News Karnataka Kannada
Tuesday, April 16 2024
Cricket
ಕರ್ನಾಟಕ

ಕೊಡಗಿನ ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ 78 ಕೋಟಿ ರೂ.

Photo Credit :

ಕೊಡಗಿನ ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ 78 ಕೋಟಿ ರೂ.

ಮಡಿಕೇರಿ: ಪ್ರವಾಸೋದ್ಯಮದ ಅಭಿವೃದ್ಧಿಗೆ ರಸ್ತೆಗಳ ಅಭಿವೃದ್ಧಿ ಅತಿ ಮುಖ್ಯವಾಗಿದ್ದು, ಜಿಲ್ಲೆಯಲ್ಲಿ ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆಯಡಿ ಒಟ್ಟು 78 ಕೋಟಿ ರೂ.  ವೆಚ್ಚದಲ್ಲಿ ಗ್ರಾಮೀಣ ರಸ್ತೆಗಳು ಅಭಿವೃದ್ಧಿಯಾಗಲಿವೆ ಎಂದು ಕೊಡಗು-ಮೈಸೂರು ಕ್ಷೇತ್ರದ ಸಂಸದ ಪ್ರತಾಪ್‍ಸಿಂಹ ಹೇಳಿದರು.

ಸೋಮವಾರಪೇಟೆಯಲಿ ಮಾತನಾಡಿದ ಅವರು,  ಮಡಿಕೇರಿ-ಸಂಪಾಜೆ ರಸ್ತೆಯಲ್ಲಿ ಭೂ ಕುಸಿತದಿಂದ ಹಾನಿಗೊಳಗಾದ ಸ್ಥಳಗಳಲ್ಲಿ 59 ಕೋಟಿ ರೂ. ವೆಚ್ಚದಲ್ಲಿ ತಡೆಗೋಡೆ ನಿರ್ಮಾಣ ಕಾಮಗಾರಿ ಶೀಘ್ರದಲ್ಲೇ ಆರಂಭವಾಗಲಿದೆ. ಮಡಿಕೇರಿ-ಕುಶಾಲನಗರ ರಸ್ತೆಯು 30 ಕೋಟಿ ರೂ. ವೆಚ್ಚದಲ್ಲಿ ಡಾಮರೀಕರಣಗೊಳ್ಳಲಿದೆ ಎಂದು ತಿಳಿಸಿದರು.

ಚೆನ್ನರಾಯಪಟ್ಟಣ-ಮಾಕುಟ್ಟ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಡಿಪಿಆರ್ ಹಂತದಲ್ಲಿದ್ದು, ಶೀಘ್ರವೇ ಅನುಮೋದನೆ ದೊರೆಯಲಿದೆ. ಆ ಮೂಲಕ ಜಿಲ್ಲೆಯ ಜನತೆಗೆ ಹೆಚ್ಚಿನ ಅನುಕೂಲವಾಗಲಿದೆ ಎಂದರು.

ಮೈಸೂರು ಮತ್ತು ಕುಶಾಲನಗರ ನಡುವಿನ ರೈಲ್ವೆ ಕಾಮಗಾರಿ ಕೂಡ ಶೀಘ್ರದಲ್ಲಿಯೇ ಆರಂಭಗೊಳ್ಳಲಿದ್ದು, 1854 ಕೋಟಿ ರೂ.ವೆಚ್ಚದಲ್ಲಿ ಕುಶಾಲನಗರದ ತನಕ ರೈಲ್ವೆ ಲೈನ್ ಬರಲಿದೆ.   ಮೈಸೂರಿನಿಂದ ಗುಡ್ಡೆಹೊಸೂರು ತನಕ 3120 ಕೋಟಿ ರೂ.ವೆಚ್ಚದ 4 ಲೈನ್ ಹೈವೆ ಕಾಮಗಾರಿಯ ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದು ಅವರು ಮಾಹಿತಿ ನೀಡಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು