News Karnataka Kannada
Tuesday, April 23 2024
Cricket
ಕರ್ನಾಟಕ

ಕೇರಳದಲ್ಲಿ ಕೊರೊನಾ ಹೆಚ್ಚಳ: ಅ.31ರ ವರೆಗೆ 144ಸೆಕ್ಷನ್ ಜಾರಿ

Photo Credit :

ಕೇರಳದಲ್ಲಿ ಕೊರೊನಾ ಹೆಚ್ಚಳ: ಅ.31ರ ವರೆಗೆ 144ಸೆಕ್ಷನ್ ಜಾರಿ

ಕಾಸರಗೋಡು : ಕಳೆದ ಒಂದು ವಾರದಿಂದ ಕೊರೋನ ಸೋಂಕಿತರ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿರುವ ಹಿನ್ನಲೆಯಲ್ಲಿ ಕೇರಳದಲ್ಲಿ ನಾಳೆ ( ಅ.3) ಯಿಂದ ಅಕ್ಟೋಬರ್ 31 ರ ತನಕ ಕೋವಿಡ್ ನಿಯಂತ್ರಣ ಹಿನ್ನಲೆಯಲ್ಲಿ ಸೆಕ್ಷನ್ 144 ರಂತೆ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ ನೀಡಲಾಗಿದೆ.

ಇದರಂತೆ ಐದಕ್ಕಿಂತ ಅಧಿಕ ಮಂದಿ ಗುಂಪು ಸೇರುವುದನ್ನು ನಿಷೇಧಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಅಕ್ಟೋಬರ್ 3 ರ ಬೆಳಿಗ್ಗೆ 9 ರಿಂದ 31 ರ ತನಕ ನಿಷೇಧಾಜ್ಞೆ ಜಾರಿಯಲ್ಲಿರಲಿದೆ. ಆಯಾ ಜಿಲ್ಲೆಗಳ ಸ್ಥಿತಿ ಗತಿ ಮನಗಂಡು ನಿಯಂತ್ರಣಗಳಲ್ಲಿ ಸಡಿಲಿಕೆ ಬೇಕೆ ಎಂಬ ಬಗ್ಗೆ ತೀರ್ಮಾನ ತೆಗೆದುಕೊಳ್ಳಲು ಜಿಲ್ಲಾಧಿಕಾರಿಗಳಿಗೆ ಸಲಹೆ ನೀಡಲಾಗಿದೆ.

ವಿವಾಹ , ಮರಣ ನಂತರದ ಕಾರ್ಯಕ್ರಮ ಮೊದಲಾದವುಗಳಿಗೆ ವಿನಾಯಿತಿ ನೀಡಲಾಗಿದೆ. ಆದರೆ ಕೋವಿಡ್ ಮಾನದಂಡದಂತೆ ಈ ಕಾರ್ಯಕ್ರಮ ನಡೆಸಲು ಅನುಮತಿ ನೀಡಲಾಗಿದೆ.ಜನರು ಸೇರುವ ಎಲ್ಲಾ ಕಾರ್ಯಕ್ರಮಗಳಿಗೆ ನಿಷೇಧ ಹೇರಲಾಗಿದೆ.

ಎರಡು ದಿನಗಳ ಹಿಂದೆ ನಡೆದ ಸರ್ವ ಪಕ್ಷ ಸಭೆಯಲ್ಲಿ ಪ್ರತಿಭಟನೆ ಸೇರಿದಂತೆ ಜನರು ಗುಂಪುಗೂಡುವ ಎಲ್ಲಾ ಕಾರ್ಯಕ್ರಮಗಳಿಗೂ ನಿರ್ಬಂಧ ಹೇರಲು ತೀರ್ಮಾನಿಸಲಾಗಿತ್ತು . ಇದರಂತೆ ಸರಕಾರ ಆದೇಶ ಹೊರಡಿಸಿದೆ.

ಕೇರಳದಲ್ಲಿ ಸೋಂಕಿತರ ಸಂಖ್ಯೆ ದಿನಂಪ್ರತಿ ಎಂಟು ಸಾವಿರವನ್ನು ದಾಟಿದ್ದು , ಕಾಸರಗೋಡು ಜಿಲ್ಲೆಯಲ್ಲೂ 500 ರ ಗಡಿಗೆ ತಲಪಿದೆ. ಕಳೆದ 20 ದಿನಗಳಿಂದ ಅನಿಯಂತ್ರಿತವಾಗಿ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವುದರಿಂದ ಲಾಕ್ ಡೌನ್ ಸಡಿಲಿಕೆಯನ್ನು ಮತ್ತೆ ಬಿಗಿ ಗೊಳಿಸಲು ಕೇರಳ ಸರಕಾರ ಈಗಾಗಲೇ ತೀರ್ಮಾ ನಿಸಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
176
Stephen K

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು