News Karnataka Kannada
Friday, April 12 2024
Cricket
ಕರ್ನಾಟಕ

ಉತ್ತರ ಕನ್ನಡ ಜಿಲ್ಲೆಯ ಗಣೇಶೋತ್ಸವ ದೇಶಕ್ಕೆ ಮಾದರಿಯಾಗಲಿ : ಡಿಸಿ ಹರೀಶಕುಮಾರ್

Photo Credit :

ಉತ್ತರ ಕನ್ನಡ ಜಿಲ್ಲೆಯ ಗಣೇಶೋತ್ಸವ ದೇಶಕ್ಕೆ ಮಾದರಿಯಾಗಲಿ : ಡಿಸಿ ಹರೀಶಕುಮಾರ್

ಕಾರವಾರ:ಕೊವಿಡ್ ಸೋಂಕು ಹರಡುವಿಕೆಯನ್ನು ತಡೆಯುವಲ್ಲಿ ಉತ್ತರ ಕನ್ನಡ ಜಿಲ್ಲೆಯು ರಾಜ್ಯಕ್ಕೆ ಮಾದರಿಯಾಗಿದ್ದು ಅದರಂತೆ ಈ ಬಾರಿಯ ಗಣೇಶೋತ್ಸವ ಆಚರಣೆಯಲ್ಲೂ ಕೂಡಾ ನಮ್ಮ ಜಿಲ್ಲೆ ದೇಶಕ್ಕೆ ಮಾದರಿಯಾಗಲಿ ಎಂದು ಜಿಲ್ಲಾಧಿಕಾರಿ  ಡಾ. ಹರೀಶಕುಮಾರ್ ಕೆ ತಿಳಿಸಿದರು.  

ಜಿಲ್ಲಾಧಿಕಾರಿ ಕಚೇರಿ ನ್ಯಾಯಾಲಯ ಸಭಾಂಗಣದಲ್ಲಿ ಜಿಲ್ಲೆಯ ಕಂದಾಯ, ಪೊಲೀಸ್, ಪಂಚಾಯತರಾಜ್ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ ಸಭೆಯನ್ನು ನಡೆಸಿದ ಜಿಲ್ಲಾಧಿಕಾರಿ ಜಿಲ್ಲಾ ಉಸ್ತುವಾರಿ ಸಚಿವರು ಈ ಹಿಂದೆ ಕೋರಿಕೊಂಡಂತೆ ಜಿಲ್ಲೆಯಲ್ಲಿ ಯಾವುದೇ ಕಾರಣಕ್ಕೂ 2 ದಿನಗಳಿಗಿಂತಲೂ ಹೆಚ್ಚು ಗಣೇಶೋತ್ಸವ ನಡೆಸಲು ಅವಕಾಶ ಇರುವದಿಲ್ಲ. ಜಿಲ್ಲಾಡಳಿತದ ಮುಖ್ಯ ಉದ್ದೇಶ ಗಣೇಶೋತ್ಸವವನ್ನು  ತಡೆಯುವುದಾಗಿರದೇ ಕೊವಿಡ್ ಸೋಂಕು ಹರಡುವುದನ್ನು ತಡೆಯುವುದ್ದಾಗಿದೆ ಎಂದರು.

ಸಾರ್ವಜನಿಕ ಗಣೇಶೋತ್ಸವ ನಡೆಸಲು ಅನುಮತಿಯನ್ನು ಕಡ್ಡಾಯವಾಗಿ ಪಡೆಯಬೇಕಾಗಿದ್ದು. ತಾಲೂಕಾ ಮಟ್ಟದಲ್ಲಿ ತಹಸೀಲ್ದಾರ್ ಕಚೇರಿಯಲ್ಲಿ ಪೊಲೀಸ್ ಇಲಾಖೆ ಹಾಗೂ ಸ್ಥಳಿಯ ಸಂಸ್ಥೆಯ ಪ್ರತಿನಿಧಿಗಳಿರುವ ಏಕ ಗವಾಕ್ಷಿಯನ್ನು ರಚಿಸಿ ಸರಕಾರದ ಮಾರ್ಗಸೂಚಿಯಂತೆ ನಿಬಂಧನೆಗಳನ್ನು ವಿಧಿಸಿ ಅನುಮತಿ ನೀಡಬೇಕು ಹಾಗೂ ಈ ಬಗ್ಗೆ ಪರಿಶೀಲಿಸಲು ಪ್ರತಿ ಸಾರ್ವಜನಿಕ ಗಣೇಶೋತ್ಸವ ಸ್ಥಳಕ್ಕೆ ಒಬ್ಬ ನೊಡೇಲ್ ಅಧಿಕಾರಿಯನ್ನು ನೇಮಿಸಬೇಕು ಎಂದು ಅವರು ಅಧಿಕಾರಿಗಳಿಗೆ ತಿಳಿಸಿದರು. 

ಅನುಮತಿ ಪತ್ರದಲ್ಲಿ ವಿಧಿಸಲಾಗಿರುವ ನಿಬಂಧನೆಗಳನ್ನು ಪಾಲಿಸುವ ಬಗ್ಗೆ ಸಮಿತಿಯ  ಒಬ್ಬ ವ್ಯಕ್ತಿಯಿಂದ ಲಿಖಿತ ಮುಚ್ಚಳಿಕೆಯನ್ನು ಪಡೆದುಕೊಳ್ಳಬೇಕು, ಯಾವುದೇ ರೀತಿಯಲ್ಲಿ ಸರಕಾರದ ಮಾರ್ಗಸೂಚಿಯ ನಿರ್ದೇಶಗಳ ಉಲ್ಲಂಘನೆಯಾದಲ್ಲಿ ಆ ವ್ಯಕ್ತಿಯನ್ನೇ ಜವಾಬ್ದಾರನನ್ನಾಗಿ ಮಾಡಬೇಕು ಎಂದು ತಿಳಿಸಿದ ಜಿಲ್ಲಾಧಿಕಾರಿ ಈ ಜಿಲ್ಲೆಯ ಜನರು ಪ್ರಜ್ಞಾವಂತರಿದ್ದು , ಅವರಿಗೆ ಸರಕಾರದ  ಮಾರ್ಗಸೂಚಿ ಹಾಗೂ ಕೊವಿಡ್ ಮಾರ್ಗಸೂಚಿಗಳ ಬಗ್ಗೆ ಅಧಿಕಾರಿಗಳು ಸೂಕ್ತ ತಿಳುವಳಿಕೆ ಹಾಗೂ ಮಾರ್ಗದರ್ಶನವನ್ನು ನೀಡಬೇಕು ಎಂದು ಸೂಚಿಸಿದರು. ಈ ಸಂದರ್ಭದಲ್ಲಿ  ಪೊಲೀಸ್ ಅಧೀಕ್ಷಕ ಶಿವಪ್ರಕಾಶ ದೇವರಾಜು, ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ.ಹೆಚ್.ಕೆ, ಎಂ, ತಹಸೀಲ್ದಾರ್  ಆರ್. ವಿ. ಕಟ್ಟಿ  ಇದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
178
Srinivas Badkar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು