News Karnataka Kannada
Wednesday, April 17 2024
Cricket
ಕರ್ನಾಟಕ

ಉತ್ತರ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 4044ಕ್ಕೆ ಏರಿಕೆ

Photo Credit :

ಉತ್ತರ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 4044ಕ್ಕೆ ಏರಿಕೆ

ಕಾರವಾರ:ಉತ್ತರ ಕನ್ನಡ ಜಿಲ್ಲೆಯಲ್ಲಿ 96 ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ ಎಂದು ಜಿಲ್ಲಾಡಳಿತ ಮಾಹಿತಿ ನೀಡಿದೆ.

ಹೀಗಾಗಿ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 4044ಕ್ಕೆ ಏರಿಕೆಯಾಗಿದೆ. ಇದರಲ್ಲಿ 3090 ಕೊರೊನಾ ಸೋಂಕಿತರು ಗುಣಮುಖರಾಗಿದ್ದಾರೆ. ಸಕ್ರಿಯ 913 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದು, ಅವರಲ್ಲಿ 570 ರೋಗಿಗಳು ಆಸ್ಪತ್ರೆಗೆ ದಾಖಲಾಗಿದ್ದಾರೆ. 343 ಜನರಿಗೆ ಅವರವರ ಮನೆಯಲ್ಲಿ ಚಿಕಿತ್ಸೆ ಕೊಡಲಾಗುತ್ತಿದೆ.

50 ಜನ ಗುಣಮುಖ:ಕೊರೊನಾ ಸೋಂಕಿನ ಕಾರಣ ಜಿಲ್ಲೆಯ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆಗೆ ದಾಖಲಾಗಿದ್ದ ರೋಗಿಗಳ ಪೈಕಿ ಸೋಮವಾರ 50 ಜನ ಗುಣಮುಖರಾಗಿದ್ದಾರೆ. ಹೀಗಾಗಿ ಅವರನ್ನು ಆಸ್ಪತ್ರೆಗಳಿಂದ ಬಿಡುಗಡೆ ಮಾಡಲಾಗಿದೆ. ಬಿಡುಗಡೆ ಆದವರಿಗೆ ಹೋಂ ಕ್ವಾರಂಟೈನ್ ಸೂಚಿಸಲಾಗಿದೆ. ಕಾರವಾರದಲ್ಲಿ 17, ಕುಮಟಾದಲ್ಲಿ 7, ಹೊನ್ನಾವರದಲ್ಲಿ 1, ಮುಂಡಗೋಡದಲ್ಲಿ 13 ಹಾಗೂ ಹಳಿಯಾಳದಲ್ಲಿ 12 ಜನ ಗುಣಮುಖರಾಗಿ ಮನೆಗೆ ಮರಳಿದ್ದಾರೆ.

ಕಾರವಾರದಲ್ಲಿ ಇನ್ನೊಂದು ಸಾವು: ಕೊರೊನಾ ಸೋಂಕು ತಗುಲಿ ಚಿಕಿತ್ಸೆ ಪಡೆಯುತ್ತಿದ್ದ ಕಾರವಾರದ ಮೂಲದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೇ ಸೋಮವಾರ ಸಾವನಪ್ಪಿದ್ದಾರೆ. ಹೀಗಾಗಿ ಉತ್ತರ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿನಿಂದ ಸಾವನಪ್ಪಿದವರ ಸಂಖ್ಯೆ 41ಕ್ಕೆ ಏರಿಕೆಯಾಗಿದೆ. ಕಾರವಾರದಲ್ಲಿ ಈವರೆಗೆ ಕೊರೊನಾ ಸೋಂಕಿನಿಂದ ಐವರು ಸಾವನಪ್ಪಿದ್ದಾರೆ.

ಕೊರೊನಾ ಗೆದ್ದ ಜಿಪಂ ಸಿಇಒ: ಕಳೆದ ಕೆಲವು ದಿನಗಳ ಹಿಂದೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎಂ. ರೋಷನ್ ಅವರು ಕೊರೊನಾ ಸೋಂಕಿಗೆ ಒಳಗಾಗಿದ್ದರು. ಮತ್ತೇ ಗಂಟಲ ದ್ರವ ಪರಿಶೀಲನೆ ನಡೆಸಿದಾಗ ಇಂದು ಕೊರೊನಾ ನೆಗೆಟಿವ್ ಬಂದಿದೆ ಎಂದು ತಿಳಿದು ಬಂದಿದೆ. ಸೋಂಕಿತರಾಗಿದ್ದರಿಂದ ಕೆಲವು ದಿನಗಳ ಕಾಲ ಅವರು ಮನೆಯಲ್ಲೇ ಚಿಕಿತ್ಸೆಗೆ ಒಳಗಾಗಿದ್ದರು.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
178
Srinivas Badkar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು