News Karnataka Kannada
Sunday, April 21 2024
Cricket
ಕರ್ನಾಟಕ

ಉತ್ತರ ಕನ್ನಡ ಜಿಲ್ಲೆಯಲ್ಲಿ 238 ಹೊಸ ಕೊರೊನಾ ಪ್ರಕರಣ ದೃಢ

Photo Credit :

ಉತ್ತರ ಕನ್ನಡ ಜಿಲ್ಲೆಯಲ್ಲಿ 238 ಹೊಸ ಕೊರೊನಾ ಪ್ರಕರಣ ದೃಢ

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ 238 ಕೊರೊನಾ ಪ್ರಕರಣಗಳು ಪತ್ತೆಯಾಗಿದೆ. ಕುಮಟಾ, ಶಿರಸಿಯಲ್ಲಿ ಅತೀ ಹೆಚ್ಚು ಪ್ರಕರಣ ಪತ್ತೆಯಾಗಿದೆ.

ಪತ್ತೆಯಾಗಿ ಪ್ರಕಣರಣಗಳ ಪೈಕಿ ಕಾರವಾರ 23, ಅಂಕೋಲಾ 21, ಕುಮಟಾ 45, ಹೊನ್ನಾವರ 28, ಶಿರಸಿ 35, ಸಿದ್ದಾಪುರ 18, ಯಲ್ಲಾಪುರ 27, ಮುಂಡಗೋಡ 10, ಹಳಿಯಾಳ 26, ಹಾಗೂ ಜೊಯಿಡಾದಲ್ಲಿ 4 ಪ್ರಕರಣಗಳು ರವಿವಾರ ಪತ್ತೆಯಾಗಿದೆ.

ಈ ಮೂಲಕ ಜಿಲ್ಲೆಯಲ್ಲಿ ಕೊರೊನಾ ಸೋಂಕಿನಿಂದ ಬಳಲಿದವರ ಸಂಖ್ಯೆ 5999ಕ್ಕೆ ಏರಿಕೆಯಾಗಿದೆ. ಇದರಲ್ಲಿ 4298 ಜನ ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದಾರೆ. ಸಕ್ರಿಯವಾಗಿರುವ 1644 ಸೋಂಕಿತರ ಪೈಕಿ 840 ಜನ ಅವರವರ ಮನೆಯಲ್ಲಿ ಹಾಗೂ 804 ಜನ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

97 ಜನ ಗುಣಮುಖ:ಕೊರೊನಾ ಸೋಂಕು ತಗುಲಿ ವಿವಿಧ ಆಸ್ಪತ್ರೆಗೆ ದಾಖಲಾಗಿದ್ದ 97 ಜನ ರವಿವಾರ ಗುಣಮುಖರಾಗಿದ್ದಾರೆ. ಭಟ್ಕಳ ಹಾಗೂ ಶಿರಸಿಯಲ್ಲಿ 22, ಹಳಿಯಾಳದಲ್ಲಿ 30 ಜನ ಗುಣಮುಖರಾಗಿದ್ದಾರೆ. ಇದರೊಂದಿಗೆ ಯಲ್ಲಾಪುರದಲ್ಲಿ 10, ಕಾರವಾರದಲ್ಲಿ ನಾಲ್ವರು ಗುಣಮುಖರಾಗಿದ್ದಾರೆ. ಗುಣಮುಖರಾದ ಎಲ್ಲರನ್ನು ಬಿಡುಗಡೆ ಮಾಡಲಾಗಿದೆ. ಇವರಿಗೆ ಹೋಂ ಕ್ವಾರಂಟೈನ್ ಸೂಚಿಸಲಾಗಿದೆ.

ಹೊನ್ನಾವರದಲ್ಲಿ ಕೊರೊನಾಗೆ ಒರ್ವ ಬಲಿ:ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದಲ್ಲಿ ರವಿವಾರ ಕೊರೊನಾ ಸೋಂಕಿನಿಂದ ವ್ಯಕ್ತಿಯೊಬ್ಬರು ಸಾವನಪ್ಪಿದ್ದಾರೆ. ಹೀಗಾಗಿ ಸೋಂಕಿನಿಂದ ಸಾವನಪ್ಪಿದವರ ಸಂಖ್ಯೆ 57ಕ್ಕೆ ಏರಿಕೆಯಾಗಿದೆ. ಹೊನ್ನಾವರ ತಾಲೂಕಿನಲ್ಲಿ ಈವರೆಗೆ ಏಳು ಜನ ಸೋಂಕಿನಿಂದ ಸಾವನಪ್ಪಿದ್ದಾರೆ. ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳು ಜಿಲ್ಲಾಡಳಿತ ಸಮರ್ಥವಾಗಿ ನಿಭಾಯಿಸಿದ್ದು ಈವರೆಗೆ ಪತ್ತೆಯಾಗಿ ಕೊರೊನಾ ಪ್ರಕರಣಗಳಲ್ಲಿ ಸಾವಿನ ಸಂಖ್ಯೆ ತುಂಬಾ ಕಡಿಮೆ ಇದೆ. ಜಿಲ್ಲೆಯಲ್ಲಿ ಈವರೆಗೆ 0.4ರಷ್ಟು ಸಾಗಿದ್ದು ಜಿಲ್ಲಾಡಳಿತ ಉತ್ತಮ ರೀತಿಯಲ್ಲಿ ಕ್ರಮಕೈಗೊಂಡಿದೆ ಎಂದು ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ ಎಚ್. ಕೆ. ತಿಳಿಸಿದ್ದಾರೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
149

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು