News Karnataka Kannada
Saturday, April 13 2024
Cricket
ಕರ್ನಾಟಕ

ಕೊಡಗಿನಲ್ಲಿ ಕೋವಿಡ್-19 ಸೋಂಕಿತರ ಸಾವಿನ ಸಂಖ್ಯೆ 29ಕ್ಕೆ ಏರಿಕೆ

Photo Credit :

ಕೊಡಗಿನಲ್ಲಿ ಕೋವಿಡ್-19 ಸೋಂಕಿತರ ಸಾವಿನ ಸಂಖ್ಯೆ 29ಕ್ಕೆ ಏರಿಕೆ

ಮಡಿಕೇರಿ: ಮಡಿಕೇರಿ ತಾಲ್ಲೂಕಿನ ಹೊದವಾಡ ಗ್ರಾಮದ 58 ವರ್ಷದ ಪುರುಷರೊಬ್ಬರು ಕೋವಿಡ್ ಸೋಂಕಿಗೆ ಸಿಲುಕಿ ಮೃತಪಟ್ಟಿದ್ದಾರೆ.

ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 2097 ಆಗಿದ್ದು, ಸಾವಿಗೀಡಾದವರ ಸಂಖ್ಯೆ 29ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ತಿಳಿಸಿದ್ದಾರೆ.

ಹೊದವಾಡ ಗ್ರಾಮದ ನಿವಾಸಿ, 58 ವರ್ಷದ ಪುರುಷರೊಬ್ಬರು ಸೆ.14 ತೀವ್ರ ವಾಂತಿ ಮತ್ತು ಸುಸ್ತು ಎಂದು ಮಡಿಕೇರಿಯ ಕೋವಿಡ್ ಆಸ್ಪತ್ರೆಗೆ ಚಿಕಿತ್ಸೆಗೆ ಬಂದಿದ್ದು, ಅವರಿಗೆ ರ್ಯಾಪಿಡ್ ಆಂಟಿಜೆನ್ ಕಿಟ್ ಮೂಲಕ ಕೋವಿಡ್ ಪರೀಕ್ಷೆ ನಡೆಸಲಾಗಿ, ಕೋವಿಡ್ ಸೋಂಕು ದೃಢಪಟ್ಟಿತ್ತು.

ಅವರಿಗೆ ಜಿಲ್ಲಾ ಕೋವಿಡ್ ಆಸ್ಪತ್ರೆಯ ಐ.ಸಿ.ಯು ನಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಮಂಗಳವಾರ  ರಾತ್ರಿ 8.50 ಕ್ಕೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಜಿಲ್ಲೆಯಲ್ಲಿ ಬುಧವಾರ ಮಧ್ಯಾಹ್ನ 22 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿವೆ.

ಇದರೊಂದಿಗೆ ಜಿಲ್ಲೆಯಲ್ಲಿನ ಒಟ್ಟು ಕೋವಿಡ್-19 ಪ್ರಕರಣಗಳ ಸಂಖ್ಯೆ 2097ಕ್ಕೆ ಏರಿಕೆಯಾಗಿದ್ದು, ಈ ಪೈಕಿ 1686 ಮಂದಿ ಗುಣಮುಖರಾಗಿದ್ದಾರೆ. 383 ಸಕ್ರಿಯ ಪ್ರಕರಣಗಳಿದ್ದು, 29 ಮಂದಿ ಸಾವಿಗೀಡಾಗಿದ್ದಾರೆ. ಜಿಲ್ಲೆಯಲ್ಲಿನ ಕಂಟೈನ್‍ಮೆಂಟ್ ವಲಯಗಳ ಸಂಖ್ಯೆ 343 ಆಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಮಾಹಿತಿ ನೀಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು