News Karnataka Kannada
Thursday, April 18 2024
Cricket
ಕರ್ನಾಟಕ

ಎಂಪಿ ಅನಂತಕುಮಾರ ವಿರುದ್ಧ ಸಿಡಿದೆದ್ದ ಬಿಎಸ್ಎನ್ಎಲ್ ನೌಕರರು    

Photo Credit :

ಎಂಪಿ ಅನಂತಕುಮಾರ ವಿರುದ್ಧ ಸಿಡಿದೆದ್ದ ಬಿಎಸ್ಎನ್ಎಲ್ ನೌಕರರು      

ಕಾರವಾರ:ಬಿಎಸ್ಎನ್ಎಲ್ ವಿರುದ್ಧ ಸಂಸದ ಆನಂತಕುಮಾರ್ ಹೆಗಡೆ ನೀಡಿದ ಹೇಳಿಕೆಯನ್ನು ವಿರೋಧಿಸಿ ಇಲ್ಲಿನ ಪ್ರಧಾನ ಕಚೇರಿಯಲ್ಲಿ ಬಿಎಸ್ಎನ್ಎಲ್ ಅಧಿಕಾರಿಗಳು ಹಾಗೂ ನೌಕರರು ಪ್ರತಿಭಟನೆ ನಡೆಸಿರು. ಸಂಸದ ಹೆಗಡೆ ವಿರುದ್ದ ಘೋಷಣೆ ಹಾಕಿದರು.

ಕುಮಟಾದ ಕೂಜಳ್ಳಿಯಲ್ಲಿ ಸಾರ್ವಜನಿಕ ಭಾಷಣ ಮಾಡಿದ್ದ ಅನಂತಕುಮಾರ ಹೆಗಡೆ ಬಿಎಸ್ಎನ್ಎಲ್ ಸಂಸ್ಥೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವರು ದೇಶದ್ರೋಹಿಗಳು ಎನ್ನುವ ಹೇಳಿಕೆ ನೀಡುವ ಮೂಲಕ ಬಿಎಸ್ಎನ್ಎಲ್ ನೌಕರರನ್ನು ನಿಂದಿಸಿದ್ದರು. ಅವರು ಕೂಡಲೇ ಕ್ಷಮೆ ಕೋರಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಕ್ಷಮೆ ಕೋರದಿದ್ದರೆ ಅವರ ವಿರುದ್ಧ ಮಾನಹಾನಿ ಮೊಕದ್ದಮೆ ದಾಖಲಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.ಕೇಂದ್ರ ಸರ್ಕಾರದ ಅಧೀನದಲ್ಲಿ ಬಿಎಸ್ಎನ್ಎಲ್ ಸಂಸ್ಥೆ ಕೆಲಸ ಮಾಡುತ್ತಿದೆ. ತಮ್ಮದೇ ಸರ್ಕಾರದ ವಿರುದ್ಧ ಅನಂತಕುಮಾರ ಹೆಗಡೆ ದೇಶದ್ರೋಹದ ಆರೋಪ ಮಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ಇನ್ನಿತರ ಗಣ್ಯರು ಬಿಎಸ್ಎನ್ಎಲ್ ಕಾರ್ಯವೈಖರಿ ಬಗ್ಗೆ ಮೆಚ್ಚುಗೆ ಸೂಚಿಸುತ್ತಿರುವಾಗ ಸಂಸದರು ಈ ರೀತಿ ಹೇಳಿಕೆ ನೀಡಿರುವುದು ಸರಿಯಲ್ಲ ಎಂದು ಆಕ್ರೋಶ ಹೊರ ಹಾಕಿದರು. ಪ್ರಮುಖರಾದ ಪಿ.ಎಸ್ ಭಟ್ಟ, ಎಂ.ಎನ್ ಹೆಗಡೆ ಇತರರು ಪ್ರತಿಭಟನೆಯಲ್ಲಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
178
Srinivas Badkar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು