News Karnataka Kannada
Saturday, April 20 2024
Cricket
ಕರ್ನಾಟಕ

ಕಲಬುರ್ಗಿ: ಕೊರೊನಾ ಸೋಂಕಿನಿಂದ ಮತ್ತೆ ಮೂವರು ನಿಧನ

Photo Credit :

ಕಲಬುರ್ಗಿ: ಕೊರೊನಾ ಸೋಂಕಿನಿಂದ ಮತ್ತೆ ಮೂವರು ನಿಧನ

ಕಲಬುರಗಿ:   ಕೊರೋನಾ ಸೋಂಕಿನಿಂದ ಕಲಬುರಗಿ ನಗರದ ಮೂವರು ನಿಧನವಾಗಿರುವ ಬಗ್ಗೆ ಬುಧವಾರ ವರದಿಯಾಗಿದ್ದು, ಇದರಿಂದ ಕೊರೋನಾ ಸೋಂಕಿಗೆ ಜಿಲ್ಲೆಯಲ್ಲಿ ಮೃತರಾದವರ ಸಂಖ್ಯೆ 175ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾಧಿಕಾರಿ ಶರತ್ ಬಿ. ತಿಳಿಸಿದರು.
 
ತೀವ್ರ ಉಸಿರಾಟ ತೊಂದರೆ ಜೊತೆಗೆ  ಅಧಿಕ ರಕ್ತದೊತ್ತಡ ಹಾಗೂ ನ್ಯುಮೋನಿಯಾ ಸಮಸ್ಯೆಯಿಂದ ಬಳಲುತ್ತಿದ್ದ ಕಲಬುರಗಿಯ ರಾಮನಗರದ 73 ವರ್ಷದ ವೃದ್ಧ (P-213059) ಆ.14 ರಂದು ಆಸ್ಪತ್ರೆಗೆ ದಾಖಲಾಗಿ ಆ.18 ರಂದು ನಿಧನರಾಗಿದ್ದಾರೆ.
 
ತೀವ್ರ ಉಸಿರಾಟ ತೊಂದರೆ ಜೊತೆಗೆ ಮಧುಮೇಹ ಹಾಗೂ ನ್ಯುಮೋನಿಯಾ ಸಮಸ್ಯೆಯಿಂದ ಬಳಲುತ್ತಿದ್ದ ಕಲಬುರಗಿ ತಾಲೂಕಿನ ಶರಣಸಿರಸಗಿಯ 65 ವರ್ಷದ ವೃದ್ಧ (P-223866) ಆ.14 ರಂದು ಆಸ್ಪತ್ರೆಗೆ ದಾಖಲಾಗಿ ಆ.17 ರಂದು ನಿಧನ ಹೊಂದಿದ್ದಾರೆ.
 
ತೀವ್ರ ಉಸಿರಾಟ ತೊಂದರೆ ಜೊತೆಗೆ ಮಧುಮೇಹ ಹಾಗೂ ನ್ಯುಮೋನಿಯಾ ಸಮಸ್ಯೆಯಿಂದ ಬಳಲುತ್ತಿದ್ದ ಕಲಬುರಗಿ ನಗರದ ಆಳಂದ‌ ಚೆಕ್ ಪೋಸ್ಟ್ ಹತ್ತಿರದ 55 ವರ್ಷದ ಪುರುಷ (P-230000) ಆ.15 ರಂದು ಆಸ್ಪತ್ರೆಗೆ ದಾಖಲಾಗಿ ಆ.17 ರಂದು ನಿಧನ ಹೊಂದಿದ್ದಾರೆ ಎಂದು ಡಿ.ಸಿ. ಶರತ್ ಬಿ. ತಿಳಿಸಿದರು.
 
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
149

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು