News Karnataka Kannada
Sunday, April 14 2024
Cricket
ಕರ್ನಾಟಕ

ಆದಿವಾಸಿಗಳು ಅರಣ್ಯದಂಚಿಗೆ ಬಂದರೆ ಮೂಲಭೂತ ಸೌಲಭ್ಯ : ಅಧಿಕಾರಿಗಳ ಭರವಸೆ

Photo Credit :

ಆದಿವಾಸಿಗಳು ಅರಣ್ಯದಂಚಿಗೆ ಬಂದರೆ ಮೂಲಭೂತ ಸೌಲಭ್ಯ : ಅಧಿಕಾರಿಗಳ ಭರವಸೆ

ಮಡಿಕೇರಿ: ನಾಗರಹೊಳೆ ವನ್ಯಜೀವಿ ವ್ಯಾಪ್ತಿಯ ಕೋರ್ ಪ್ರದೇಶದಲ್ಲಿರುವ ಹಾಡಿಗಳ ವಾಸಿಗಳು ಹಕ್ಕುಪತ್ರ ಹೊಂದಿದ್ದು, ಅವರು ಸ್ವ ಇಚ್ಛೆಯಿಂದ ಅರಣ್ಯದಂಚಿಗೆ ಬರಲು ಒಪ್ಪಿದಲ್ಲಿ ವಾಸ್ತವಾಂಶ ಪರಿಶೀಲಿಸಿ ಸೂಕ್ತ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿಕೊಡಲು ಜಿಲ್ಲಾ ಮಟ್ಟದ ಅರಣ್ಯ ಹಕ್ಕು ಸಮಿತಿ ಸಭೆಯಲ್ಲಿ ನಿರ್ಧರಿಸಲಾಗಿದೆ.

ಅರಣ್ಯ ಹಕ್ಕು ಕಾಯ್ದೆಯಡಿ ಅರಣ್ಯ ಹಕ್ಕು ಪತ್ರ ನೀಡುವ ಸಂಬಂಧ ಮರು ಪರಿಶೀಲನೆಗೆ ಬಾಕಿ ಇರುವ 1872 ಅರ್ಜಿಗಳನ್ನು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು (ಗ್ರಾ.ಪಂ.ಅರಣ್ಯ ಹಕ್ಕು ಸಮಿತಿ)  ಮರು ಪರಿಶೀಲಿಸಿ ಅ.7 ರೊಳಗೆ ಉಪ ವಿಭಾಗ ಮಟ್ಟದ ಸಮಿತಿಗೆ ಶಿಫಾರಸ್ಸು ಮಾಡಿ ಜಿಲ್ಲಾ ಮಟ್ಟದ ಸಮಿತಿಗೆ ವರದಿ ನೀಡುವಂತೆ ಸಭೆಯ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಸೂಚನೆ ನೀಡಿದರು.

ಕಳೆದ ಹಲವು ತಿಂಗಳಿನಿಂದ ಅರಣ್ಯ ವಾಸಿಗಳಿಗೆ ವೈಯಕ್ತಿಕ ಅರಣ್ಯ ಹಕ್ಕು ಪತ್ರ ನೀಡಿಲ್ಲ ಎಂಬ ದೂರುಗಳು ಕೇಳಿ ಬರುತ್ತಿದ್ದು, ತಿರಸ್ಕøತಗೊಂಡಿರುವ ಅರಣ್ಯ ಹಕ್ಕುಪತ್ರ ಅರ್ಜಿಗಳನ್ನು ಮರು ಪರಿಶೀಲಿಸಬೇಕೆಂದರು.

ಹಾಡಿಗಳಲ್ಲಿ ಅಂಗನವಾಡಿಗಳ ನಿರ್ಮಾಣ ಸಂಬಂಧ ಗ್ರಾಮ ಸಭೆ ನಡೆಸಿ ಕಂದಾಯಾಧಿಕಾರಿಗಳ ಜಿಲ್ಲಾ ಮಟ್ಟದ ಸಭೆಯಲ್ಲಿ ನಿರ್ಧಾರ ಕೈಗೊಳ್ಳಬೇಕು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯೊಂದಿಗೆ ಸಮನ್ವಯ ಸಾಧಿಸಿ ಅಂಗನವಾಡಿಗಳನ್ನು ನಿರ್ಮಿಸಲು ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಐಟಿಡಿಪಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಅಕ್ಟೋಬರ್ ನಲ್ಲಿ ರಾಜೀವ್ ಗಾಂಧಿ ರಾಷ್ಟ್ರೀಯ ಉದ್ಯಾನವನದ ನಿರ್ದೇಶಕರು ಮತ್ತು ಉಪ ವಿಭಾಗಾಧಿಕಾರಿ ಅವರೊಂದಿಗೆ ನಾಗರಹೊಳೆ ವ್ಯಾಪ್ತಿಯ ತಟ್ಟೇಕೆರೆ ಮತ್ತು ನಾಗರಹೊಳಿ ಗದ್ದೆಹಾಡಿಗಳಿಗೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಲಾಗುವುದು ಎಂದು ತಿಳಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು