News Karnataka Kannada
Wednesday, April 17 2024
Cricket
ಕರ್ನಾಟಕ

ಕಾಂಗ್ರೆಸ್‍ನ 15 ಶಾಸಕರು ನನ್ನ ಸಂಪರ್ಕದಲ್ಲಿದ್ದಾರೆ: ಕಟೀಲ್

Photo Credit :

ಕಾಂಗ್ರೆಸ್‍ನ 15 ಶಾಸಕರು ನನ್ನ ಸಂಪರ್ಕದಲ್ಲಿದ್ದಾರೆ: ಕಟೀಲ್

ರಾಮನಗರ: ಕಾಂಗ್ರೆಸ್ ಪಕ್ಷದ 15 ಶಾಸಕರು ನನ್ನ ಸಂಪರ್ಕದಲ್ಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟಿಲ್ ಬಾಂಬ್ ಸಿಡಿಸಿದ್ದಾರೆ.

ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ ಅವರು ಮತ್ತೆ ಕಾಂಗ್ರೆಸ್ ಸೇರುವ ವಿಚಾರದಲ್ಲಿ ತಮ್ಮನ್ನು ಭೇಟಿಯಾಗಿದ್ದರೆಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನೀಡಿರುವ ಹೇಳಿಕೆಯ ಬಗ್ಗೆ ಸುದ್ದಿಗಾರರು ಗಮನ ಸೆಳೆದಾಗ ಈ ಬಗ್ಗೆ ಹೆಚ್ಚು ಉಲ್ಲೇಖ ಮಾಡುವುದಿಲ್ಲ ಎಂದರು.

ಮಾಜಿ ಸಿಎಂ ಹಾಗೂ ಚನ್ನಪಟ್ಟಣ ಶಾಸಕ ಎಚ್.ಡಿ.ಕುಮಾರಸ್ವಾಮಿ ಅವರು ರಾಜ್ಯ ಬಿಜೆಪಿ ಸರ್ಕಾರಕ್ಕೆ ಬೆಂಬಲ ಕೊಡುತ್ತಿದ್ದಾರೆ ಎಂದು ಎಂ.ಎಲ್.ಸಿ ಸಿ.ಪಿ.ಯೋಗೇಶ್ವರ ನೀಡಿರುವ ಹೇಳಿಕೆಗೆ ಅವರು ಪ್ರತಿಕ್ರಿಯಿಸಲು ನಿರಾಕರಿಸಿದರು.

ಇತ್ತೀಚೆಗಷ್ಟೆ ರಾಮನಗರದ ವಿವಿಧ ಮಂಡಲಗಳಿಗೆ ನೇಮಕವಾಗಿರುವ ಪದಾಧಿಕಾರಿಗಳ ವಿಚಾರದಲ್ಲಿ ಭುಗಿಲೆದ್ದಿರುವ ಅಸಮಾಧಾನ ಬಗ್ಗೆ ಸುದ್ದಿಗಾರರು ಗಮನ ಸೆಳೆದಾಗ ಪ್ರತಿಕ್ರಿಯಿಸಿದ ರಾಜ್ಯಾಧ್ಯಕ್ಷರು ಜಿಲ್ಲಾ ಬಿಜೆಪಿಯಲ್ಲಿ ಯಾವ ಅಸಮಾಧಾನವೂ ಇಲ್ಲ. ವ್ಯವಸ್ಥೆಯೊಳಗೆ ಕೆಲವು ವ್ಯತ್ಯಾಸವಿದೆ ಎಂಬುದಾಗಿ ಕೆಲವರು ತಮ್ಮ ಬಳಿ ಹೇಳಿದ್ದಾರೆ. ಇನ್ನು ಕೆಲವೇ ದಿನಗಳಲ್ಲಿ ಅದನ್ನು ಪರಿಹರಿಸಿಕೊಡುತ್ತೇನೆ ಎಂದರು.

ಬಿಜೆಪಿ ಕಾರ್ಯಕರ್ತರು ಬಹಿರಂಗವಾಗಿಯೇ ಅಸಮಧಾನ ತೋಡಿಕೊಂಡಿರುವ ಬಗ್ಗೆ ಸುದ್ದಿಗಾರರು ಮತ್ತೆ ಪ್ರಶ್ನಿಸಿದಾಗ ಬಿಜೆಪಿ ಪಕ್ಷದಲ್ಲಿ ಅನು ಶಾಸನವಿದೆ. ಅದನ್ನು ಎಲ್ಲರು ಪಾಲಿಸಬೇಕಾಗಿದೆ. ಪಕ್ಷದ ಬಗ್ಗೆಯಾರಲ್ಲು ಅಸಮಾಧಾನವಿಲ್ಲ. ಭಾವನೆಗಳಲ್ಲಿ ವ್ಯತ್ಯಾಸವಿರಬಹುದು ಎಂದರು. ವ್ಯವಸ್ಥೆಯಲ್ಲಿನ ವ್ಯತ್ಯಾಸಗಳ ಬಗ್ಗೆ ತಮ್ಮ ಬಳಿ ಹೇಳಿಕೊಂಡಿದ್ದಾರೆ. ಯಾರೂ, ಯಾರ ಬಗ್ಗೆಯೂ ಅಸಮಾಧಾನವನ್ನು ತಮ್ಮ ಬಳಿ ಹೇಳಿಕೊಂಡಿಲ್ಲ ಎಂದರು.

ಇದಕ್ಕೂ ಮುನ್ನ ಜಿಲ್ಲೆಯ ವಿವಿಧ ಮಂಡಲಗಳಿಗೆ ನೇಮಕವಾಗಿರುವ 51 ಮಂದಿ ನೂತನ ಪದಾಧಿಕಾರಿಗಳ ಸಭೆ ನಡೆಯಿತು. ಸಭೆಯನ್ನುದ್ದೇಶಿಸಿ ಮಾತನಾಡಿದ ಕಟೀಲ್ ಪಕ್ಷ ಸಂಘಟನೆಗೆ ಹೆಚ್ಚು ಒತ್ತು ಕೊಡುವಂತೆ ಸಲಹೆ, ಸೂಚನೆ ಕೊಟ್ಟಿದ್ದಾರೆ. ಜಿಲ್ಲೆಯಲ್ಲಿ ಪಕ್ಷ ಬಲವರ್ಧನೆಗೆ ಶ್ರಮಿಸಿ ಎಂದು ಕರೆ ನೀಡಿದರು.

ಸಭೆಯಲ್ಲಿ ರಾಜ್ಯ ಬಿಜೆಪಿ ವಕ್ತಾರ ಅಶ್ವಥನಾರಾಯಣ ಗೌಡ, ರಾಜ್ಯ ಸಂಘಟನಾ ಕಾರ್ಯದರ್ಶಿ ಅರುಣ್‍ಜಿ, ಜಿಲ್ಲಾ ಬಿಜೆಪಿ ಅಧ್ಯಕ್ಷ ಹುಲುವಾಡಿ ದೇವರಾಜ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರುದ್ರದೇವರು, ಮಾಧ್ಯಮ ಪ್ರಮುಖ್ ಚಂದ್ರಶೇಖರ ರೆಡ್ಡಿ, ನಗರ ಬಿಜೆಪಿ ಘಟಕದ ಅಧ್ಯಕ್ಷ ಪಿ.ಶಿವಾನಂದ ಮುಂತಾದವರು ಭಾಗವಹಿಸಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು