News Karnataka Kannada
Wednesday, April 24 2024
Cricket
ಕರ್ನಾಟಕ

ಉತ್ತರ ಕನ್ನಡದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 5761ಕ್ಕೆ ಏರಿಕೆ

Photo Credit :

ಉತ್ತರ ಕನ್ನಡದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 5761ಕ್ಕೆ ಏರಿಕೆ

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಶತಕ ಬಾರಿಸುತ್ತಿದ್ದ ಕೊರೊನಾ ಮೊದಲ ಬಾರಿಗೆ ದ್ವಿಶತಕ ಬಾರಿಸಿದೆ. ಒಟ್ಟೂ 213 ಕೊರೊನಾ ಪ್ರಕರಣಗಳು ದೃಢ ಪಟ್ಟಿದ್ದು ಇದು ಇಲ್ಲಿಯವರೆಗೆ ಜಿಲ್ಲೆಯಲ್ಲಿ ಒಂದೇ ದಿನ ದೃಢಪಟ್ಟ ಅತೀ ಹೆಚ್ಚಿನ ಪ್ರಕರಣಗಳಾಗಿವೆ.

ಕಾರವಾರದಲ್ಲೇ ಅತೀ ಹೆಚ್ಚು 52 ಪ್ರಕರಣಗಳು ಪತ್ತೆಯಾದರೆ ಶಿರಸಿಯಲ್ಲಿ 48 ಪ್ರಕರಣಗಳು ಪತ್ತೆಯಾಗಿವೆ. ಉಳಿದಂತೆ ಯಲ್ಲಾಪುರ 43, ಕುಮಟಾ 16, ಸಿದ್ದಾಪುರ 13, ಅಂಕೋಲಾ ಹಾಗೂ ಹೊನ್ನಾವರಗಳಲ್ಲಿ ತಲಾ 11, ಹಳಿಯಾಳ 9, ಮುಂಡಗೋಡ 5, ಭಟ್ಕಳ 4 ಹಾಗೂ ಜೋಯಿಡಾ 1 ಪ್ರಕರಣಗಳು ದಾಖಲಾಗಿವೆ.

ಈ ಮೂಲಕ ಜಿಲ್ಲೆಯ ಒಟ್ಟೂ ಸೋಂಕಿತರ ಸಂಖ್ಯೆ 5761ಕ್ಕೆ ತಲುಪಿದ್ದು ಇವರಲ್ಲಿ 4201 ಸೋಂಕಿತರು ಈಗಾಗಲೇ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇನ್ನು 1504 ಸಕ್ರಿಯ ಪ್ರಕರಣಗಳಿದ್ದು ಇವರಲ್ಲಿ 864 ಮಂದಿ ವಿವಿಧ ಕೋವಿಡ್ ವಾರ್ಡ್ಗಳಲ್ಲಿ ಹಾಗೂ 640 ಸೋಂಕಿತರು ಹೋಂ ಯಸೋಲೇಶನ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲೆಯಲ್ಲಿ ಇದುವರೆಗೆ 56 ಮಂದಿ ಕೋವಿಡ್‌ಗೆ ಬಲಿಯಾಗಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
178
Srinivas Badkar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು