News Karnataka Kannada
Wednesday, April 17 2024
Cricket
ಕರ್ನಾಟಕ

ಉ.ಕನ್ನಡ ಜಿಲ್ಲೆಯಲ್ಲಿ ಐದು ಸಾವಿರ ಗಡಿ ದಾಟಿದ ಕೊರೊನಾ

Photo Credit :

ಉ.ಕನ್ನಡ ಜಿಲ್ಲೆಯಲ್ಲಿ ಐದು ಸಾವಿರ ಗಡಿ ದಾಟಿದ ಕೊರೊನಾ

ಕಾರವಾರ: ಜಿಲ್ಲೆಯಲ್ಲಿ ಮಂಗವಾರ 103 ಹೊಸ ಕೊರೊನಾ ಸೋಂಕಿತರು ಪತ್ತೆಯಾದ್ದು ಜಿಲ್ಲೆಯಲ್ಲಿ ಈವರೆಗೆ ಕೊರೊನಾ ಸೋಂಕಿತರ ಸಂಖ್ಯೆ ಐದು ಸಾವಿರ (5069) ಗಡಿ ದಾಟಿದೆ.

ಮಂಗಳವಾರ ಪತ್ತೆಯಾದ ಪ್ರಕರಣಗಳ ಪೈಕಿ ಕಾರವಾರ 6, ಅಂಕೋಲಾ 11, ಕುಮಟಾ 4, ಹೊನ್ನಾವರ 9, ಭಟ್ಕಳ 8, ಶಿರಸಿ 25, ಸಿದ್ದಾಪುರ 3, ಯಲ್ಲಾಪುರ 1, ಮುಂಡಗೋಡ 6, ಹಳಿಯಾಳ 29 ಹಾಗೂ ಜೊಯಿಡಾದಲ್ಲಿ 1 ಪ್ರಕರಣಗಳು ಪತ್ತೆಯಾಗಿದೆ. ಜಿಲ್ಲೆಯಲ್ಲಿ ಪ್ರಕರಣಗಳು ಹೆಚ್ಚುತ್ತಲೇ ಇದ್ದು ಜನರು ಆತಂಕದಲ್ಲಿದ್ದಾರೆ.

ಜಿಲ್ಲೆಯ ವಿವಿಧ ಕೊರೊನಾ ವಾರ್ಡ್ ಗಳಲ್ಲಿ ಚಿಕಿತ್ಸೆಗೆ ದಾಖಲಾಗಿದ್ದ ಸೋಂಕಿತರ ಪೈಕಿ ಮಂಗಳವಾರ 68 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಈವರೆಗೆ 3811 ಜನರು ಗುಣಮುಖರಾಗಿದ್ದಾರೆ. ಬಿಡುಗಡೆಯಾದವರ ಪೈಕಿ ಕಾರವಾರ 3, ಅಂಕೋಲಾ 5, ಹೊನ್ನಾವರ 27, ಯಲ್ಲಾಪುರ 2, ಮುಂಡಗೋಡ 6 ಹಳಿಯಾಳದಲ್ಲಿ 25ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇದರಿಂದ ಜಿಲ್ಲೆಯ ಜನರಿಗೆ ಕೊಂಚ ಸಮಾಧಾನ ತಂದಿದೆ.

ಮುಂಡಗೋಡದಲ್ಲಿ ಒಬ್ಬನ ಸಾವು

ಕೊರೊನಾ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದವರ ಪೈಕಿ ಜಿಲ್ಲೆಯ ಮುಂಗಡೋಡದ ತಾಲೂಕಿನಲ್ಲಿ ಮಂಗಳವಾರ ಓರ್ವರು ಮೃತಪಟ್ಟಿದ್ದಾರೆ. ‌ಈ ಮೂಲಕ‌ ಜಿಲ್ಲೆಯಲ್ಲಿ ಕೊರೊನಾದಿಂದ ಮೃತಪಟ್ಟವರ ಸಂಖ್ಯೆ 54 ಕ್ಕೆ ಏರಿಕೆಯಾಗಿದೆ.

ಕಾರವಾರದಲ್ಲಿ ಈ ವರೆಗೆ 7, ಅಂಕೋಲಾ 4, ಹೊನ್ನಾವರ 6, ಭಟ್ಕಳ 13, ಶಿರಸಿ‌6, ಯಲ್ಲಾಪುರ 1, ಮುಂಡಗೋಡ 4, ಹಳಿಯಾಳದಲ್ಲಿ 13 ಜನರು ಈವರೆಗೆ ಮೃತಪಟ್ಟಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
178
Srinivas Badkar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು