News Karnataka Kannada
Saturday, April 20 2024
Cricket
ಕರ್ನಾಟಕ

ಉತ್ತರ ಕನ್ನಡದಲ್ಲಿ 59 ಕೊರೊನಾ ಸೋಂಕು ದೃಢ:ಇಬ್ಬರು ಸಾವು

Photo Credit :

ಉತ್ತರ ಕನ್ನಡದಲ್ಲಿ 59 ಕೊರೊನಾ ಸೋಂಕು ದೃಢ:ಇಬ್ಬರು ಸಾವು

ಕಾರವಾರ:ಉತ್ತರ ಕನ್ನಡ ಜಿಲ್ಲೆಯಲ್ಲಿ 59 ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ. ಹೀಗಾಗಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 3279ಕ್ಕೆ ಏರಿಕೆಯಾಗಿದೆ. ಇದರಲ್ಲಿ 2381 ಜನ ಗುಣಮುಖರಾಗಿದ್ದಾರೆ.

866 ಸಕ್ರಿಯ ಸೋಂಕಿತರ ಪೈಕಿ 689 ಜನ ಆಸ್ಪತ್ರೆಯಲ್ಲಿ ಹಾಗೂ 177 ಜನ ಅವರವರ ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉತ್ತರ ಕನ್ನಡ ಜಿಲ್ಲೆಯಲ್ಲಿ 110 ಜನ ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದಾರೆ. ಅವರನ್ನು ವಿವಿಧ ಆಸ್ಪತ್ರೆಗಳಿಂದ ಬಿಡುಗಡೆ ಮಾಡಲಾಗಿದೆ. ಕಾರವಾರದಲ್ಲಿ 11, ಶಿರಸಿಯಲ್ಲಿ 6, ಮುಂಡಗೋಡದಲ್ಲಿ 37, ಹಳಿಯಾಳದಲ್ಲಿ 46 ಹಾಗೂ ಜೊಯಿಡಾ ತಾಲೂಕಿನಲ್ಲಿ 10 ಜನ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ.

ಇಬ್ಬರ ಸಾವು:ಜಿಲ್ಲೆಯಲ್ಲಿ ಜಿಲ್ಲೆಯಲ್ಲಿ ಕೊರೊನಾ ಸೋಂಕಿನಿಂದ ಇಬ್ಬರು ಸಾವನಪ್ಪಿದ್ದಾರೆ. ಹೀಗಾಗಿ ಈವರೆಗೆ ಜಿಲ್ಲೆಯಲ್ಲಿ ಕೊರೊನಾದಿಂದ 32 ಜನ ಸಾವನಪ್ಪಿದಂತಾಗಿದೆ. ಅಂಕೋಲಾ ಹಾಗೂ ಹಳಿಯಾಳದಲ್ಲಿ ತಲಾ ಒಬ್ಬರು ಸಾವನಪ್ಪಿದ್ದಾರೆ. ಕೆಲ ದಿನಗಳ ಹಿಂದೆ ಇವರಿಗೆ ಸೋಂಕು ದೃಢವಾಗಿದ್ದು, ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಭಾನುವಾರ ಚಿಕಿತ್ಸೆಗೆ ಸ್ಪಂದಿಸದೇ ಅವರು ಕೊನೆ ಉಸಿರೆಳೆದಿದ್ದಾರೆ ಎಂದು ಜಿಲ್ಲಾಡಳಿತ ಮಾಹಿತಿ ನೀಡಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
178
Srinivas Badkar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು