News Karnataka Kannada
Sunday, April 14 2024
Cricket
ಕರ್ನಾಟಕ

ಉಪಚುನಾವಣೆ ಎದುರಿಸಲಾಗದೆ ಡಿಕೆಶಿ ಮನೆ ಮೇಲೆ ಸಿಬಿಐ ದಾಳಿ: ಕೆ.ಬಿ.ಪ್ರಸನ್ನಕುಮಾರ್ ಆರೋಪ

Photo Credit :

 ಉಪಚುನಾವಣೆ ಎದುರಿಸಲಾಗದೆ ಡಿಕೆಶಿ ಮನೆ ಮೇಲೆ ಸಿಬಿಐ ದಾಳಿ: ಕೆ.ಬಿ.ಪ್ರಸನ್ನಕುಮಾರ್ ಆರೋಪ

ಶಿವಮೊಗ್ಗ: ಮುಂಬರುವ ಉಪಚುನಾವಣೆ ಎದುರಿಸಲಾಗದೆ ಡಿಕೆಶಿ ಮನೆ ಮೇಲೆ ಸಿಬಿಐ ದಾಳಿ ನಡೆಸಿದೆ ಎಂದು ಮಾಜಿ ಶಾಸಕ ಕೆ.ಬಿ.ಪ್ರಸನ್ನಕುಮಾರ್ ಆರೋಪಿಸಿದ್ದಾರೆ.

ಸುಗ್ರೀವಾಜ್ಞೆ ಮೂಲಕ ಕೃಷಿ ಮಸೂದೆಯನ್ನ ಜಾರಿಗೊಳಿಸಲು ಹೊರಟಿರುವ ಬಿಜೆಪಿ ಕಾಂಗ್ರೆಸ್ ದೇಶದ ಜನರ ದಿಕ್ಕುತಪ್ಪಿಸುತ್ತಿದೆ ಎಂದು ಆರೋಪಿಸುತ್ತಿರುವುದು ಇವರಿಗೆ(ಬಿಜೆಪಿಗೆ) ತಿನ್ನೋ ಅನ್ನ ಜೀರ್ಣವಾಗುತ್ತಿಲ್ಲವೆಂಬುದು ಖಚಿತಗೊಳ್ಳುತ್ತದೆ ಎಂದು ಕೆಪಿಸಿಸಿ ವಕ್ತಾರ ಹಾಗೂ ಮಾಜಿ ಶಾಸಕ ಕೆ.ಬಿ.ಪ್ರಸನ್ನಕುಮಾರ್ ಆರೋಪಿಸಿದ್ದಾರೆ.

ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಾಂಗ್ರೆಸ್ ಪ್ರನಾಳಿಕೆಯಲ್ಲಿದೆ ಎಂದ ಮಾತ್ರಕ್ಕೆ ಜಾರಿಗೊಳಿಸಬೇಕೆಂಬ ಕಾನೂನು ಇದೆಯಾ ಎಂದು ಪ್ರಶ್ನಿಸಿದ ಅವರು ಬಿಜೆಪಿ ಪ್ರನಾಳಿಕೆಯಲ್ಲಿರುವ ಸ್ವಾಮಿನಾಥನ್ ವರದಿ ಯಾಕೆ ಇನ್ನೂ ಜಾರಿಗೊಳಿಸಿಲ್ಲ ಎಂದು ಪ್ರಶ್ನಿಸಿದರು.

ಕೃಷಿ ಮಸೂದೆಯ ಬಗ್ಗೆ ಚರ್ಚೆ ಮಾಡದೆ ಮಸೂದೆ ಜಾರಿಗೊಳಿಸುತ್ತಿರುವ ಬಿಜೆಪಿ ಪುನರ್ ಪರಿಶೀಲಿಸಬೇಕು ಹಾಗೂ ಮಸೂದೆಯನ್ನ ವಾಪಾಸ್ ಪಡೆಯಬೇಕು ಎಂದರು.

ಕೃಷಿ ಮಸೂದೆಗೆ ತಿದ್ದಪಡಿ ತರುವ ಮೂಲಕ ಜಾರಿಗೊಳ್ಳುತ್ತಿರುವ ಬಿಜೆಪಿ ಅಂಗ ಎನಿಸಿಕೊಂಡಿರುವ ಭಾರತೀಯ ಕಿಸಾನ್ ಮಂಚ್ ಏಕೆ ಪ್ರತಿಭಟಿಸುತ್ತಿದೆ. ಕಾಂಗ್ರೆಸ್ ಪಕ್ಷ ಈ ಮಸೂದೆನ್ನ ರಾಜಕೀಯ ಮಾಡುತ್ತಿದೆ ಎಂದು ಮುಖ್ಯಮಂತ್ರಿ ರೇಸ್ ನಲ್ಲಿರುವವರು ಹೇಳುತ್ತಿದ್ದಾರೆ. ಹಾಗಾದರೆ ಕೇಂದ್ರ ಮಂತ್ರಿ ಪದವಿ ತ್ಯಜಿಸಿ ಶಿರೋಮಣಿ ಅಕಾಲಿದಳ ಯಾಕೆ ವಿರೋಧ ವ್ಯಕ್ತಪಡಿಸುತ್ತಿದೆ ಎಂದು ಸಚಿವ ಈಶ್ವರಪ್ಪನವರನ್ನ ಪರೋಕ್ಷವಾಗಿ ಪ್ರಶ್ನಿಸಿದರು.

ಡಿಕೆಶಿ ಮತ್ತು ಸಹೋದರ ಸುರೇಶ್ ಮನೆಯ ಮೇಲೆ ಸಿಬಿಐ ದಾಳಿ ನಡೆಸಿರುವುದು ರಾಜಕೀಯ ಷಡ್ಯಂತರ ಎಂದು ಆರೋಪಿಸಿರುವ ಪ್ರಸನ್ನಕುಮಾರ್ ಶಿರಾ ಮತ್ತು ರಾಜರಾಜೇಶ್ವರಿ ನಗರದ ಬೈ ಎಲೆಕ್ಷನ್ ಎದುರಿಸಲು ಆಗದ ಬಿಜೆಪಿ ಡಿಕೆಶಿ ಮತ್ತು ಡಿಕೆಸು ಮನೆಯ ಮೇಲೆ ದಾಳಿ ನಡೆಸಲಾಗುತ್ತಿದೆ ಎಂದು ಆರೋಪಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
149

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು