News Karnataka Kannada
Thursday, April 25 2024
ಕರ್ನಾಟಕ

ಇಂದಿರಾ ಕ್ಯಾಂಟೀನ್‍ನಲ್ಲಿ ಉಚಿತ ಊಟ ಸದುಪಯೋಗ ಪಡಿಸಿಕೊಳ್ಳಿ :ಪ್ರೀತಿ ಗೆಹ್ಲೋಟ್

Photo Credit :

ಇಂದಿರಾ ಕ್ಯಾಂಟೀನ್‍ನಲ್ಲಿ ಉಚಿತ ಊಟ ಸದುಪಯೋಗ ಪಡಿಸಿಕೊಳ್ಳಿ :ಪ್ರೀತಿ ಗೆಹ್ಲೋಟ್

ಬಳ್ಳಾರಿ: ಸರಕಾರವು ಲಾಕ್‍ಡೌನ್ ಮಾಡಿರುವ ಹಿನ್ನೆಲೆಯಲ್ಲಿ ಮತ್ತು ಸರಕಾರದ ಸೂಚನೆ ಅನ್ವಯ ಲಾಕ್‍ಡೌನ್ ಸಮಯಲ್ಲಿ ನಿರ್ಗತಿಕರಿಗೆ, ಬಡವರಿಗೆ, ಕೂಲಿ ಕಾರ್ಮಿಕರಿಗೆ ಇಂದಿರಾ ಕ್ಯಾಂಟೀನ್‍ಗಳ ಮೂಲಕ ಉಚಿತ ಊಟ ನೀಡಲಾಗುತ್ತಿದ್ದು, ನಗರದ ಸಾರ್ವಜನಿಕರು ಇದರ ಸದುಪಯೋಗಪಡಿಸಿಕೊಳ್ಳಬೇಕು ಎಂದು ಮಹಾನಗರ ಪಾಲಿಕೆ ಆಯುಕ್ತೆ ಪ್ರೀತಿ ಗೆಹ್ಲೋಟ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

ಬಳ್ಳಾರಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿರುವ 5 ಇಂದಿರಾ ಕ್ಯಾಂಟೀನ್‍ಗಳಿಂದ ಬೆಳಗಿನ ಉಪಹಾರ, ಮಧ್ಯಾಹ್ನದ ಹಾಗೂ ರಾತ್ರಿಯ ಊಟವನ್ನು ಉಚಿತವಾಗಿ ವಿತರಣೆ ಮಾಡುವ ವ್ಯವಸ್ಥೆ ಕಲ್ಪಿಸಲಾಗಿದ್ದು ಸಾರ್ವಜನಿಕರು ಇದನ್ನು ಬಳಸಿಕೊಳ್ಳಿ ಎಂದು ಅವರು ತಿಳಿಸಿದ್ದಾರೆ.

 

ಕೋವಿಡ್-19ರ ಎರಡನೇ ಅಲೆ ಹಿನ್ನಲೆಯಲ್ಲಿ ಸರ್ಕಾರವು ಮೇ24ರವರೆಗೆ ಸಂಪೂರ್ಣ ಲಾಕ್‍ಡೌನ್ ಮಾಡಿರುವುದರಿಂದ ಬಳ್ಳಾರಿ ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿರುವ ಕೂಲಿ ಕಾರ್ಮಿಕರು, ವಲಸಿಗರು ಹಾಗೂ ದುರ್ಬಲ ವರ್ಗದ ಜನರು ಆಹಾರದಿಂದ ವಂಚಿತರಾಗಬಾರದೆಂದು ಭಾವಿಸಿ ಸರ್ಕಾರವು ಆದೇಶ ಹೊರಡಿಸಿರುವಂತೆ ಮೇ 24ರವರೆಗೆ ಇಂದಿರಾ ಕ್ಯಾಂಟೀನ್‍ಗಳ ಮುಖಾಂತರ ಉಚಿತ ಊಟ ನೀಡಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
205

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು