News Karnataka Kannada
Saturday, April 13 2024
Cricket
ಕರ್ನಾಟಕ

ಕಾಸಗೋಡು: ಅ.9ರ ತನಕ 144 ಸೆಕ್ಷನ್‌ ಜಾರಿ ಮಾಡಿದ ಜಿಲ್ಲಾಧಿಕಾರಿ

Photo Credit :

ಕಾಸಗೋಡು: ಅ.9ರ ತನಕ 144 ಸೆಕ್ಷನ್‌ ಜಾರಿ ಮಾಡಿದ ಜಿಲ್ಲಾಧಿಕಾರಿ

ಕಾಸರಗೋಡು: ಜಿಲ್ಲೆಯಲ್ಲಿ ಕೊರೊನಾ ಸೋಂಕು ದಿನಂಪ್ರತಿ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಇಂದಿನಿಂದ ಅಕ್ಟೋಬರ್ 9 ರ ತನಕ 1973 ರ ಕ್ರಿಮಿನಲ್ ಕಾಯ್ದೆಯಂತೆ 144 ನಿಷೇಧಾಜ್ಞೆಯನ್ನು ಜಾರಿಗೊಳಿಸಿ ಜಿಲ್ಲಾಧಿಕಾರಿ ಡಾ.ಡಿ . ಸಜಿತ್ ಬಾಬು ಆದೇಶ ನೀಡಿದ್ದಾರೆ.

ನಿಷೇಧಾಜ್ಞೆ ಅಕ್ಟೋಬರ್ 2 ರ ರಾತ್ರಿ 12 ಗಂಟೆಯಿಂದ ಅಕ್ಟೋಬರ್ 9 ರ ರಾತ್ರಿ 12 ಗಂಟೆ ತನಕ ಜಾರಿಯಲ್ಲಿರಲಿದೆ.

ಕೇರಳದ ರಾಜ್ಯದಾದ್ಯಂತ ಅಕ್ಟೋಬರ್ 31 ರ ತನಕ ನಿಷೇಧಾಜ್ಞೆ ಜಾರಿಗೆ ತರಲಾಗಿತ್ತು . ಆದರೆ ಕಾಸರಗೋಡು ಜಿಲ್ಲೆಯಲ್ಲಿ ಒಂದು ವಾರಕ್ಕೆ ಸೀಮಿತ ಗೊಳಿಸಲಾಗಿದೆ. ಸೋಂಕು ನಿಯಂತ್ರಣಕ್ಕೆ ಬಾರದಿದ್ದಲ್ಲಿ ನಿಷೇಧಾಜ್ಞೆಯನ್ನು ವಿಸ್ತರಿಸಲಾಗುವುದು ಎಂದು ಅಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ.

ವಿವಾಹ ಸಮಾರಂಭಗಳಿಗೆ 50 ಮಂದಿ, ಮರಣ ಸಂಬಂಧಿ ಕಾರ್ಯಕ್ರಮಗಳಿಗೆ 20 ಮಂದಿಗೆ ಮಾತ್ರ ಭಾಗವಹಿಸಲು ಅವಕಾಶ ನೀಡಲಾಗಿದೆ.

ಧಾರ್ಮಿಕ ಪ್ರಾರ್ಥನೆ ಕಾರ್ಯಕ್ರಮಗಳು, ರಾಜಕೀಯ ಪಕ್ಷಗಳ ಸಭೆಗಳು, ಸಾಂಸ್ಕೃತಿಕ, ಸಾಮಾಜಿಕ, ಸಾರ್ವಜನಿಕ ಕಾರ್ಯಕ್ರಮಗಳಿಗೆ 20 ಮಂದಿಗೆ ಮಾತ್ರ ಭಾಗವಹಿಸಲು ಅನುಮತಿ ನೀಡಲಾಗಿದೆ.

ಸಾರ್ವಜನಿಕ ಸ್ಥಳ, ಬಸ್ಸು ನಿಲ್ದಾಣ, ಸಾರ್ವಜನಿಕ ಸಂಚಾರ, ಕಚೇರಿಗಳು, ಉದ್ಯೋಗ ಕೇಂದ್ರ ಹಾಗೂ ವ್ಯಾಪಾರ ಮಳಿಗೆ, ಆರೋಗ್ಯ ಕ್ಲಬ್, ಕ್ರೀಡಾ ತರಬೇತಿ, ಪರೀಕ್ಷಾ ಕೇಂದ್ರಗಳಲ್ಲಿ ಕೋವಿಡ್ ಮಾನದಂಡಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಜನಜಂಗುಳಿ ಉಂಟಾಗುವ ಮಾರುಕಟ್ಟೆ, ಬಸ್ಸು ತಂಗುದಾಣ ಮೊದಲಾದೆಡೆ ಗಳಲ್ಲಿ ದಿನಕ್ಕೆ ಕನಿಷ್ಠ ಒಂದು ಬಾರಿ ರೋಗಾಣು ಮುಕ್ತ ಔಷ ಧಿ ಸಿಂಪಡಿಸಬೇಕು ಎಂದು ಆದೇಶ ನೀಡಲಾಗಿದೆ .

ಈ ಬಗ್ಗೆ ಸ್ಥಳೀಯ ಸಂಸ್ಥೆ ಕಾರ್ಯದರ್ಶಿಗಳಿಗೆ ನಿರ್ದೇಶನ ನೀಡಲಾಗಿದೆ. ಜನರು ಕೋವಿಡ್ ಮಾನದಂಡಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಕೋವಿಡ್ ಮಾನದಂಡಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ಗೊಳಿಸುವ ನಿಟ್ಟಿನಲ್ಲಿ ಪೊಲೀಸರು ನಿಗಾ ಇರಿಸಲಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
176
Stephen K

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು