ತಾತ್ರೇಯ ದೇವಸ್ಥಾನದಲ್ಲಿ ಸಾರ್ವಜನಿಕ ದರ್ಶನ ನಿಷೇಧ

ಕಲಬುರಗಿ: ಕೊರೋನಾ ವೈರಸ್ (ಕೋವಿಡ್-19) ಹರಡುವಿಕೆಯನ್ನು ತಡೆಗಟ್ಟಲು    ಅನುಕೂಲವಾಗುವಂತೆ ಅಫಜಲಪುರ ತಾಲೂಕಿನ ದೇವಲಗಾಣಗಾಪುರದ ಶ್ರೀ ದತ್ತಾತ್ರೇಯ ದೇವಸ್ಥಾನದಲ್ಲಿ 2020ರ  ಆಗಸ್ಟ್ 3ರಂದು ಸಾರ್ವಜನಿಕ ದರ್ಶನವನ್ನು ನಿಷೇಧಿಸಿ ಜಿಲ್ಲಾ ವಿಪತ್ತು ನಿರ್ವಹಣಾ ಸಮಿತಿ ಅಧ್ಯಕ್ಷರು ಹಾಗೂ ಜಿಲ್ಲಾಧಿಕಾರಿ ಶರತ್ ಬಿ. ಅವರು ಬುಧವಾರ ಆದೇಶ ಹೊರಡಿಸಿದ್ದಾರೆ.

ಆಗಸ್ಟ್ 3 ರಂದು ಸೋಮವಾರ ಶ್ರಾವಣ ಮಾಸದ ಹುಣ್ಣಿಮೆ ಇದ್ದು, ಈ ದೇವಾಲಯಕ್ಕೆ ಪ್ರತಿ ಹುಣ್ಣಿಗೆಯಂದು ನೆರೆ ರಾಜ್ಯಗಳಾದ ಮಹಾರಾಷ್ಟ್ರ, ಆಂಧ್ರಪ್ರದೇಶ ಹಾಗೂ ತೆಲಂಗಾಣದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಆಗಮಿಸುವರು. ಈ ದೇವಾಲಯಕ್ಕೆ ಭಕ್ತಾದಿಗಳಿಗೆ ದೇವರ ದರ್ಶನಕ್ಕೆ ಅವಕಾಶ ನೀಡಿದ್ದಲ್ಲಿ ಭಕ್ತರನ್ನು ನಿಯಂತ್ರಿಸುವುದು ಹಾಗೂ ಸಾಮಾಜಿಕ ಅಂತರ ಪಾಲನೆ ಮಾಡುವುದು ಕಷ್ಟಕರವಾಗಿದೆ.  ವಿಪತ್ತು ನಿರ್ವಹಣಾ ಕಾಯ್ದೆ 2005 ಹಾಗೂ ದಂಡ ಪ್ರಕ್ರಿಯ ಸಂಹಿತೆ 1973 ರ ಕಲಂ 144 ರನ್ವಯ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
149

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು