News Karnataka Kannada
Monday, April 22 2024
Cricket
ಕರ್ನಾಟಕ

ಕಂಟೈನ್‍ಮೆಂಟ್ ವಲಯಗಳಲ್ಲಿ ಬಿಗಿ ಬಂದೋಬಸ್ತು: ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಸೂಚನೆ

Photo Credit :

ಕಂಟೈನ್‍ಮೆಂಟ್ ವಲಯಗಳಲ್ಲಿ ಬಿಗಿ ಬಂದೋಬಸ್ತು: ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಸೂಚನೆ

ಶಿವಮೊಗ್ಗ : ಗ್ರಾಮೀಣ ಪ್ರದೇಶಗಳಲ್ಲಿ ಕೋವಿಡ್ ಹರಡುವುದನ್ನು ತಡೆಗಟ್ಟಲು ಕಠಿಣ ಕಂಟೈನ್‍ಮೆಂಟ್ ವಲಯಗಳ ರಚನೆ, ಹೋಬಳಿ ಮಟ್ಟಗಳಲ್ಲಿ ಕೋವಿಡ್ ಕೇರ್ ಸೆಂಟರ್ ಆರಂಭ ಸೇರಿದಂತೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಮತ್ತು ಪೊಲೀಸ್ ವರಿಷ್ಟಾಧಿಕಾರಿ ಲಕ್ಷ್ಮೀ ಪ್ರಸಾದ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು

 

ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಕೋವಿಡ್ ನಿಯಂತ್ರಣದ ಕುರಿತು ಪರಿಶೀಲನಾ ಸಭೆ ನಡೆಸಿದರು

 

ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವ್ ಪ್ರಮಾಣ ಏರುಗತಿಯಲ್ಲಿದ್ದು, ಮುಂದಿನ ಒಂದು ವಾರ ಅತ್ಯಂತ ಮಹತ್ವದ್ದಾಗಿದೆ. ಈ ಅವಧಿಯಲ್ಲಿ ಕಟ್ಟುನಿಟ್ಟಾಗಿ ಲಾಕ್‍ಡೌನ್, ಕಂಟೈನ್‍ಮೆಂಟ್ ವಲಯ ನಿರ್ವಹಣೆಯನ್ನು ಕೈಗೊಳ್ಳಬೇಕು. ಗ್ರಾಮೀಣ ಪ್ರದೇಶದಲ್ಲಿ ಒಂದೇ ಪ್ರದೇಶದಲ್ಲಿ ಸತತ ಎರಡು ದಿನ ಐದು ಪಾಸಿಟಿವ್ ಪ್ರಕರಣಗಳು ಪತ್ತೆಯಾದರೆ ಅದನ್ನು ಕಂಟೈನ್‍ಮೆಂಟ್ ವಲಯವೆಂದು ಘೋಷಿಸಿ ಜನರ ಸಂಚಾರವನ್ನು ಸಂಪೂರ್ಣವಾಗಿ ನಿರ್ಬಂಧಿಸಬೇಕು. ಇಲ್ಲಿನ ಜನರ ದಿನಸಿ, ಔಷಧಿ ಇತ್ಯಾದಿ ಅವಶ್ಯಕತೆಗಳನ್ನು ಮನೆ ಬಾಗಿಲಿಗೆ ತಲುಪಿಸಲು ಕ್ರಮ ಕೈಗೊಳ್ಳಬೇಕು. ಸಣ್ಣ ಗ್ರಾಮ ಪಂಚಾಯತ್‍ಗಳಾದರೆ ಇಡೀ ಗ್ರಾಮ ಪಂಚಾಯತ್ ಕಂಟೈನ್‍ಮೆಂಟ್ ವಲಯವೆಂದು ಪರಿಗಣಿಸಬೇಕು. ಕರೋನಾ ಪೀಡಿತರ ಮನೆಗೆ ಆಶಾ ಕಾರ್ಯಕರ್ತೆಯರು ಪ್ರತಿ ದಿನ ಭೇಟಿ ನೀಡಿ ಆರೋಗ್ಯದ ಕುರಿತು ಮಾತ್ರವಲ್ಲದೆ ಇನ್ನಿತರ ಅಗತ್ಯ ವಸ್ತುಗಳ ಕುರಿತಾಗಿಯೂ ಮಾಹಿತಿಯನ್ನು ಪಡೆದುಕೊಂಡು ಇನ್ಸಿಡೆಂಟ್ ಕಮಾಂಡರ್ ಅವರಿಗೆ ತಲುಪಿಸಬೇಕು. ರೋಗಿಗಳ ಆರೋಗ್ಯ ತಪಾಸಣೆಗೆ ಆಯುಷ್ ವೈದ್ಯರ ಸೇವೆಯನ್ನು ಪಡೆಯಲು ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.

 

ಪ್ರತಿ ಕಂಟೈನ್‍ಮೆಂಟ್ ಪ್ರದೇಶದಲ್ಲಿ ಸೂಕ್ತ ಪೊಲೀಸ್ ಬಂದೋಬಸ್ತು ಏರ್ಪಡಿಸಲಾಗುವುದು. ಮುಂದಿನ ದಿನಗಳಲ್ಲಿ ಗ್ರಾಮೀಣ ಟಾಸ್ಕ್‍ಫೋರ್ಸ್ ಕಾರ್ಯ ಮಹತ್ವದ್ದಾಗಿದ್ದು, ತಮ್ಮ ಪ್ರದೇಶದಲ್ಲಿ ದಿನದ 24ಗಂಟೆ ಕಟ್ಟೆಚ್ಚರದಿಂದಿದ್ದು, ಕರ್ತವ್ಯ ನಿರ್ವಹಿಸಬೇಕು ಲಕ್ಷ್ಮೀಪ್ರಸಾದ್ ಅವರು ತಿಳಿಸಿದರು.

 

ಹೋಬಳಿ ಮಟ್ಟದಲ್ಲಿ ಅಗತ್ಯವಿರುವ ಕಡೆಗಳಲ್ಲಿ ಕೋವಿಡ್ ಕೇರ್ ಸೆಂಟರ್‍ಗಳನ್ನು ಆರಂಭಿಸಲು ಈಗಾಗಲೇ ತಹಶೀಲ್ದಾರ್‍ಗಳಿಗೆ ಸೂಚನೆ ನೀಡಲಾಗಿದೆ. ಹೋಂ ಐಸೋಲೇಷನ್‍ಗೆ ಅವಕಾಶ ನೀಡದೆ ಆದಷ್ಟು ಈ ಕೇಂದ್ರಗಳಲ್ಲಿ ಕೆಲವು ದಿನಗಳ ಮಟ್ಟಿಗೆ ಆರೈಕೆ ಮಾಡಬೇಕು. ಯಾವುದೇ ಕಾರಣಕ್ಕೂ ತಾಲೂಕು ಹಾಗೂ ಗ್ರಾಮಾಂತರ ಪ್ರದೇಶಗಳಿಂದ ನೇರವಾಗಿ ಕೋವಿಡ್ ಪೀಡಿತರು ನೇರವಾಗಿ ಮೆಗ್ಗಾನ್‍ಗೆ ಬರಬಾದರು. ತಾಲೂಕು ಕೇಂದ್ರದಲ್ಲಿ ಪರಿಶೀಲಿಸಿದ ಬಳಿಕ ಅಲ್ಲಿಂದ ಕಡ್ಡಾಯವಾಗಿ ಅಂಬುಲೆನ್ಸ್ ಮೂಲಕ ಅಗತ್ಯವಿದ್ದರೆ ಮೆಗ್ಗಾನ್‍ಗೆ ಕಳುಹಿಸಬೇಕು. ಕೋವಿಡ್ ಪೀಡಿತರ ಚಿಕಿತ್ಸೆ ಕುರಿತಾಗಿ ತಾಲೂಕು ಮಟ್ಟದ ಎಲ್ಲಾ ನರ್ಸ್‍ಗಳಿಗೆ, ಡಿ ಗ್ರೂಪ್ ಸಿಬ್ಬಂದಿಗೆ ತಜ್ಞರಿಂದ ತರಬೇತಿಯನ್ನು ಆಯೋಜಿಸಲಾಗುವುದು. ಖಾಸಗಿ ಆಸ್ಪತ್ರೆಗಳು ತಾವು ಕರೋನಾ ಪರೀಕ್ಷೆಗೆ ಹಾಗೂ ಸಿಟಿ ಸ್ಕ್ಯಾನ್‍ಗೆ ಶಿಫಾರಸು ಮಾಡಿರುವವರ ವಿವರಗಳನ್ನು ನಿಗದಿತ ನಮೂನೆಯಲ್ಲಿ ಸಲ್ಲಿಸಬೇಕು ಎಂದು ಹೇಳಿದರು.

 

ಪ್ರಾಥಮಿಕ ಸಂಪರ್ಕಿತರು ಕಡ್ಡಾಯವಾಗಿ ಹೋಂ ಐಸೋಲೇಷನ್‍ನಲ್ಲಿರುವುದನ್ನು ಖಾತ್ರಿಪಡಿಸಬೇಕು. ನ್ಯಾಯಬೆಲೆ ಅಂಗಡಿಗಳ ಮುಂದೆ ಜನಸಂದಣಿಯಾಗದಂತೆ ಕ್ರಮ ಕೈಗೊಳ್ಳಬೇಕು. ತಾಲೂಕು ಆಸ್ಪತ್ರೆಗಳಲ್ಲಿ ಲಭ್ಯವಿರುವ ಆಕ್ಸಿಜನ್ ಬಗ್ಗೆ ಪ್ರತಿದಿನ ನಿಗದಿತ ನಮೂನೆಯಲ್ಲಿ ಮಾಹಿತಿ ನೀಡಬೇಕು ಎಂದರು.

 

ಅಪರ ಜಿಲ್ಲಾಧಿಕಾರಿ ಜಿ.ಅನುರಾಧ, ಡಿಎಚ್‍ಒ ಡಾ.ರಾಜೇಶ ಸುರಗಿಹಳ್ಳಿ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
205

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು