News Karnataka Kannada
Wednesday, April 24 2024
Cricket
ಕರ್ನಾಟಕ

ಕೊಡಗಿನಲ್ಲಿ ಸೋಂಕಿತರ ಸಂಖ್ಯೆ 131 ಕ್ಕೆ ಏರಿಕೆ

Photo Credit :

ಕೊಡಗಿನಲ್ಲಿ ಸೋಂಕಿತರ ಸಂಖ್ಯೆ 131 ಕ್ಕೆ ಏರಿಕೆ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಇಂದು 9 ಮಂದಿಯಲ್ಲಿ ಕೊರೋನಾ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 131ಕ್ಕೆ ಏರಿಕೆಯಾಗಿದೆ.

ವಿರಾಜಪೇಟೆ ತಾಲ್ಲೂಕಿನ ತಿತಿಮತಿಯಲ್ಲಿ ಈ ಹಿಂದೆ ಸೋಂಕು ದೃಢಪಟ್ಟಿದ್ದ ವ್ಯಕ್ತಿಯ ಪ್ರಾಥಮಿಕ ಸಂಪರ್ಕವಾದ 65 ವರ್ಷದ ಮಹಿಳೆ, 32 ವರ್ಷದ ಪುರುಷ, 45 ವರ್ಷದ ಪುರುಷ , 35 ವರ್ಷದ ಮಹಿಳೆ, 20 ವರ್ಷದ ಪುರುಷ, 19 ವರ್ಷದ ಹುಡುಗ ಮತ್ತು 45 ವರ್ಷದ ಪುರುಷರೊಬ್ಬರಿಗೆ ಸೋಂಕು ದೃಢಪಟ್ಟಿದೆ.

ವಿರಾಜಪೇಟೆ ತಾಲ್ಲೂಕಿನ ಅಪ್ಪಯ್ಯ ಸ್ವಾಮಿ ರಸ್ತೆಯ ನಿವಾಸಿ ಜ್ವರ ಲಕ್ಷಣಗಳಿದ್ದ 55 ವರ್ಷದ ಮಹಿಳೆಯೊಬ್ಬರಿಗೆ ಸೋಂಕು ದೃಢಪಟ್ಟಿದೆ.  ಇವರು ಪ್ರಸ್ತುತ ವಿರಾಜಪೇಟೆಯ ಗೋಣಿಕೊಪ್ಪದಲ್ಲಿ ವಾಸವಿದ್ದಾರೆ.

ವಿರಾಜಪೇಟೆ ತಾಲ್ಲೂಕಿನ ಕುಟ್ಟ ಗ್ರಾಮದ ಜ್ವರ ಲಕ್ಷಣಗಳಿದ್ದ 34 ವರ್ಷದ ಪುರುಷರೊಬ್ಬರಿಗೆ ಸೋಂಕು ದೃಢಪಟ್ಟಿದೆ.

ಒಟ್ಟು ಸೋಂಕಿತರ ಸಂಖ್ಯೆ 131 ಆಗಿದ್ದು, 18 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಒಬ್ಬರು ಮೃತಪಟ್ಟಿದ್ದು, ಉಳಿದ 112 ಮಂದಿಗೆ ಮಡಿಕೇರಿಯ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಒಟ್ಟು 53 ನಿಯಂತ್ರಿತ ಪ್ರದೇಶಗಳ ಮೇಲೆ ನಿಗಾ ಇಡಲಾಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು