News Karnataka Kannada
Thursday, April 25 2024
ಕರ್ನಾಟಕ

ಉತ್ತರಕನ್ನಡ ಜಿಲ್ಲೆಯಲ್ಲಿ 251 ಪೊಲೀಸರಿಗೆ ಕೊರೋನಾ ಸೋಂಕು ದೃಢ

Photo Credit :

ಉತ್ತರಕನ್ನಡ ಜಿಲ್ಲೆಯಲ್ಲಿ 251 ಪೊಲೀಸರಿಗೆ ಕೊರೋನಾ ಸೋಂಕು ದೃಢ

ಕಾರವಾರ: ಕೊರೊನಾ ಎರಡನೇ ಅಲೆ ಅಬ್ಬರಕ್ಕೆ ಉತ್ತರ ಕನ್ನಡ ಜಿಲ್ಲೆ ನಲುಗುತ್ತಿದ್ದು, ಈ ನಡುವೆ ಖಾಕಿ ಪಡೆಯಲ್ಲಿ ಕೊರೊನಾ ಸೋಂಕು ಹರಡುತ್ತಿದೆ. ಜಿಲ್ಲೆಯಲ್ಲಿ ಬರೋಬ್ಬರಿ 251 ಪೊಲೀಸರಿಗೆ ಕೊರೊನಾ ಸೋಂಕು ತಗುಲಿದೆ ಎಂದು ತಿಳಿದು ಬಂದಿದೆ.

ಲಾಕ್ ಡೌನ್ ಘೋಷಣೆಯಾಗುತ್ತಿದ್ದಂತೆಯೇ ಜಿಲ್ಲೆಯಲ್ಲಿ ಪೊಲೀಸರಲ್ಲಿ ಸೋಂಕು ಹೆಚ್ಚು ಹರಡಿದೆ. ಉತ್ತರ ಕನ್ನಡದಲ್ಲಿ 251 ಪೊಲೀಸರಲ್ಲಿ ಕೊರೊನಾ ಸೋಂಕು ದೃಢವಾಗಿದ್ದು, ಅವರಲ್ಲಿ 188 ಪೊಲೀಸರು ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ. 63 ಪೊಲೀಸರು ಹೋಂ ಕ್ವಾರಂಟೈನ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ರಾಜ್ಯದಲ್ಲಿ ಲಾಕ್ ಡೌನ್ ಘೋಷಣೆಯಾಗುತ್ತಿದ್ದಂತೆ ನಗರಗಳಿಂದ ಹಳ್ಳಿಗಳತ್ತ ಜನರು ಮುಖಮಾಡಿದ್ದಾರೆ. ಜನರ ಓಡಾಟ ನಿಯಂತ್ರಿಸಲು ಪೊಲೀಸರು ರಸ್ತೆ ರಸ್ತೆಗಳಲ್ಲಿ ಕಾರ್ಯನಿರ್ವಹಿಸಿದ್ದಾರೆ. ಇದು ಕೂಡ ಪೊಲೀಸರಲ್ಲಿ ಸೋಂಕು ಹೆಚ್ಚು ಹರಡಲು ಕಾರಣವಾಗಿದೆ. ಈಗಾಗಲೇ ಜಿಲ್ಲೆಯಲ್ಲಿ 1555 ಪೊಲೀಸ್ ಸಿಬ್ಬಂದಿಗಳಿಗೆ ಲಸಿಕೆ ಹಾಕಲಾಗಿದೆ. ಮುಂಜಾಗೃತಾ ಕ್ರಮವಾಗಿ ಪ್ರತಿ ಠಾಣೆಗಳಲ್ಲಿ ಹಬೆ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
205

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು