News Karnataka Kannada
Monday, April 15 2024
Cricket
ಕರ್ನಾಟಕ

ಕಲಬುರಗಿಯನ್ನು ವಿಶೇಷ ಹೂಡಿಕೆ ವಲಯವನ್ನಾಗಿ ಘೋಷಿಸಲಾಗುವುದು -ಜಗದೀಶ ಶೆಟ್ಟರ್

Photo Credit :

ಕಲಬುರಗಿಯನ್ನು ವಿಶೇಷ ಹೂಡಿಕೆ ವಲಯವನ್ನಾಗಿ ಘೋಷಿಸಲಾಗುವುದು -ಜಗದೀಶ ಶೆಟ್ಟರ್

ಕಲಬುರಗಿ: ಧಾರವಾಡ, ಶಿವಮೊಗ್ಗ ಜೊತೆಗೆ ಕಲಬುರಗಿಯನ್ನು ವಿಶೇಷ ಹೂಡಿಕೆ ವಲಯವನ್ನಾಗಿ ಘೋಷಿಸಿ ಕಲ್ಯಾಣ ಕರ್ನಾಟಕ ಭಾಗದಲ್ಲಿ ಕೈಗಾರಿಕೆ ಕ್ರಾಂತಿ ಮಾಡಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಜಗದೀಶ ಶೆಟ್ಟರ್ ಹೇಳಿದರು.

ಸೋಮವಾರ ಇಲ್ಲಿನ ಹೆಚ್.ಕೆ.ಸಿ.ಸಿ.ಐ. ಸಭಾಂಗಣದಲ್ಲಿ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಕರ್ನಾಟಕ ಕೈಗಾರಿಕೆ ಪ್ರದೇಶ ಅಭಿವೃದ್ಧಿ ಮಂಡಳಿ ಹಾಗೂ ಹೆಚ್.ಕೆ.ಸಿ.ಸಿ.ಐ ಇವರ ಸಂಯುಕ್ತಾಶ್ರಯದಲ್ಲಿ “ವಾಣಿಜ್ಯೋದ್ಯಮಿಗಳೊಂದಿಗೆ ಸಚಿವರ ಸಂವಾದ” ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಗುಜರಾತ್ ಮಾದರಿಯಲ್ಲಿ ವಿಶೇಷ ಹೂಡಿಕೆ ವಲಯ ಸ್ಥಾಪನೆಗೆ ಮುಂದಿನ ಅಧಿವೇಶನದಲ್ಲಿ ಇದರ ಬಗ್ಗೆ ಪ್ರಸ್ತಾಪಿಸಿ ಅನುಮೋದನೆ ಪಡೆಯಲಾಗುವುದು. ಇಂತಹ ವಲಯಗಳಿಗೆ ವಿಶೇಷ ಅನುದಾನ ಸಹ ಬರಲಿದೆ ಎಂದರು.

ರಾಜ್ಯದಲ್ಲಿ ಉದ್ಯಮ ಸ್ನೇಹಿಯಾಗಿ ಹೊಸ ಕೈಗಾರಿಕಾ ನೀತಿ ಈಗಾಗಲೆ ಪ್ರಕಟಿಸಿದ್ದು, ಅದರಲ್ಲಿ ಬೆಂಗಳೂರು ಕೇಂದ್ರೀಕೃತ ಹೊರತುಪಡಿಸಿ ಇತರೆ ಎರಡನೇ ಮತ್ತು ಮೂರನೇ ಹಂತದ ನಗರಗಳಲ್ಲಿ ಕೈಗಾರಿಕೆ ಸ್ಥಾಪನೆಗೆ ಮತ್ತು ಹೂಡಿಕೆಗೆ ವಿಶೇಷ ಒತ್ತು ನೀಡಲಾಗಿದೆ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
149

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು