News Karnataka Kannada
Wednesday, April 24 2024
Cricket
ಕರ್ನಾಟಕ

ಎಲ್ಲಾ ಆಸ್ಪತ್ರೆಗಳಲ್ಲಿ ಕೋವಿಡ್ ಪರೀಕ್ಷೆ: ಡಾ.ಎಸ್.ಎಚ್.ಮಹೇಶ್

Photo Credit :

ಎಲ್ಲಾ ಆಸ್ಪತ್ರೆಗಳಲ್ಲಿ ಕೋವಿಡ್ ಪರೀಕ್ಷೆ: ಡಾ.ಎಸ್.ಎಚ್.ಮಹೇಶ್

ಮಡಿಕೇರಿ: ಜಿಲ್ಲೆಯ ಎಲ್ಲಾ ಪ್ರಾಥಮಿಕ, ಸಮುದಾಯ ಆರೋಗ್ಯ ಕೇಂದ್ರ ಮತ್ತು ಸರ್ಕಾರಿ ಆಸ್ಪತ್ರೆಗಳಲ್ಲಿ ಕೋವಿಡ್-19 ಪರೀಕ್ಷೆ ನಡೆಸಲಾಗುತ್ತದೆ ಎಂದು ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಸಮುದಾಯ ಆರೋಗ್ಯ ವಿಭಾಗದ ಸಹ ಪ್ರಾಧ್ಯಾಪಕರಾದ ಡಾ.ಎಸ್.ಎಚ್.ಮಹೇಶ್ ಅವರು ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ದೃಢಪಟ್ಟವರಿಗೆ ಸರ್ಕಾರದ ನಿಯಮಾನುಸಾರ ಜಿಲ್ಲಾ ಕೋವಿಡ್ ಆಸ್ಪತ್ರೆ ಮತ್ತು ಕೋವಿಡ್ ಕೇರ್ ಸೆಂಟರ್‍ ಗಳಲ್ಲಿ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ ಎಂದರು.

ಕೋವಿಡ್-19 ಸಂಬಂಧ ಸಾರ್ವಜನಿಕರಲ್ಲಿರುವ ಕೆಲವು ಗೊಂದಲಗಳನ್ನು ನಿವಾರಿಸುವ ಸಲುವಾಗಿ ಮಾಹಿತಿ ನೀಡಿ ಅವರು ಮಾತನಾಡಿದರು.

ಶೀತ, ಕೆಮ್ಮು, ಜ್ವರದ ರೋಗ ಲಕ್ಷಣಗಳಿರುತ್ತವೆಯೋ ಅವರಿಗೆ ಕೋವಿಡ್ ಪರೀಕ್ಷೆ ನಡೆಸಲಾಗುತ್ತದೆ. ಜೊತೆಗೆ ಸೋಂಕಿತ ವ್ಯಕ್ತಿಯ ಪ್ರಾಥಮಿಕ ಸಂಪರ್ಕ ಮತ್ತು ವಿದೇಶದಿಂದ ಆಗಮಿಸುವವರಿಗೆ ನಿಯಮದಂತೆ ಕಡ್ಡಾಯವಾಗಿ ಕೋವಿಡ್-19 ಪರೀಕ್ಷೆ ನಡೆಸಲಾಗುತ್ತದೆ ಎಂದು ಡಾ.ಮಹೇಶ್ ಅವರು ವಿವರಿಸಿದರು.

ಕೊರೊನಾ ವೈರಸ್ ಪತ್ತೆಗಾಗಿ 2 ರೀತಿಯಲ್ಲಿ ಪರೀಕ್ಷೆಯನ್ನು ನಡೆಸಲಾಗುತ್ತದೆ. ಆರ್‍ಟಿಪಿಸಿಆರ್ ಮತ್ತು ರ್ಯಾಪಿಟ್ ಆಂಟಿಜನ್ ಕಿಟ್ ಮುಖಾಂತರ ಕೊರೊನಾ ವೈರಸ್‍ನ್ನು ಪತ್ತೆ ಹಚ್ಚಲಾಗುತ್ತದೆ. ಆರ್‍ಟಿಪಿಸಿಆರ್ ವಿಧಾನದ ಮೂಲಕ ವ್ಯಕ್ತಿಯ ಮೂಗು ಅಥವಾ ಗಂಟಲು ದ್ರವ ಮಾದರಿಯನ್ನು ಸಂಗ್ರಹಿಸಿ ಐಸಿಎಂಆರ್‍ನಿಂದ ಅಂಗೀಕೃತ ಪ್ರಯೋಗಾಲಯದಲ್ಲಿ ಈ ದ್ರವದ ಪರೀಕ್ಷೆ ನಡೆಸಲಾಗುತ್ತದೆ ಎಂದರು.

ರ್ಯಾಪಿಡ್ ಆಂಟಿಜನ್ ಕಿಟ್ ಬಳಸಿ ಸಾಮಾನ್ಯವಾಗಿ ಎಲ್ಲಾ ವ್ಯಕ್ತಿಗಳಿಗೂ ಸಹ ಪರೀಕ್ಷೆ ನಡೆಸಲು ಸಾಧ್ಯವಿಲ್ಲ. ಈ ಪರೀಕ್ಷೆ ವಿಧಾನವನ್ನು ಕೋವಿಡ್-19 ಶಂಕಿತ ವ್ಯಕ್ತಿಯ ಮರಣ ಸಂದರ್ಭದಲ್ಲಿ ಪರೀಕ್ಷಿಸಲಾಗುವುದು ಎಂದು ಡಾ.ಮಹೇಶ್ ಅವರು ತಿಳಿಸಿದರು.

ಇನ್ನು ಆರ್‍ಟಿಪಿಸಿಆರ್ ಮುಖಾಂತರ ವ್ಯಕ್ತಿಯೊಬ್ಬನ ಗಂಟಲು/ ಮೂಗು ದ್ರವವನ್ನು ಸಂಗ್ರಹಿಸಿ 48 ಗಂಟೆಯೊಳಗೆ ಕೋವಿಡ್-19 ಪರೀಕ್ಷೆಯ ಫಲಿತಾಂಶ ದೊರೆಯಲಿದೆ. ರ್ಯಾಪಿಡ್ ಆಂಟಿಜನ್ ಕಿಟ್ ಮುಖಾಂತರ ಶೀಘ್ರವೇ ಕೋವಿಡ್-19 ಸಂಬಂಧ ಫಲಿತಾಂಶ ದೊರೆಯಲಿದೆ ಎಂದರು.

ಪಾಸಿಟಿವ್ ಅಥವಾ ನೆಗೆಟಿವ್ ಬಂದಂತಹ ಸಂದರ್ಭದಲ್ಲಿ ಬಹಳ ಎಚ್ಚರಿಕೆಯಿಂದ ಜಿಲ್ಲಾಡಳಿತ ಮುಖಾಂತರ ಮಾಹಿತಿ ನೀಡಲಾಗುತ್ತಿದೆ. ನೆಗೆಟಿವ್ ವರದಿ ಬಂದವರ ಮಾಹಿತಿಯನ್ನು ಜಿಲ್ಲಾಡಳಿತದ ವೆಬ್ ಸೈಟ್ ಮುಖಾಂತರ ಮಾಹಿತಿ ಲಭ್ಯವಾಗಲಿದೆ. ಈ ಸಂಬಂಧ ಪ್ರತಿ ದಿನವೂ ಸಹ ವರದಿ ನೀಡಲಾಗುತ್ತದೆ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು