News Karnataka Kannada
Wednesday, April 17 2024
Cricket
ಕರ್ನಾಟಕ

ಕಾಸರಗೋಡು: ಭಾರೀ ಮಳೆಯಿಂದ ತಗ್ಗು ಪ್ರದೇಶದಲ್ಲಿ ಜಲಾವೃತ

Photo Credit :

ಕಾಸರಗೋಡು: ಭಾರೀ ಮಳೆಯಿಂದ ತಗ್ಗು ಪ್ರದೇಶದಲ್ಲಿ ಜಲಾವೃತ

ಕಾಸರಗೋಡು: ಜಿಲ್ಲೆಯಲ್ಲಿ ಸತತವಾಗಿ ಸುರಿಯುತ್ತಿರುವ ಗಾಳಿ ಮಳೆಯಿಂದ ಜನತೆ ತತ್ತರಿಸಿದ್ದಾರೆ. ಮಳೆಯ ಅಬ್ಬರದಿಂದ ನದಿಗಳು ಉಕ್ಕಿ ಹರಿದ ಪರಿಣಾ ಮ ತಗ್ಗು ಪ್ರದೇಶ ದ ನೆರೆ ಉಂಟಾಗಿದ್ದು , ಹಲವಾರು ಕುಟುಂಬಗಳನ್ನು ಸುರಕ್ಷಿತ ಸ್ಥಳಗಳಿ ಗೆ ಸ್ಥಳಾಂತರಿಸಲಾಗಿದೆ.

ಶುಕ್ರವಾರ ರಾತ್ರಿಯಿಂದ ನಿರಂತರ ಮಳೆಸುರಿಯುತ್ತಿದೆ . ಲಕ್ಷಾಂತರ ರೂ . ಗಳ ಕೃಷಿ ಹಾನಿ ಉಂಟಾಗಿದೆ. ಮಧುವಾಹಿನಿ ಹೊಳೆಯು ಉಕ್ಕಿ ಹರಿಯುತ್ತಿರುವುದರಿಂದ ಪ್ರಸಿದ್ಧ ಮಧೂರು ಶ್ರೀ ಮದನಂತೇಶ್ವರ ಸಿದ್ಧಿವಿನಾಯಕ ಕ್ಷೇತ್ರ ಆವರಣದಲ್ಲಿ ನೀರು ತುಂಬಿಕೊಂಡಿದೆ.

ಮಧೂರು ಕ್ಷೇತ್ರ ಪರಿಸರವೂ ಜಲಾವೃತಗೊಂಡಿದೆ. ಕ್ಷೇತ್ರ ಪರಿಸರದ ಬಯಲಿನಲ್ಲಿ ನೀರು ತುಂಬಿಕೊಂಡಿದ್ದು, ರಸ್ತೆಯಲ್ಲೂ ನೀರು ಹರಿಯುತ್ತಿದೆ. ಅದೇ ಸಂದರ್ಭದಲ್ಲಿ ಸಮೀಪದ ಮನೆಗಳಿಗೆ ನೀರು ನುಗ್ಗಿದೆ.

ಮಧೂರು ಪಟ್ಲ ದಲ್ಲಿ ನೆರೆ ಹಿನ್ನಲೆಯಲ್ಲಿ ಮೂರು ಕುಟುಂಬಗಳನ್ನು ಸಂಬಂಧಿಕರ ಮನೆಗಳಿಗೆ ಸ್ಥಳಾಂತರಿಸಲಾಗಿದೆ.

ಬಂಗ್ರ ಮಂಜೇಶ್ವರ ಹೊಳೆ ಉಕ್ಕಿ ಹರಿದ ಪರಿಣಾಮ ಸುಮಾರು 75 ಎಕೆರೆಯಷ್ಟು ಕೃಷಿ ಹಾನಿ ಉಂಟಾಗಿದೆ . ಹಲವು ತೆಂಗು , ಕಂಗು , ಬಾಳೆ ಗಳು ನೆಲಕಚ್ಚಿವೆ.ರಾಷ್ಟ್ರೀಯ ಹೆದ್ದಾರಿ ಮಂಜೇಶ್ವರದಲ್ಲಿ ಮರಬಿದ್ದ ಪರಿಣಾಮ ಗಂಟೆಗಳ ಕಾಲ ಸಂಚಾರ ಅಸ್ತವ್ಯಸ್ಥಗೊಂಡಿತ್ತು. ಬಳಾಲ್ ಪ್ರದೇಶದ 12 ಕುಟುಂಬಗಳನ್ನು,  ಮಾಲೋಂ ಪ್ರದೇಶದ ಒಂದು ಕುಟುಂಬವನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ .

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
176
Stephen K

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು