News Karnataka Kannada
Wednesday, April 24 2024
Cricket
ಕರ್ನಾಟಕ

ಉಪಟಳ ನೀಡುತ್ತಿದ್ದ ಚಿರತೆ ಬೋನಿಗೆ

Photo Credit :

ಉಪಟಳ ನೀಡುತ್ತಿದ್ದ ಚಿರತೆ ಬೋನಿಗೆ

ಮಂಡ್ಯ: ಕೆ.ಆರ್.ಪೇಟೆ ತಾಲ್ಲೂಕಿನ ಗುಬ್ಬಹಳ್ಳಿ ಗ್ರಾಮದಲ್ಲಿ ಹಲವು ದಿನಗಳಿಂದ  ಸಾಕು ಪ್ರಾಣಿಗಳನ್ನು ತಿಂದು ರೈತರಿಗೆ ತೊಂದರೆ ನೀಡುತ್ತಿದ್ದ ಚಿರತೆಯನ್ನು ಅರಣ್ಯಾಧಿಕಾರಿಗಳ ತಂಡವು ಕಾರ್ಯಾಚರಣೆ ನಡೆಸಿ ಸೆರೆಹಿಡಿಯುವಲ್ಲಿ ಯಶಸ್ವಿಯಾಗಿದೆ.

ಗುಬ್ಬಹಳ್ಳಿ ಗ್ರಾಮದಲ್ಲಿ ರೈತರ ಕುರಿ, ಮೇಕೆ, ನಾಯಿ, ಹಸುಗಳನ್ನು ಕೊಂದು ತಿನ್ನುವ ಮೂಲಕ ರೈತರಲ್ಲಿ ಹಾಗೂ ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿದ್ದ ಚಿರತೆಯನ್ನು ಹಿಡಿಯುವಂತೆ ಗ್ರಾಮಸ್ಥರು ಅರಣ್ಯಾಧಿಕಾರಿಗಳಿಗೆ ಮನವಿ ಮಾಡಿದ್ದರು.

ಈ ಹಿನ್ನೆಲೆಯಲ್ಲಿ ಕಳೆದ ಮೂರು ದಿನಗಳ ಹಿಂದೆ ಅರಣ್ಯಾಧಿಕಾರಿಗಳಾದ ಗಂಗಾಧರ್, ರಾಘವೇಂದ್ರ ನೇತೃತ್ವದಲ್ಲಿ ತಂಡವು ಗುಬ್ಬಹಳ್ಳಿ ಗ್ರಾಮದ ರೈತರಾದ ಚಂದ್ರಪ್ಪ ಅವರ ಜಮೀನಿನ ಬಳಿ ಬೋನಿಟ್ಟು ಕಾರ್ಯಾಚರಣೆ ನಡೆಸಿದ್ದ ಹಿನ್ನೆಲೆಯಲ್ಲಿ ಚಿರತೆಯು ಆಹಾರ ಅರಸಿ ಬಂದು  ಬೋನಿಗೆ ಬಿದ್ದು ಸೆರೆಯಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು