News Karnataka Kannada
Tuesday, April 23 2024
Cricket
ಕರ್ನಾಟಕ

ಕೊಡಗಿನಲ್ಲಿ ಸೋಂಕಿತರ ಸಂಖ್ಯೆ 225ಕ್ಕೆ ಏರಿಕೆ

Photo Credit :

ಕೊಡಗಿನಲ್ಲಿ ಸೋಂಕಿತರ ಸಂಖ್ಯೆ 225ಕ್ಕೆ ಏರಿಕೆ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಬುಧವಾರ ಮತ್ತೆ ಎಂಟು ಮಂದಿಯಲ್ಲಿ  ಕೊರೋನಾ ಸೋಂಕು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 225ಕ್ಕೆ ಏರಿಕೆಯಾಗಿದೆ.

ವೀರಾಜಪೇಟೆ ತಾಲೂಕಿನ ಹುಂಡಿ ಗ್ರಾಮದ ಸೋಂಕಿತನ ಪ್ರಾಥಮಿಕ ಸಂಪರ್ಕದಲ್ಲಿದ್ದ ಬಾಡಗ ಬಾಣಂಗಾಲದ 19 ವರ್ಷದ ಮಹಿಳೆ, ಅಂತರ ಜಿಲ್ಲಾ ಪ್ರಯಾಣದ ಹಿನ್ನೆಲೆ ಇರುವ ವೀರಾಜಪೇಟೆ ತಾಲೂಕಿನ ನಿರ್ಮಲಗಿರಿ, ಹೆಗ್ಗಳ ಗ್ರಾಮದ ನಿವಾಸಿಯಾದ 45 ವರ್ಷದ ಮಹಿಳೆ, ಬೆಂಗಳೂರು ಪ್ರಯಾಣದ ಹಿನ್ನೆಲೆ ಇರುವ ಆರ್ಜಿ ಗ್ರಾಮದ ಪೆರುಂಬಾಡಿಯ ನಿವಾಸಿ, 43 ವರ್ಷದ ಪುರುಷನಲ್ಲಿ ಸೋಂಕು ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.

ಮೈಸೂರಿನ ಸೋಂಕಿತನ ಪ್ರಾಥಮಿಕ ಸಂಪರ್ಕದಲ್ಲಿದ್ದ ಸೋಮವಾರಪೇಟೆ ತಾಲೂಕು ನಂಜರಾಯಪಟ್ಟಣ ರಸಲ್ ಪುರ ಬೆಟ್ಟಗೇರಿಯ 65 ವರ್ಷದ ಪುರುಷ,  ನೆಲ್ಲಿಹುದಿಕೇರಿಯಲ್ಲಿ ಈ ಹಿಂದೆ ಸೋಂಕು ದೃಢಪಟ್ಟಿದ್ದ ವ್ಯಕ್ತಿಯ ಪ್ರಾಥಮಿಕ ಸಂಪರ್ಕವಾದ 7 ವರ್ಷದ ಬಾಲಕನಿಗೆ, ಕುಶಾಲನಗರದ ಬಲಮುರಿ ದೇವಸ್ಥಾನದ ಬಳಿ ಈ ಹಿಂದೆ ಸೋಂಕು ದೃಢಪಟ್ಟಿದ್ದ ವ್ಯಕ್ತಿಯ ಪ್ರಾಥಮಿಕ ಸಂಪರ್ಕವಾದ  37 ವರ್ಷದ ಪುರುಷನಲ್ಲಿ ಕೋವಿಡ್-19 ಸೋಮಕು ಇರುವುದು ಖಚಿತವಾಗಿದೆ ಎಂದು ಅವರು ಹೇಳಿದ್ದಾರೆ.

ಪ್ರಸ್ತುತ ಮಡಿಕೇರಿ ನಗರದ ಕಾನ್ವೆಂಟ್ ರಸ್ತೆಯಲ್ಲಿ ವಾಸವಿರುವ ಈ ಹಿಂದೆ ಸೋಂಕು ದೃಢಪಟ್ಟಿದ್ದ ವ್ಯಕ್ತಿಯ ಪ್ರಾಥಮಿಕ ಸಂಪರ್ಕವಾದ  ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ 45 ವರ್ಷದ ಪುರುಷ, ನಗರದ ಮುನೀಶ್ವರ ದೇವಸ್ಥಾನದ ಬಳಿಯ 36 ವರ್ಷದ ಪುರುಷ  ಆರೋಗ್ಯ ಕಾರ್ಯಕರ್ತರಲ್ಲಿ ಸೋಂಕು ದೃಢಪಟ್ಟಿರುವುದಾಗಿ ಅವರು ತಿಳಿಸಿದ್ದಾರೆ.

ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 225ಕ್ಕೆ ಏರಿಕೆಯಾಗಿದ್ದು, ಒಟ್ಟು 87 ಮಂದಿ ಬಿಡುಗಡೆಯಾಗಿದ್ದಾರೆ. ಮೂವರು ಮೃತಪಟ್ಟಿದ್ದು,  135 ಪ್ರಕರಣಗಳು ಸಕ್ರಿಯವಾಗಿವೆ.  

ಜಿಲ್ಲೆಯಲ್ಲಿ ಬುಧವಾರ ಹೊಸದಾಗಿ ನಂಜರಾಯಪಟ್ಟಣ ವ್ಯಾಪ್ತಿಯ ರಸಲ್‍ಪುರ ಬೆಟ್ಟಗೇರಿ, ವೀರಾಜಪೇಟೆ ತಾಲೂಕಿನ ಹೆಗ್ಗಳದ ನಿರ್ಮಲಗಿರಿ ಹಾಗೂ ಪೆರುಂಬಾಡಿಯ ಆರ್ಜಿ ಗ್ರಾಮ, ಮಡಿಕೇರಿಯ ಕಾನ್ವೆಂಟ್ ರಸ್ತೆಯಲ್ಲಿ ಹೊಸದಾಗಿ ನಿಯಂತ್ರಿತ ಪ್ರದೇಶಗಳನ್ನು ತೆರೆಯಲಾಗಿದ್ದು, ಇದರೊಂದಿಗೆ ನಿಯಂತ್ರಿತ ಪ್ರದೇಶಗಳ ಸಂಖ್ಯೆ  100ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು