News Karnataka Kannada
Saturday, April 13 2024
Cricket
ಕರ್ನಾಟಕ

ಕೊಡಗಿನಲ್ಲಿ ಕೋವಿಡ್‍ಗೆ ಬಲಿಯಾದವರ ಸಂಖ್ಯೆ 12ಕ್ಕೆ ಏರಿಕೆ

Photo Credit :

ಕೊಡಗಿನಲ್ಲಿ ಕೋವಿಡ್‍ಗೆ ಬಲಿಯಾದವರ ಸಂಖ್ಯೆ 12ಕ್ಕೆ ಏರಿಕೆ

ಮಡಿಕೇರಿ: ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಬೆನ್ನ ಹಿಂದೆಯೇ ಕೊಡಗು ಜಿಲ್ಲೆಯಲ್ಲಿ ಸೋಂಕಿನಿಂದ ಮತ್ತೊಂದು ಸಾವು ಸಂಭವಿಸಿದೆ.

ಮಡಿಕೇರಿಯ ಭಗವತಿ ನಗರದ ನಿವಾಸಿ 58 ವರ್ಷದ ಪುರುಷರೊಬ್ಬರು ಶುಕ್ರವಾರ ಸಾವಿಗೀಡಾಗಿದ್ದು, ಇದರೊಂದಿಗೆ ಕೋವಿಡ್-19 ಸೋಂಕಿಗೆ ಬಲಿಯಾದವರ ಸಂಖ್ಯೆ 12ಕ್ಕೆ ಏರಿಕೆಯಾಗಿದೆ.

ಮಡಿಕೇರಿ ಭಗವತಿ ನಗರದ ಮಧುಮೇಹ ಮತ್ತು ಅಧಿಕ ರಕ್ತದೊತ್ತಡ ಆರೋಗ್ಯ ಸಮಸ್ಯೆಗಳಿದ್ದ 58 ವರ್ಷದ ಪುರುಷರೊಬ್ಬರಲ್ಲಿ ಆ.9ರಂದು ಸ್ವಲ್ಪ ತಲೆನೋವು ಕಾಣಿಸಿಕೊಂಡಿದ್ದು, ಮರುದಿನ ಜ್ವರ ಬಂದಿತ್ತು.  ಈ ಸಂಬಂಧ ಆ.11ರಂದು ಕೋವಿಡ್ ಪರೀಕ್ಷೆ ಮಾಡಿಸಿದ್ದು, ಬುಧವಾರ ಬಂದ ವರದಿಯಲ್ಲಿ ಅವರಿಗೆ ಸೋಂಕು ಇರುವುದು ದೃಢಪಟ್ಟಿದೆ.

ಈ ಸಂಬಂಧ ತಕ್ಷಣ ಅಂಬ್ಯುಲೆನ್ಸ್ ಮೂಲಕ ಅವರನ್ನು ಕೋವಿಡ್ ಆಸ್ಪತ್ರೆಗೆ ಕರೆತರಲಾಯಿತು.  ಬರುವಾಗಲೇ ಅವರಿಗೆ ಉಸಿರಾಟದ ತೊಂದರೆ ಇದ್ದ ಕಾರಣ ಅವರನ್ನು ನೇರವಾಗಿ ಐ.ಸಿ.ಯು ವಾರ್ಡ್ ನಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಹೃದಯ ಸ್ತಂಭನದಿಂದ ಶುಕ್ರವಾರ 11.15 ಗಂಟೆಗೆ ಸಾವಿಗೀಡಾದರು.

ಮೃತದೇಹದ ಅಂತ್ಯಕ್ರಿಯೆಯನ್ನು ಸರ್ಕಾರದ ಕೋವಿಡ್ ಮಾರ್ಗಸೂಚಿಯಂತೆ ನಡೆಸಲಾಗುವುದು ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ತಿಳಿಸಿದ್ದಾರೆ.

ಕೊಡಗಿನಲ್ಲಿ ಸೋಂಕಿತರ ಸಂಖ್ಯೆ ಸಾವಿರಕ್ಕೆ ಸಮೀಪ

ಜಿಲ್ಲೆಯಲ್ಲಿ ಶುಕ್ರವಾರ ಬೆಳಗ್ಗೆ 20   ಮತ್ತು ಮಧ್ಯಾಹ್ನ  23 ಸೇರಿದಂತೆ ಒಂದೇ ದಿನ 43 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 922 ಕ್ಕೆ ಏರಿಕೆಯಾಗಿದೆ. ಈ ಪೈಕಿ 579 ಮಂದಿ ಗುಣಮುಖರಾಗಿದ್ದಾರೆ. 332 ಸಕ್ರಿಯ ಪ್ರಕರಣಗಳಿದ್ದು, 12 ಮಂದಿ ಸಾವಿಗೀಡಾಗಿದ್ದಾರೆ. ಜಿಲ್ಲೆಯಲ್ಲಿನ ಕಂಟೈನ್‍ಮೆಂಟ್ ವಲಯಗಳ ಸಂಖ್ಯೆ 262 ಆಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು