News Karnataka Kannada
Sunday, April 21 2024
Cricket
ಕರ್ನಾಟಕ

ಕುಮಾರಸ್ವಾಮಿ ಊಸರವಳ್ಳಿ: ಸಚಿವ ಬಿ ಸಿ ಪಾಟೀಲ್‌ ತಿರುಗೇಟು

Photo Credit :

ಕುಮಾರಸ್ವಾಮಿ ಊಸರವಳ್ಳಿ:  ಸಚಿವ ಬಿ ಸಿ ಪಾಟೀಲ್‌ ತಿರುಗೇಟು

ಮಂಡ್ಯ: ಡ್ರಗ್ಸ್ ಮಾಫಿಯಾ ಹಣದಿಂದಲೇ ಮೈತ್ರಿ ಸರ್ಕಾರ ಪತನವಾಯಿತೆಂದು ಆರೋಪಿಸಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರೊಬ್ಬ ಊಸರವಳ್ಳಿ ಇದ್ದಂತೆ ಎಂದು ರಾಜ್ಯ ಕೃಷಿ ಸಚಿವ ಬಿ.ಸಿ.ಪಾಟೀಲ್ ತಿರುಗೇಟು ನೀಡಿದರು.

ಮೈಸೂರಿನಲ್ಲಿ ಪ್ರಗತಿ ಪರಿಶೀಲನಾ ಸಭೆಗೆ ತೆರಳುವ ಮುನ್ನ ಮದ್ದೂರಿನಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ವಿಪಕ್ಷಗಳ ಊಹಾಪೋಹದ ಆರೋಪಗಳಿಗೆಲ್ಲ ಉತ್ತರಿಸಬೇಕಾಗಿಲ್ಲ. ಡ್ರಗ್ಸ್ ದಂಧೆಯಲ್ಲಿ ಪಾಲ್ಗೊಂಡವರು ಯಾರೇ ಇರಲೀ ಸರ್ಕಾರ ಅವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮಕೈಗೊಳ್ಳಲಿದೆ ಎಂದು ತಿಳಿಸಿದರು.

ಡ್ರಗ್ಸ್‌ ಮಾಫಿಯಾ ಇತ್ತು ಎಂಬ ವಿಷಯ ಕಿವಿಗೆ ಬಿದ್ದಾಗಲೇ ಕುಮಾರಸ್ವಾಮಿ ಮಟ್ಟ ಹಾಕಬಹುದಿತ್ತು. ಆದರೆ ಒಂದು ವರ್ಷ ಸುಮ್ಮನಿದ್ದು ಡ್ರಗ್ಸ್ ವಿಚಾರ ಸುದ್ದಿಯಲ್ಲಿರುವ ಈ ಸಂದರ್ಭದಲ್ಲಿ ಅವರು ಆರೋಪಿಸುತ್ತಿರುವುದೇಕೆ? ಮೈತ್ರಿ ಸರ್ಕಾರದ ನಶೆಯಿಂದ ಹೊರಬರಲು ಕುಮಾರಸ್ವಾಮಿ ಅವರಿಗೆ ಒಂದು ವರ್ಷ ಬೇಕಾಯಿತೇ? ಮೈತ್ರಿ ಸರ್ಕಾರ ಅಸ್ಥಿರಗೊಂಡಾಗ ಏಕೆ ಕುಮಾರಸ್ವಾಮಿ ಹೇಳಲಿಲ್ಲ. ಕುಮಾರಸ್ವಾಮಿ ಆಗಾಗ ಊಸರವಳ್ಳಿಯಂತೆ ಬಣ್ಣ ಬದಲಾಯಿಸುತ್ತಿರುತ್ತಾರೆ. ಒಂದು ಸಮಯದಲ್ಲಿ ಮುಖ್ಯಮಂತ್ರಿಯಾಗಿದ್ದವರು ಜವಾಬ್ದಾರಿಯಿಂದ ಮಾತನಾಡಬೇಕಾಗುತ್ತದೆ ಎಂದು ಹೇಳಿದರು.

ರಾಜ್ಯದಲ್ಲಿ ರಸಗೊಬ್ಬರವಾಗಲೀ ಯೂರಿಯಾದ ಕೊರತೆಯಾಗಲಿ ಇಲ್ಲ. ಕೆಲವೆಡೆ ಕೃತಕ ಅಭಾವ ಸೃಷ್ಟಿಸಲಾಗುತ್ತಿದೆ. ಅಂತವರ ವಿರುದ್ಧ ಕ್ರಮವನ್ನೂ ಜರುಗಿಸಿ ಪರವಾನಿಗೆ ರದ್ದು ಮಾಡಲಾಗುತ್ತಿದೆ. ರೈತರಿಗಾಗಲೀ ಕೃಷಿ ಚಟುವಟಿಕೆಗಳಿಗಾಗಲೀ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಲಾಗುತ್ತಿದೆ. ಕಳೆದ ಬಾರಿಗಿಂತಲೂ ಈ ಬಾರಿ ಹೆಚ್ಚು ಬಿತ್ತನೆಯಾಗಿದೆ. ಮಂಡ್ಯ ಸೇರಿದಂತೆ ಸುತ್ತಮುತ್ತಲ ಎಲ್ಲ ಜಿಲ್ಲೆಗಳ ಕೃಷಿ ಅಧಿಕಾರಿಗಳ ಜೊತೆಗೂ ಪ್ರಗತಿಪರಿಶೀಲನಾ ಸಭೆ ನಡೆಸಿ ಮಾಹಿತಿ ಪಡೆಯಲಾಗುವುದು ಎಂದು ಬಿ.ಸಿ.ಪಾಟೀಲ್ ಸ್ಪಷ್ಟಪಡಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು