News Karnataka Kannada
Saturday, April 20 2024
Cricket
ಕರ್ನಾಟಕ

ಕಾರ್ಮಿಕ ವಿರೋಧಿ ಕಾಯ್ದೆ ಹಿಂಪಡೆಯಲು ಐಎನ್‍ಟಿಯುಸಿ ಒತ್ತಾಯ

Photo Credit :

ಕಾರ್ಮಿಕ ವಿರೋಧಿ ಕಾಯ್ದೆ ಹಿಂಪಡೆಯಲು ಐಎನ್‍ಟಿಯುಸಿ ಒತ್ತಾಯ

ಮಡಿಕೇರಿ: ಕಾರ್ಮಿಕರ ಹಕ್ಕುಗಳನ್ನು ಕಸಿದುಕೊಳ್ಳುವ ಪ್ರಯತ್ನವಾಗಿ ಕೇಂದ್ರ ಸರ್ಕಾರ ನೂತನ ಕಾರ್ಮಿಕ ಮಸೂದೆಗಳನ್ನು ಜಾರಿಗೆ ತಂದಿದೆ ಎಂದು ಆರೋಪಿಸಿರುವ ಐಎನ್‍ಟಿಯುಸಿ ಸಂಘಟನೆಯ ರಾಜ್ಯ ಉಪಾಧ್ಯಕ್ಷ ನಾಪಂಡ ಮುತ್ತಪ್ಪ ಅವರು ಕಾರ್ಮಿಕ ಸಂಘಟನೆಗಳನ್ನು ಒಗ್ಗೂಡಿಸಿ ಹೋರಾಟ ನಡೆಸುವ ಎಚ್ಚರಿಕೆ ನೀಡಿದ್ದಾರೆ.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಹಲವು ದಶಕಗಳ ಕಾರ್ಮಿಕ ಸಮುದಾಯದ ಹೋರಾಟದ ಫಲವಾಗಿ ಜಾರಿಯಲ್ಲಿದ್ದ ಕಾರ್ಮಿಕ ಹಕ್ಕುಗಳ ಪರವಾದ ಮಸೂದೆಗಳಿಗೆ ಕೇಂದ್ರ ಸರ್ಕಾರ ತಿದ್ದುಪಡಿ ತರುವ ಮೂಲಕ ಮಾಲೀಕರುಗಳಿಗೆ ಅನುಕೂಲ ಕಲ್ಪಿಸಿಕೊಟ್ಟಿದೆ ಎಂದು ಆರೋಪಿಸಿದರು.

ಕಾರ್ಮಿಕರಿಗೆ ಸಿಗಬೇಕಾದ ಯಾವುದೇ ಸೌಲಭ್ಯಗಳನ್ನು ನೀಡದೆ ಏಕಾಏಕಿ ಕಾರ್ಖಾನೆಗಳನ್ನು ಮುಚ್ಚಲು ದಾರಿ ಸುಗಮ ಮಾಡಿಕೊಡಲಾಗಿದೆ. ದಿನಕ್ಕೆ 13 ಗಂಟೆ ದುಡಿಸಿಕೊಳ್ಳಲು ಮತ್ತು ಹೆಚ್ಚುವರಿ ಕೆಲಸದ ವೇತನ ನೀಡದೆ ಇರಲು ಪರೋಕ್ಷವಾಗಿ ಬೆಂಬಲ ಸೂಚಿಸಲಾಗಿದೆ. 7-8 ಹೆಸರುಗಳಲ್ಲಿ ಸಂಸ್ಥೆಗಳನ್ನು ನೋಂದಣಿ ಮಾಡಿಕೊಂಡು ಯಾವುದೇ ಸೌಲಭ್ಯಗಳನ್ನು ನೀಡದೆ 200- 300 ಮಂದಿ ಕಾರ್ಮಿಕರನ್ನು ದುಡಿಸಿಕೊಳ್ಳಬಹುದಾದ ಮಾಲೀಕರುಗಳಿಗೆ ತೆರಿಗೆ ವಂಚನೆಯಂತಹ ಹಗಲು ದರೋಡೆಗೆ ಸರ್ಕಾರವೇ ಅವಕಾಶ ಕಲ್ಪಿಸಿದೆ. ಕನಿಷ್ಠ ವೇತನ 14 ಸಾವಿರ ರೂ. ಗಳನ್ನು ಪಾವತಿಸುವಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗದ ಸರ್ಕಾರ ಇರುವ ಸೌಲಭ್ಯಗಳನ್ನೇ ಕಸಿದುಕೊಳ್ಳುವ ಮಸೂದೆಗಳನ್ನು ಜಾರಿಗೆ ತರುವ ಮೂಲಕ ಕಾರ್ಮಿಕ ಸಮುದಾಯವನ್ನು ಜೀತ ಪದ್ಧತಿಗೆ ದೂಡಿದೆ. ಈ ರೀತಿಯ ಕಾನೂನು ಬ್ರಿಟಿಷರ ಕಾಲದಲ್ಲೂ ಜಾರಿಯಾಗಿರಲಿಲ್ಲ ಎಂದು ಮುತ್ತಪ್ಪ ಟೀಕಿಸಿದರು.

ತಕ್ಷಣ ಕಾಯ್ದೆಯನ್ನು ರದ್ದು ಪಡಿಸಿ ಕಾರ್ಮಿಕರ ಪರವಾದ ನೀತಿಗಳನ್ನು ಜಾರಿಗೆ ತಾರದಿದ್ದಲ್ಲಿ ಹೋರಾಟವನ್ನು ತೀವ್ರಗೊಳಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಕಾರ್ಮಿಕ ಘಟಕದ ರಾಜ್ಯ ಕಾರ್ಯದರ್ಶಿ ಅಜ್ಜಳ್ಳಿ ರವಿ, ಐಎನ್‍ಟಿಯುಸಿ ಜಿಲ್ಲಾಧ್ಯಕ್ಷ ಗೋವಿಂದರಾಜ್ ದಾಸ್ ಹಾಗೂ ಎನ್‍ಎಸ್‍ಯುಐ ಜಿಲ್ಲಾಧ್ಯಕ್ಷ ತ್ರಿನೇಶ್ ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು