News Karnataka Kannada
Thursday, April 25 2024
ಕರ್ನಾಟಕ

ಕೊಡಗಿನಲ್ಲಿ ಕೋವಿಡ್ ಸೋಂಕಿನಿಂದ ಮೃತರ ಸಂಖ್ಯೆ 20ಕ್ಕೆ ಏರಿಕೆ

Photo Credit :

ಕೊಡಗಿನಲ್ಲಿ ಕೋವಿಡ್ ಸೋಂಕಿನಿಂದ ಮೃತರ ಸಂಖ್ಯೆ 20ಕ್ಕೆ ಏರಿಕೆ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಕೋವಿಡ್ ಸೋಂಕಿನಿಂದ ಇಬ್ಬರು ಮೃತಪಟ್ಟಿದ್ದು, ಮೃತರ ಸಂಖ್ಯೆ 20ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ತಿಳಿಸಿದ್ದಾರೆ.

ಮಡಿಕೇರಿ ನಗರದ ಗಣಪತಿ ಬೀದಿ ನಿವಾಸಿ 53 ವರ್ಷದ ಪುರುಷರೊಬ್ಬರು ಹಿಂದಿನಿಂದಲೂ ಅಧಿಕ ರಕ್ತದೊತ್ತಡ, ಮಧುಮೇಹ ಮತ್ತು ಪಾಶ್ರ್ವವಾಯುವಿನಿಂದ ಬಳಲುತ್ತಿದ್ದರು. ತೀವ್ರ ಅಸ್ವಸ್ಥಗೊಂಡ ಅವರನ್ನು ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಯಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಮೊತ್ತೊಂದು ಪ್ರಕರಣದಲ್ಲಿ ಕುಶಾಲನಗರದ ಬೈಚನಹಳ್ಳಿ ನಿವಾಸಿ 60 ವರ್ಷದ ಮಹಿಳೆಯೊಬ್ಬರು ಮಧುಮೇಹ ಕಾಯಿಲೆಯಿಂದ ಬಳಲುತ್ತಿದ್ದರು. ರಾಪಿಡ್ ಆಂಟಿಜೆನ್ ಕಿಟ್ ಮೂಲಕ ಕೋವಿಡ್ ಪರೀಕ್ಷೆ ನಡೆಸಿದ್ದು, ಸೋಂಕು ಇರುವುದು ದೃಢಪಟ್ಟಿತ್ತು. ಇವರು ಮನೆಯಲ್ಲೇ ಮೃತಪಟ್ಟಿದ್ದು, ಮೃತದೇಹದ ಅಂತ್ಯ ಕ್ರಿಯೆಯನ್ನು ಕೋವಿಡ್ ಮಾರ್ಗಸೂಚಿಯಂತೆ ನಡೆಸಲಾಗಿದೆ.

37 ಪ್ರಕರಣ ಪತ್ತೆ

ಕೊಡಗು ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ 1379ಕ್ಕೆ ಏರಿಕೆಯಾಗಿದ್ದು, ಈ ಪೈಕಿ 1098 ಮಂದಿ ಗುಣಮುಖರಾಗಿದ್ದಾರೆ. 262 ಸಕ್ರಿಯ ಪ್ರಕರಣಗಳಿದ್ದು, 19 ಮಂದಿ ಸಾವಿಗೀಡಾಗಿದ್ದಾರೆ.  ಶನಿವಾರ ಬೆಳಗ್ಗೆ 23 ಹಾಗೂ ಮಧ್ಯಾಹ್ನ 14 ಸೇರಿದಂತೆ  37 ಹೊಸ ಪ್ರಕರಣಗಳು ದೃಢಪಟಿರುವುದಾಗಿ ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಮಕ್ಕಳಲ್ಲಿ ಸೋಂಕು

ವೀರಾಜಪೇಟೆ ನೆಹರು ನಗರದ ಮಸೀದಿ ಬಳಿಯ 7 ಮತ್ತು 2 ವರ್ಷದ ಬಾಲಕನಲ್ಲಿ, ನಿಸರ್ಗ ಲೇಔಟಿನ 8 ವರ್ಷದ ಬಾಲಕಿ ಹಾಗೂ ಮಡಿಕೇರಿ ನಗರದ ದೇಚೂರಿನ ಆಂಜನೇಯ ಕಟ್ಟೆ ಬಳಿಯ 13 ವರ್ಷದ ಬಾಲಕಿಯಲ್ಲಿ, ಸೋಮವಾರಪೇಟೆಯ ತೋಳೂರುಶೆಟ್ಟಳ್ಳಿ ಗ್ರಾಮದ 16 ವರ್ಷದ ಬಾಲಕನಲ್ಲಿ ಸೋಂಕು ಇರುವುದು ದೃಢಪಟ್ಟಿದೆ. 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು