News Karnataka Kannada
Friday, April 19 2024
Cricket
ಕರ್ನಾಟಕ

ಕೊಡಗು: ಕೋವಿಡ್‌ನಿಂದಾಗಿ ಬಿ.ಎಸ್.ಎಫ್. ಯೋಧ ನಿಧನ

Photo Credit :

ಕೊಡಗು: ಕೋವಿಡ್‌ನಿಂದಾಗಿ ಬಿ.ಎಸ್.ಎಫ್. ಯೋಧ ನಿಧನ

ಪೊನ್ನಂಪೇಟೆ: ಕರ್ತವ್ಯದಲ್ಲಿದ್ದಾಗಲೇ ಕೋವಿಡ್ ಬಾಧಿಸಿದ ಪರಿಣಾಮ ಬಹು ಅಂಗಾಂಗ ವೈಫಲ್ಯದೊಂದಿಗೆ ಕೊಡಗು ಜಿಲ್ಲೆಯ ಬಿ.ಎಸ್.ಎಫ್. ಯೋಧರೊಬ್ಬರು ಕೇರಳದ ತಿರುವನಂತಪುರಂನಲ್ಲಿ ಗುರುವಾರ ಬೆಳಿಗ್ಗೆ ನಿಧನರಾಗಿದ್ದಾರೆ.

ಕೇರಳದ ತಿರುವನಂತಪುರಂನಲ್ಲಿರುವ ಬಿ. ಎಸ್.ಎಫ್. ಸೆಕ್ಟರ್ ಹೆಡ್ ಕ್ವಾರ್ಟರ್ ನಲ್ಲಿ ಸೇವೆ ಸಲ್ಲಿಸುತ್ತಿದ್ದ, ವಿರಾಜಪೇಟೆ ಸಮೀಪದ ನಲ್ವತ್ತೋಕ್ಲು ಗ್ರಾಮದವರಾದ ದುದ್ದಿಯಂಡ ಎ.ಮಜೀದ್ ಎಂಬುವರೇ ಮಹಾಮಾರಿ ಸಾಂಕ್ರಾಮಿಕ ಸೋಂಕಿಗೆ ಬಲಿಯಾದ ಯೋಧರಾಗಿದ್ದಾರೆ. ಅವರಿಗೆ 50 ವರ್ಷ ಪ್ರಾಯವಾಗಿತ್ತು.

ದೇಶದ ವಿವಿಧ ಭಾಗಗಳಲ್ಲಿ ಕರ್ತವ್ಯ ನಿರ್ವಹಿಸಿ ಕಳೆದ 4 ವರ್ಷಗಳಿಂದ ತಿರುವನಂತಪುರಂನಲ್ಲಿ ಸೇವೆ ಸಲ್ಲಿಸುತ್ತಿದ್ದ ಮಜೀದ್ ಅವರು, ಕಳೆದ ಆಗಸ್ಟ್ ತಿಂಗಳ ಅಂತ್ಯದವರೆಗೂ ಸಕ್ರಿಯವಾಗಿ ಕಾರ್ಯನಿರ್ವಹಿಸಿದ್ದಾರೆ. ಇದೇ ತಿಂಗಳ ಮೊದಲ ವಾರದಲ್ಲಿ ದಿಡೀರನೆ ಇವರಿಗೆ ಕೋವಿಡ್-19 ಸೋಂಕು ಧೃಡಪಟ್ಟ ಕಾರಣ, ತಿರುವನಂತಪುರಂನ ಮೆಡಿಕಲ್ ಕಾಲೇಜಿನಲ್ಲಿರುವ ಕೋವಿಡ್ ವಿಶೇಷ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ತಜ್ಞ ವೈದ್ಯರ ತಂಡ ನಿರಂತರವಾಗಿ ನೀಡಿದ ಚಿಕಿತ್ಸೆ ಆರಂಭದಲ್ಲಿ ಫಲ ಕಾಣದಿದ್ದಾಗ ಪ್ಲಾಸ್ಮ ತೆರಪಿ ಮೂಲಕ ಚಿಕಿತ್ಸೆ ನೀಡಲಾಯಿತು. ಇದರಿಂದ ಚೇತರಿಸಿಕೊಳ್ಳುವ ಹಂತದಲ್ಲಿದ್ದ ಮಜೀದ್ ಅವರಿಗೆ ತಮ್ಮ ಬಹು ಅಂಗಾಂಗ ವೈಫಲ್ಯ ಕಾಡತೊಡಗಿತು. ತಮ್ಮ ಎರಡೂ ಕಿಡ್ನಿ ಮತ್ತು ಹೃದಯ ಸಂಬಂಧಿ ಕಾಯಿಲೆ ವೃದ್ಧಿಸಿದ ಪರಿಣಾಮ ಕೋವಿಡ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಜಿದ್ ಅವರು, ಯಾವುದೇ ಉನ್ನತ ಮಟ್ಟದ ಚಿಕಿತ್ಸೆಗೂ ಸ್ಪಂದಿಸದೆ ಗುರುವಾರ ಬೆಳಿಗ್ಗೆ 7 ಗಂಟೆಗೆ ತಿರುವನಂತಪುರಂ ಮೆಡಿಕಲ್ ಕಾಲೇಜಿನ ಕೋವಿಡ್ ಆಸ್ಪತ್ರೆಯಲ್ಲಿ ನಿಧನರಾದರು.

ಮೃತ ಯೋಧ ಮಜೀದ್ ಅವರ ಮರಣವನ್ನು ವೈದ್ಯರು ಖಚಿತಪಡಿಸಿದ ನಂತರ ಪಾರ್ಥಿವ ಶರೀರವನ್ನು ಹುಟ್ಟೂರಿಗೆ ಕೊಂಡೊಯ್ಯುವ ಉದ್ದೇಶದಿಂದ ಮತ್ತೊಮ್ಮೆ ಕೋವಿಡ್ ಆಂಟಿಜೆನ್ ಟೆಸ್ಟಿಗೆ ಒಳಪಡಿಸಲಾಯಿತು. ಈ ಸಂದರ್ಭದಲ್ಲೂ ಅದರ ಫಲಿತಾಂಶ ಪಾಸಿಟಿವ್ ಬಂದ ಕಾರಣ ಮಜೀದ್ ಅವರ ಅಂತ್ಯಕ್ರಿಯೆಯನ್ನು ತಿರುವನಂತಪುರಂನಲ್ಲೆ ನಡೆಸಲು ಬಿ.ಎಸ್.ಎಫ್. ಅಧಿಕಾರಿಗಳು ನಿರ್ಧರಿಸಿದರು. ಇದರಿಂದ ಅವರ ಪಾರ್ಥಿವ ಶರೀರ ಹುಟ್ಟೂರಿಗೆ ಬರಬಹುದೆಂಬ ಗ್ರಾಮಸ್ಥರ ನಿರೀಕ್ಷೆ ಹುಸಿಯಾಯಿತು.

ಮೃತ ಮಜೀದ್ ಅವರ ಹುಟ್ಟೂರು ಜಮಾಅತ್ ಆದ ನಲ್ವತ್ತೋಕ್ಲು ಜುಮಾ ಮಸೀದಿಯ ಆಡಳಿತ ಮಂಡಳಿಯ ನಿರಾಕ್ಷೇಪದಂತೆ ಅವರ ಅಂತ್ಯಕ್ರಿಯೆ ತಿರುವನಂತಪುರಂನ ಭೀಮಾ ಮಸೀದಿಯ ಖಬರ್ ಸ್ಥಾನದಲ್ಲಿ ಸಕಲ ಸರಕಾರಿ ಗೌರವಗಳೊಂದಿಗೆ ಗುರುವಾರ ಸಂಜೆ ನಡೆಯಿತು. ಮೃತ್ತ ಯೋಧ ಮಜೀದ್ ಅವರ ಅಂತ್ಯಕ್ರಿಯೆ ಸಂದರ್ಭದಲ್ಲಿ ಅವರ ಹಿರಿಯ ಪುತ್ರ ಮೊಹಮ್ಮದ್ ರಿಶಾನ್, ಹಿರಿಯ ಸಹೋದರ ಡಿ.ಎ. ಉಮ್ಮರ್ ಮತ್ತು ಅಕ್ಕನ ಮಗ ಸಫಾನ್ ಅವರು ಪಾಲ್ಗೊಂಡು ವಿಧಿವಿಧಾನ ನೆರವೇರಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
149

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು