News Karnataka Kannada
Thursday, April 25 2024
ಕರ್ನಾಟಕ

ಉತ್ತರ ಕನ್ನಡದಲ್ಲಿ 7 ಸಾವಿರ ದಾಟಿದ ಕೊರೊನಾ ಸೋಂಕಿತರ ಸಂಖ್ಯೆ

Photo Credit :

ಉತ್ತರ ಕನ್ನಡದಲ್ಲಿ 7 ಸಾವಿರ ದಾಟಿದ ಕೊರೊನಾ ಸೋಂಕಿತರ ಸಂಖ್ಯೆ

ಕಾರವಾರ: ಜಿಲ್ಲೆಯಲ್ಲಿ ಶುಕ್ರವಾರ ಒಟ್ಟು 161 ಹೊಸ ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ. ಇದರಿಂದ ಜಿಲ್ಲೆಯಲ್ಲಿ ಈವರೆಗೆ 7935 ಕೊರೊನಾ ಸೋಂಕಿತ ಪ್ರಕರಣಗಳು ದಾಖಲಾಗಿದೆ.

ಜಿಲ್ಲೆಯಲ್ಲಿ ಪತ್ತೆಯಾದ ಕೊರೊನಾ ಸೋಂಕಿತರ ಪೈಕಿ ಕಾರವಾರದಲ್ಲಿ ಅತಿ ಹೆಚ್ಚು ಪ್ರಕರಣ ದಾಖಲಾಗಿದೆ. ಕಾರವಾರ 66, ಅಂಕೋಲಾ 16, ಕುಮಟಾ 19 , ಹೊನ್ನಾವರ 17, ಶಿರಸಿ 4, ಸಿದ್ದಾಪುರ 4, ಯಲ್ಲಾಪುರ 15,ಮುಂಡಗೋಡ 18, ಹಳಿಯಾಳ 2 ಪ್ರಕರಣಗಳು ಪತ್ತೆಯಾಗಿದೆ. ಕೊರೊನಾ ಸೋಂಕಿತರ ಸಂಖ್ಯೆ 7935 ಕ್ಕೆ ಏರಿಕೆಯಾಗಿದೆ . ಇದರಲ್ಲಿ 5463 ಜನ ಗುಣಮುಖರಾಗಿದ್ದಾರೆ . ಸಕ್ರಿಯವಾಗಿರುವ 2377 ಪ್ರಕರಣಗಳಲ್ಲಿ 1175 ಜನ ಅವರವರ ಮನೆಯಲ್ಲಿ ಹಾಗೂ 1202 ಜನ ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಜಿಲ್ಲಾಡಳಿತ ತಿಳಿಸಿದೆ .

ಜಿಲ್ಲೆಯ ವಿವಿಧ ಕೊರೊನಾ ವಾರ್ಡ್ ಗಳಲ್ಲಿ ಚಿಕಿತ್ಸೆಗೆ ದಾಖಲಾಗಿದ್ದ ಸೋಂಕಿತರ ಪೈಕಿ ಶುಕ್ರವಾರ 106 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಈವರೆಗೆ 5463 ಜನರು ಗುಣಮುಖರಾಗಿದ್ದಾರೆ. ಬಿಡುಗಡೆಯಾದವರ ಪೈಕಿ ಕಾರವಾರ 60, ಅಂಕೋಲಾ 15, ಕುಮಟಾ 3,ಹೊನ್ನಾವರ 9, ಸಿದ್ಧಾಪುರ 15, ಹಳಿಯಾಳ 4 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇದರಿಂದ ಜಿಲ್ಲೆಯ ಜನರಿಗೆ ಕೊಂಚ ಸಮಾಧಾನ ತಂದಿದೆ.

ಕೊರೊನಾ ಪ್ರಕರಣಕ್ಕೆ ಸಂಬಂಧಿಸಿಂತೆ ಯಲ್ಲಾಪುರ ತಾಲೂಕಿನಲ್ಲಿ ತಲಾ ಒರ್ವರು ಮೃತಪಟ್ಟಿದ್ದಾರೆ. ಇದರಿಂದ ಕೊರೊನಾ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 95 ಕ್ಕೆ ಏರಿಕೆಯಾಗಿದೆ. ಜಿಲ್ಲೆಯ ವಿವಿಧ ಕೋವಿಡ್ ವಾರ್ಡ್ ಗಳಲ್ಲಿ ಮೃತಪಟ್ಟವರಲ್ಲಿ ಕಾರವಾರ 9, ಅಂಕೋಲಾ 7,ಕುಮಟಾ 4, ಹೊನ್ನಾವರ 14, ಭಟ್ಕಳ 15, ಶಿರಸಿ 11,ಸಿದ್ಧಾಪುರ 1, ಯಲ್ಲಾಪುರ 4, ಮುಂಡಗೋಡ 6, ಹಳಿಯಾಳದಲ್ಲಿ 23 ಹಾಗೂ ಜೊಯಿಡಾದಲ್ಲಿ ಓರ್ವರು ಈವರೆಗೆ ಮೃತಪಟ್ಟಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
178
Srinivas Badkar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು